Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, ಗುಜರಾತ್ ಟೈಟನ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಆಡುವ ಬಳಗ, Live ಸ್ಕೋರ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಗುಜರಾತ್ ಟೈಟನ್ಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಒಂದು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಜೋಶುವಾ ಲಿಟಲ್ ಬದಲಿಗೆ ಅಲ್ಜಾರಿಒ ಜೋಸೆಫ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿಯೂ ಒಂದು ಬದಲಾವಣೆ ಮಾಡಿಕೊಳ್ಳಲಾಗಿದ್ದು ನವೀನ್ ಉಲ್ ಹಕ್ ಬದಲಿಗೆ ಕ್ವಿಂಟನ್ ಡಿಕಾಕ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಈ ಬಾರಿಯ ಐಪಿಎಲ್‌ನ್ಲಲಿ ಡಿಕಾಕ್ ಅವರಿಗೆ ದೊರೆಯುತ್ತಿರುವ ಮೊದಲ ಅವಕಾಶವಾಗಿದೆ.

IPL 2023, match 51, Gujarat Titans vs Lucknow Super Giants, Toss report and playing

Live ಸ್ಕೋರ್ ಹೀಗಿದೆ

1
57106

GT vs LSG ಪಿಚ್ ರಿಪೋರ್ಟ್ : ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಕ್ಕೂ ಸಮತೋಲಿತವಾಗಿ ಬೆಂಬಲ ನೀಡಲಿದೆ. ಇಲ್ಲಿ ಹೊಸ ಚೆಂಡಿನಲ್ಲಿ ವೇಗದ ಬೌಲರ್‌ಗಳು ಪರಿಣಾಮಕಾರಿಯಾಗಲಿದ್ದು ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಪ್ರಮುಖ ಪಾತ್ರವಹಿಸಲಿದ್ದಾರೆ. ಇನ್ನು ಬ್ಯಾಟರ್‌ಗಳು ಆರಂಭದಲ್ಲಿ ಎಚ್ಚರಿಕೆಯ ಪ್ರದರ್ಶನ ನೀಡಿದರೆ ನಂತರ ಉತ್ತಮವಾಗಿ ರನ್‌ಗಳಿಸುವ ಅವಕಾಶ ದೊರೆಯಲಿದೆ.
ಹವಾಮಾನ ವರದಿ: ಅಹ್ಮದಾಬಾದ್‌ನಲ್ಲಿ ಭಾನುವಾರ ಪಂದ್ಯಕ್ಕೆ ಪೂರಕವಾದ ವಾತಾವರಣವನ್ನು ಹೊಂದಿದೆ. ಹಾಗಾಗಿ ಮಳೆಯ ಆತಂಕವಿಲ್ಲ. ಉಷ್ಣಾಂಶ 29-39 ಡಿಗ್ರಿ ಸೆಲ್ಸಿಯಸ್‌ನ ಮಧ್ಯೆ ಇರಲಿದೆ.

ಗುಜರಾತ್ ಟೈಟನ್ಸ್ ಆಡುವ ಬಳಗ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕರಣ್ ಶರ್ಮಾ, ಕೃನಾಲ್ ಪಾಂಡ್ಯ(ನಾಯಕ), ಮಾರ್ಕಸ್ ಸ್ಟೋಯ್ನಿಸ್, ಸ್ವಪ್ನಿಲ್ ಸಿಂಗ್, ಯಶ್ ಠಾಕೂರ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಅವೇಶ್ ಖಾನ್

Story first published: Sunday, May 7, 2023, 15:18 [IST]
Other articles published on May 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+