Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ XI

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಯಲ್ಲಿ ಮಂಗಳವಾರ ಗುಜರಾತ್ ಟೈಟನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದು ಈ ಬಾರಿಯ ಐಪಿಎಲ್‌ನ 44ನೇ ಪಂದ್ಯವಾಗಿದ್ದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ಆಯೋಜನೆಯಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಪಾಲಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದ್ದು ಹಾಲಿ ಚಾಂಪಿಯನ್ನರ ಸವಾಲನ್ನು ಯಾವ ರೀತಿಯಾಗಿ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದೆ. ಆಡಿರುವ 8 ಪಂದ್ಯಗಳ ಪೈಕಿ ಆರು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಜಿಟಿ 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರಸ್ಥಾದಲ್ಲಿದೆ. ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಭರ್ಜರಿ 7 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿ ಆತ್ಮವಿಶ್ವಾಸದಲ್ಲಿದೆ ಗುಜರಾತ್ ಟೈಟನ್ಸ್ ತಂಡ

IPL 2023, Match 44, GT vs DC, Predicted Playing 11, Pitch Report

ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಥಿತಿ ಭಿನ್ನವಾಗಿದೆ. ಸತತ ಐದು ಪಂದ್ಯಗಳಲ್ಲಿ ಸೋಲು ಕಂಡ ಬಳಿಕ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಡಿಸಿ ತಂಡ ಗೆಲುವಿನ ಲಯವನ್ನು ಮುಂದುವರಿಸಲು ವಿಫಲವಾಯಿತು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಉತ್ತಮ ಹೋರಾಟನ ನಡೆಸಿಯೂ ಡೆಲ್ಲಿ ಕ್ಯಾಪಿಟಲ್ಸ್ ಸೋಲು ಕಾಣುವಂತಾಯಿತು. ಆಡಿರುವ 8 ಪಂದ್ಯಗಳಲ್ಲಿ ಕೇವಲ ಎರಡು ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ವಿರುದ್ಧದ ಈ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 2 ಮಂಗಳವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದು ಭರಪೂರ ರನ್ ಹರಿದುಬರುವ ನಿರೀಕ್ಷೆಯಿದೆ. ಚೆಂಡು ನೇರವಾಗಿ ಬ್ಯಾಟ್‌ಗೆ ಬರುವ ಕಾರಣ ರನ್ ಸರಾಗವಾಗಿ ಹರಿದುಬರಲಿದೆ. ಇನ್ನು ಪಂದ್ಯ ಮುಂದುವರಿಯುತ್ತಿದ್ದಂತೆಯೇ ಪಿಚ್ ನಿಧಾನಗತಿಯನ್ನು ಪಡೆದುಕೊಳ್ಳಲಿದೆ. ಹೀಗಾಗಿ ಸ್ಪಿನ್ನರ್‌ಗಳು ಕೂಡ ಪರಿಣಾಮ ಬೀರುವ ಸಾಧ್ಯತೆಯಿದೆ.
ಹವಾಮಾನ ವರದಿ: ಪಂದ್ಯದ ದಿನ ಮಳೆಯಾಗುವ ಸಾಧ್ಯತೆಯಿಲ್ಲ. ಇನ್ನು ಪಂದ್ಯದ ಸಂದರ್ಭದಲ್ಲಿ 28-33 ಡಿಗ್ರಿ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ:

ಗುಜರಾತ್ ಟೈಟನ್ಸ್ ಸಂಭಾವ್ಯ ಆಡುವ ಬಳಗ: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ಆಡುವ ಬಳಗ: ಫಿಲಿಪ್ ಸಾಲ್ಟ್ ( ವಿಕೆಟ್ ಕೀಪರ್), ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಪ್ರಿಯಮ್ ಗಾರ್ಗ್, ಅಕ್ಷರ್ ಪಟೇಲ್, ರಿಪಾಲ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಮುಖೇಶ್ ಕುಮಾರ್

Story first published: Tuesday, May 2, 2023, 15:37 [IST]
Other articles published on May 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+