IPL 2023: ಕೊಲ್ಕತ್ತಾ ನೈಟ್ ರೈಡರ್ಸ್‌ಗೆ ಗುಜರಾತ್ ಟೈಟನ್ಸ್ ಅಗ್ನಿ ಪರೀಕ್ಷೆ: ಸಂಭಾವ್ಯ XI, ಪಿಚ್ ರಿಪೋರ್ಟ್
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಏಪ್ರಿಲ್ 29 ಶನಿವಾರದಂದು ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿದ್ದು ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗುಜರಾತ್ ಟೈಟನ್ಸ ಎದುರಿಸಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ಪಂದ್ಯ ಈ ಬಾರಿಯ ಐಪಿಎಲ್‌ನ 29ನೇ ಪಂದ್ಯವಾಗಿರಲಿದೆ.
ಸತತ ಸೋಲಿನಿಂದ ಕಂಗೆಟ್ಟದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಳೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಪಡೆದ 21 ರನ್‌ಗಳ ಅಂತರದ ಗೆಲುವಿನಿಂದ ಹೊರ ಹುರುಪು ಗಳಿಸಿಕೊಂಡಿದೆ. ಬೆಂಗಳೂರಿನಲ್ಲೇ ನಡೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಎಲ್ಲಾ ವಿಭಾಗದಲ್ಲಿಯೂ ಮೇಲುಗೈ ಸಾಧಿಸಿದ ಕೆಕೆಆರ್ ತಂಡ ಅದ್ಭುತ ಗೆಲುವು ಸಾಧಿಸಿತ್ತು. ಹೀಗಾಗಿ ಆಡಿರುವ 8 ಪಂದ್ಯಗಳಲ್ಲಿ ಕೆಕೆಆರ್ ತಂಡ 3 ಗೆಲುವು ಸಾಧಿಸಿದ್ದು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಮತ್ತೊಂದೆಡೆ ಹಾಲಿ ಚಾಂಪಿಯನ್ ಗುಜರಾತ್ ತಂಡ ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅಮೋಘ 55 ರನ್‌ಗಳ ಅಂತರದ ಗೆಲುವು ಸಾಧಿಸಿ ಮಿಂಚಿದೆ. ಆಡಿರುವ 7 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಹತ್ತು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರುವ ಅವಕಾಶ ಜಿಟಿ ಮುಂದಿದೆ.
ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ವಿರುದ್ಧದ ಈ ಪಂದ್ಯ ಕೊಲ್ಕತ್ತಾ್ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಏಪ್ರಿಲ್ 29 ಶನಿವಾರ ಮಧ್ಯಾಹ್ನ ಆಯೋಜನೆಯಾಗಲಿದೆ. ಮಧ್ಯಾಹ್ನ 3:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 3 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣ ಬ್ಯಾಟರ್‌ಗಳಿಗೆ ರನ್‌ಗಳಿಸಲು ಪೂರಕವಾದ ಅಂಶಗಳನ್ನು ಹೊಂದಿದೆ. ಹೀಗಾಗಿ ಮತ್ತೊಂದು ಹೈಸ್ಕೋರಿಂಗ್ ಪಂದ್ಯವಾಗುವುದರಲ್ಲಿ ಅನುಮಾನವಿಲ್ಲ. ಈ ಮೈದಾನದಲ್ಲಿ ನಡೆದ ಹಿಂದಿನ ಪಂದ್ಯದಲ್ಲಿ ಎರಡು ತಂಡಗಳು ಕೂಡ 200ರ ಗಡಿದಾಟಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಚೆಂಡು ನೇರವಾಗಿ ಬ್ಯಾಟ್‌ಗೆ ಬರಲಿದ್ದು ಎರಡನೇ ಇನ್ನಿಂಗ್ಸ್‌ನಲ್ಲಿ ಸ್ಪಿನ್ನರ್‌ಗಳಿಗೆ ಉತ್ತಮ ನೆರವಿ ದೊರೆಯವ ನಿರೀಕ್ಷೆಯಿದೆ.
ಹವಾಮಾಣ ವರದಿ: ಕೊಲ್ಕತ್ತಾದಲ್ಲಿ ಮಳೆಯಾಗುವ ಯಾವುದೇ ಸಾಧ್ಯಗಳು ಇಲ್ಲವಾದ್ದರಿಂದ ಪಂದ್ಯ ನಿರಾತಂಕವಾಗಿ ನಡೆಯಲಿದೆ. 29-37 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರುವ ನಿರೀಕ್ಷೆಯಿದೆ.
ಸಂಭಾವ್ಯ ಆಡುವ ಬಳಗ
ಕೊಲ್ಕತ್ತಾ ನೈಟ್ ರೈಡರ್ಸ್: ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಡೇವಿಡ್ ವೈಸ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications