Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR vs GT, ರಾಜಸ್ಥಾನ್ ರಾಯಲ್ಸ್‌ಗೆ ಗುಜರಾತ್ ಟೈಟನ್ಸ್ ಎದುರಾಳಿ: ಪಿಚ್ ರಿಪೋರ್ಟ್, ಆಡುವ ಬಳಗ

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯಲ್ಲಿ ಶುಕ್ರವಾರ 48ನೇ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗುಜರಾತ್ ಟೈಟನ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ. ಈ ಎರಡು ತಂಡಗಳು ಕೂಡ ಕೂಡ ಈ ಬಾರಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿದೆ. ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಈಗಾಗಲೇ ಮೊದಲ ಸ್ಥಾನದಲ್ಲಿದ್ದು ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಪ್ರಯತ್ನ ನಡೆಸಿದರೆ ರಾಜಸ್ಥಾನ್ ರಾಯಲ್ಸ್ ಮತ್ತೆ ಮೊದಲ ಸ್ಥಾನಕ್ಕೇರುವ ಅವಕಾಶ ಹೊಂದಿದೆ.

ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ರಾಜಸ್ಥಾನ್ ರಾಯಲ್ಸ್ ಕಳೆದ ಗೆಲ ಪಂದ್ಯಗಳಲ್ಲಿ ಗೆಲುವಿನ ಲಯವನ್ನು ಕಳೆದುಕೊಂಡಿದೆ. ಕಳೆದ ನಾಲ್ಕು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿರುವುದು ಕೇವಲ ಒಂದು ಪಂದ್ಯದಲ್ಲಿ ಮಾತ್ರ. ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಿದಾಗ ರಾಜಸ್ಥಾನ್ ರಾಯಲ್ಸ್ 6 ವಿಕೆಟ್‌ಗಳ ಅಂತರದ ಸೋಲು ಕಂಡಿತ್ತು. ಹೀಗಾಗಿ ಆಡಿದ ಐದು ಪಂದ್ಯಗಳಲ್ಲಿ 5 ಗೆಲುವು ಹಾಗೂ ನಾಲ್ಕು ಸೋಲು ಕಂಡಿರುವ ಆರ್‌ಆರ್ ತಂಡ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

IPL 2023, Match 48, RR vs GT , Predicted Playing 11, Pitch Report

ಮತ್ತೊಂದೆಡೆ ಗುಜರಾತ್ ಟೈಟನ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೂ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅನುಭವಿಸಿದ ಸೋಲು ಆಘಾತ ನೀಡಿದೆ. ಹಾಗಿದ್ದರೂ ಗುಜರಾತ್ ಟೈಟನ್ಸ್ ತಂಡ ಆಡಿರುವ 9 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿದ್ದು 3 ಸೋಲು ಕಂಡಿದೆ, ಈ ಮೂಲಕ 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರಿದಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ವಿರುದ್ಧದ ಈ ಪಂದ್ಯ ಜೈಪುರದ ಸವಾಯ್‌ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಮೇ 5 ಶುಕ್ರವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೀಗಿದೆ

ಜೈಪುರದ ಸವಾಯ್‌ ಮಾನ್‌ಸಿಂಗ್ ಕರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದ ಮಧ್ಯೆ ಸಮತೋಲಿತ ಹೋರಾಟವನ್ನು ನೀಡುವ ಪಿಚ್ ಆಗಿದೆ. ಇಲ್ಲಿ ಆರಂಭದಲ್ಲಿ ಬ್ಯಾಟರ್‌ಗಳು ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದರೆ ಮಾತ್ರವೇ ಯಶಸ್ಸು ಸಾಧ್ಯ. ಬಳಿಕ ಮೇಲುಗೈ ಸಾಧಿಸುವ ಅವಕಾಶವಿದೆ. ಆದರೆ ಮಧ್ಯಮ ಓವರ್‌ಗಳಲ್ಲಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ.
ಹವಾಮಾನ ವರದಿ: ಮಳೆಯಾಗುವ ಸಾಧ್ಯತೆಗಳು ಇಲ್ಲವಾಗಿರುವ ಕಾರಣ ಕ್ರಿಕೆಟ್ ಪಂದ್ಯಕ್ಕೆ ಅನುಕೂಲಕರವಾದ ವಾತಾವರಣ ಹೊಂದಿದೆ. 27ರಿಂದ 34 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಇರುವ ನಿರೀಕ್ಷೆಯಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಆಡಮ್ ಝಂಪಾ, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್

ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ

Story first published: Thursday, May 4, 2023, 18:23 [IST]
Other articles published on May 4, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+