For Quick Alerts
ALLOW NOTIFICATIONS  
For Daily Alerts
 

IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮತ್ತೆ ಸೆಣೆಸಾಟಕ್ಕಿಳಿದ ಸನ್‌ರೈಸರ್ಸ್: ಸಂಭಾವ್ಯ XI, ಪಿಚ್ ರಿಪೋರ್ಟ್

ಐಪಿಎಲ್‌ನಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಇದು ಈ ಬಾರಿಯ ಐಪಿಎಲ್ ಆವೃತ್ತಿಯ 40ನೇ ಪಂದ್ಯವಾಗಿರಲಿದ್ದು ಅಂಕಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನಗಳಲ್ಲಿರುವ ತಂಡಗಳ ಹೋರಾಟವಾಗಿದೆ. ಈ ಎರಡು ತಂಡಗಳು ಕಳೆದ ಸೋಮವಾರವಷ್ಟೇ ಮುಖಾಮುಖಿಯಾಗಿದ್ದು ಮತ್ತೊಮ್ಮೆ ಸೆಣೆಸಾಟಕ್ಕಿಳಿದಿವೆ. ಈ ಬಾರಿ ಡಿಸಿ ಆತಿಥ್ಯ ವಹಿಸಿಕೊಂಡಿದ್ದು ಅರುಣ್‌ಜೇಟ್ಲೀ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಯಾಗಿದೆ.

ಎರಡು ತಂಡಗಳು ಕೂಡ ಈ ಬಾರಿಯ ಐಪಿಎಲ್‌ನಲ್ಲಿ ಅತ್ಯಂತ ನೀರಸ ಪ್ರದರ್ಶನ ನಿಡಿದ್ದು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭದ ಸತತ ಐದು ಪಂದ್ಯಗಳನ್ನು ಸೋಲು ಅನುಭವಿಸಿದ ಬಳಿಕ ನಂತರ ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡವನ್ನು ಅದರದ್ದೇ ತವರಿನಲ್ಲಿ ಸೋಲಿಸಿದ ಪರಿಣಾಮವಾಗಿ ಈಗ ತನ್ನ ತವರಿನಲ್ಲಿಯೂ ಗೆದ್ದು ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದೆ.

IPL 2023, Match 40, DC vs SRH Preview, Predicted Playing 11, Pitch Report

ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೂಡ ಆಡಿರುವ 7 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಪಂದ್ಯ ಮಾತ್ರ. ಹೀಗಾಗಿ ಎಸ್‌ಆರ್‌ಹೆಚ್ ತಂಡದ ಅಂಕಪಟ್ಟಿಯಲ್ಲಿ ಕೇವಲ 4 ಅಂಕಗಳು ಮಾತ್ರವೇ ಇದೆ. ಇದೀಗ ತಂಡದ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಗಾಯದ ಕಾರಣದಿಂದಾಗಿ ತಂಡದಿಂದ ಹೊರಬಿದ್ದಿರುವುದು ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆಯಾದಂತಾಗಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ವಿರುದ್ಧದ ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಏಪ್ರಿಲ್ 29 ಶನಿವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ನಿಧಾನಗತಿಯ ಸ್ವಭಾವ ಹೊಂದಿರುವ ಕಾರಣ ಬ್ಯಾಟರ್‌ಗಳಿಗೆ ಇಲ್ಲಿ ಸವಾಲೆನಿಸಲಿದೆ. ಆರಂಭದಲ್ಲಿ ಬ್ಯಾಟರ್‌ಗಳಿಗೆ ನೆರವು ನೀಡಿದರೂ ಬಳಿಕ ಸ್ಪಿನ್ನರ್‌ಗಳು ಇಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ. ಇನ್ನು ಸೆಕೆಂಡ್ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಅತ್ಯಂತ ಕಠಿಣವಾಗಿರಲಿದೆ. ಹೀಗಾಗಿ ಟಾಸ್ ಗೆದ್ದ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವುದು ನಿಶ್ಷಿತ.

ಹವಾಮಾನ ವರದಿ: ದೆಹಲಿಯಲ್ಲಿ ಶನಿವಾರ ಮೋಡಕವಿದ ವಾತಾವರಣದಿಂದ ಕೂಡಿರಲಿದೆ. ಆದರೆ ಮಳೆಯಾಗುವ ಸಾಧ್ಯತೆ ಬಹಳ ಕಡಿಮೆಯಿದೆ. 24-33 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರುವ ಸಾಧ್ಯತೆಯಿದೆ

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಅಕ್ಷರ್ ಪಟೇಲ್, ಅಮನ್ ಹಕೀಮ್ ಖಾನ್, ರಿಪಾಲ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನೋರ್ಟ್ಜೆ, ಇಶಾಂತ್ ಶರ್ಮಾ ಮತ್ತು ಮುಖೇಶ್ ಕುಮಾರ್.

ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಮಯಾಂಕ್ ದಾಗರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್ ಮತ್ತು ಟಿ ನಟರಾಜನ್.

Story first published: Friday, April 28, 2023, 15:45 [IST]
Other articles published on Apr 28, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+