For Quick Alerts
ALLOW NOTIFICATIONS  
For Daily Alerts
 

IPL 2023, SRH vs LSH: ಸನ್‌ರೈಸರ್ಸ್ ಹೈದರಾಬಾದ್ vs ಲಕ್ನೋ ಸೂಪರ್ ಜೈಂಟ್ಸ್: ಸಂಭಾವ್ಯ XI, ಪಿಚ್ ರಿಪೋರ್ಟ್

ಐಪಿಎಲ್‌ನಲ್ಲಿ ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಹೈದರಾಬಾದ್‌ನ ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎರಡು ತಂಡಗಳಿಗೂ ಗೆಲುವು ಅತ್ಯಂತ ಮಹತ್ವದ್ದಾಗಿದೆ. ಪ್ಲೇಆಫ್‌ಗೇರುವ ಸ್ಪರ್ಧೆಯಲ್ಲಿ ಕೊನೆಯ ಹಂತದಲ್ಲಿ ಮೇಲುಗೈ ಸಾಧಿಸುವ ಲೆಕ್ಕಾಚಾರದಲ್ಲಿ ಎರಡು ತಂಡಗಳು ಕಣಕ್ಕಿಳಿಯಲಿದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದರೂ ಪ್ಲೇಆಫ್‌ಗೇರುವ ಸ್ಪರ್ಧೆಯಿಂದ ಇನ್ನೂ ಹೊರಬಿದ್ದಿಲ್ಲ. ಸನ್‌ರೈಸರ್ಸ್ ಹೈದರಾಬಾದ್ ತಂಡ ಈವರೆಗೆ 10 ಪಂದ್ಯಗಳನ್ನು ಆಡಿದ್ದು ಇದರಲ್ಲಿ 4 ಗೆಲುವು ಹಾಗೂ 6 ಸೋಲು ಅನುಭಿಸಿದೆ. ಹೀಗಾಗಿ 8 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಈ ಪಂದ್ಯದಲ್ಲಿ ಗೆಲುವಿನ ಜೊತೆಗೆ ನೆಟ್‌ರನ್‌ರೇಟ್‌ನಲ್ಲಿಯೂ ಪ್ರಗತಿ ಸಾಧಿಸಿದಲ್ಲಿ ಸಾಕಷ್ಟು ಏರಿಕೆ ಕಾಣುವ ಅವಕಾಶವೂ ಇದೆ.

IPL 2023, match 58th, Sunrisers Hyderabad vs Lucknow Super Giants, Pitch report, probable XI

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡ ಆರಂಭದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರೂ ಟೂರ್ನಿಯ ನಿರ್ಣಾಯಕ ಹಂತದಲ್ಲಿ ಗೆಲುವಿನ ಲಯವನ್ನು ಕಳೆದುಕೊಂಡಂತಿದೆ. ಅಲ್ಲದೆ ತಂಡದ ಖಾಯಂ ನಾಯಕ ಕೆಎಲ್ ರಾಹುಲ್ ಗಾಯದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದು ಕೃನಾಲ್ ಪಾಂಡ್ಯ ತಂಡವನ್ನು ಮುನ್ನಡೆಸುತ್ತಿದ್ದಾರೆ. ಕೆಲ ಪ್ರಮುಖ ಆಟಗಾರರು ಲಯ ಕಳೆದುಕೊಂಡಂತಿದೆ. ಹೀಗಾಗಿ ತಂಡ ಮತ್ತೆ ಸಂಘಟಿತ ಪ್ರದರ್ಶನ ನೀಡುವ ಅಗತ್ಯವಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೇ 13 ಶನಿವಾರ ಮಧ್ಯಾಹ್ನ ಆಯೋಜನೆಯಾಗಲಿದೆ. ಮಧ್ಯಾಹ್ನ 3:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 3 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

Yashasvi Jaiswal: ಶತಕ ಅಲ್ಲ, ನನ್ನ ತಲೆಯಲ್ಲಿ ಇದ್ದಿದ್ದೇ ಬೇರೆ: ಅಭಿಮಾನಿಗಳ ಹೃದಯ ಗೆದ್ದ ಯಶಸ್ವಿ ಜೈಸ್ವಾಲ್ ಮಾತು!
SRH vs LSG ಪಿಚ್ ರಿಪೋರ್ಟ್

ರಾಜೀವ್‌ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಾಮಾನ್ಯವಾಗಿ ನಿಧಾನಗತಿಯ ಪಿಚ್‌ಗೆ ಹೆಸರುವಾಸಿ. ಆದರೆ ಇಲ್ಲಿ ಕೆಲ ಹೈಸ್ಕೋರಿಂಗ್ ಪಂದ್ಯಗಳು ಕೂಡ ನಡೆದಿದೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳ ಸರಾಸರಿ ಸ್ಕೋರ್ 158 ಹಾಗೂ ಎರಡನೇ ಬ್ಯಾಟಿಂಗ್ ಮಾಡಿದ ತಂಡಗಳ ಸರಾಸರಿ 147 ರನ್ ಆಗಿದೆ. ಆದರೆ ಐಪಿಎಲ್ ದಾಖಲೆಗಳ ಪ್ರಕಾರ ಇಲ್ಲಿ ಎರಡನೇ ಸರದಿಯಲ್ಲಿ ಬ್ಯಾಟಿಂಗ್ ನಡೆಸಿದ ತಂಡಗಳು ಹೆಚ್ಚಿನ ಯಶಸ್ಸು ಸಾಧಿಸಿದೆ.

ಹವಾಮಾನ ವರದಿ ಹೇಗಿದೆ?: ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಡಿಮೆಯಿದೆ. ಹಾಗಾಗಿ ಪೂರ್ಣ ಪ್ರಮಾಣದಲ್ಲಿ ಪಂದ್ಯ ಆಯೋಜನೆಯಾಗಲಿದ್ದು, 29-34 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರಲಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಂ, ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಹೆನ್ರಿಚ್ ಕ್ಲಾಸೆನ್, ಅಬ್ದುಲ್ ಸಮದ್, ಆದಿಲ್ ರಶೀದ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೊಯಿನಿಸ್/ಕೈಲ್ ಮೇಯರ್ಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೆ ಗೌತಮ್, ಮಾರ್ಕ್ ವುಡ್, ಜಯದೇವ್ ಉನದ್ಕತ್/ಯಶ್ ಠಾಕೂರ್, ರವಿ ಬಿಷ್ಣೋಯ್.

Story first published: Friday, May 12, 2023, 17:41 [IST]
Other articles published on May 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+