ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯಲ್ಲಿ ಶನಿವಾರ ಐಪಿಎಲ್‌ನ ಬದ್ಧ ಎದುರಾಳಿಗಳ ಮುಖಾಮುಖಿ ನಡೆಯಲಿದೆ. ಐಪಿಎಲ್ ಇತಿಹಾಸದ ಎರಡು ಬಲಿಷ್ಠ ತಂಡಗಳು ಎನಿಸಿಕೊಂಡಿರುವ ಮುಂಬೈ ಇಂಡಿಯನ್ಸ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಭಾನುವಾರ ಪೈಪೋಟಿಯ ಪಂದ್ಯ ಏರ್ಪಡಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತವರು ಮೈದಾನ ಚೆಪಾಕ್‌ನಲ್ಲಿ ಈ ಪಂದ್ಯ ನಡೆಯಲಿದೆ.
ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಆವೃತ್ತಿಯಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಸದ್ಯ ಗೆಲುವಿನ ಅದ್ಭುತ ಲಯದಲ್ಲಿ ಮುಂಬೈ ಇಂಡಿಯನ್ಸ ತಂಡ ಇದ್ದು ಈ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿದೆ. ಶನಿವಾರ ನಡೆಯಲಿರುವ ಈ ಪಂದ್ಯ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳಲು ಎಂಐ ತಂಡಕ್ಕೆ ಅದ್ಭುತ ಅವಕಾಶವಾಗಿದೆ. ಸದ್ಯ ಆಡಿರುವ 9 ಪಂದ್ಯಗಳಲ್ಲಿ 5 ಅಂಕಗಳನ್ನು ಗಳಿಸಿರುವ ಮುಂಬೈ ಇಂಡಿಯನ್ಸ್ 10 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ.

ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ಪಂದ್ಯಗಳನ್ನು ಆಡಿ 5 ಗೆಲುವು ಸಾಧಿಸಿದ್ದು 10 ಅಂಕಗಳನ್ನು ಪಡೆದುಕೊಂಡಿದೆ. ಆದರೆ ನೆಟ್‌ರನ್‌ರೇಟ್‌ನಲ್ಲಿ ಮುಂದಿರುವ ಕಾರಣ ಸಿಎಸ್‌ಕೆ ಸದ್ಯ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶನಿವಾರ ನಡೆಯಲಿರುವ ಪಂದ್ಯ ಈ ಬಾರಿಯ ಆವೃತ್ತಿಯ 11ನೇ ಪಂದ್ಯ ಎಂಬುದು ಗಮನಿಸಬೇಕಾದ ಸಂಗತಿ. ಹೀಗಾಗಿ ಧೋನಿ ಪಡೆ ಅಂಕಪಟ್ಟಿಯಲ್ಲಿ ಮೇಲುಗೈ ಸಾಧಿಸುವುದನ್ನು ಮುಂದುವರಿಸಬೇಕಾದರೆ ಗೆಲುವು ಅನಿವಾರ್ಯ. ಇಲ್ಲವಾದರೆ ಹಠಾತ್ ಕುಸಿತದ ಭೀತಿಯೂ ತಂಡಕ್ಕಿದೆ.
ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಚೆನ್ನೈ ಸೂಪರ್ ಹಾಗೂ ಮುಂಬೈ ಇಂಡಿಯನ್ಸ ತಂಡಗಳ ವಿರುದ್ಧದ ಈ ಪಂದ್ಯ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮೇ 6 ಶನಿವಾರ ಮಧ್ಯಾಹ್ನ ಆಯೋಜನೆಯಾಗಲಿದೆ. ಮಧ್ಯಾಹ್ನ 3:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 3 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಪಿಚ್ ರಿಪೋರ್ಟ್ ಹೀಗಿದೆ
ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದ ಮಧ್ಯೆ ಸಮತೋಲಿತ ಹೋರಾಟವನ್ನು ನೀಡುವ ಪಿಚ್ ಆಗಿದೆ. ಇಲ್ಲಿ ಆರಂಭದಲ್ಲಿ ಬ್ಯಾಟರ್‌ಗಳು ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದರೆ ಮಾತ್ರವೇ ಯಶಸ್ಸು ಸಾಧ್ಯ. ಬಳಿಕ ಮೇಲುಗೈ ಸಾಧಿಸುವ ಅವಕಾಶವಿದೆ. ಆದರೆ ಮಧ್ಯಮ ಓವರ್‌ಗಳಲ್ಲಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ.
ಹವಾಮಾನ ವರದಿ: ಪಂದ್ಯದ ಶನಿವಾದ ಪಂದ್ಯದ ಅವಧಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. 27ರಿಂದ 34 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಇರುವ ನಿರೀಕ್ಷೆಯಿದೆ.
ಇತ್ತಂಗಳ ಸಂಭಾವ್ಯ ಆಡುವ ಬಳಗ
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ದೀಪಕ್ ಚಾಹರ್, ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಮತೀಶ ಪತಿರಾನ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಕುಮಾರ್ ಕಾರ್ತಿಕೇಯ