Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಗುಜರಾತ್ ಟೈಟನ್ಸ್ vs ಸನ್‌ರೈಸರ್ಸ್ ಹೈದರಾಬಾದ್, ಸಂಭಾವ್ಯ ಆಡುವ ಬಳಗ, ಪಿಚ್ ರಿಪೋರ್ಟ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸೋಮವಾರ ಗುಜರಾತ್ ಟೈಟನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಗುಜರಾತ್ ಟೈಟನ್ಸ್ ಈ ಬಾರಿಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು ಪ್ಲೇಆಫ್‌ಗೆ ಪ್ರವೇಶಿಸುವ ಮೊದಲ ತಂಡ ಎನಿಸಿಕೊಳ್ಳುವ ಧಾವಂತದಲ್ಲಿದೆ. ಆದರೆ ಕಳೆದ ಪಂದ್ಯದಲ್ಲಿ ಆ ಅವಕಾಶವನ್ನು ಕೈಚೆಲ್ಲಿದ್ದ ಜಿಟಿ ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಗೆದ್ದು ಪ್ಲೇಆಫ್‌ಗೆ ಅಧಿಕೃತವಾಗಿ ಎಂಟ್ರಿಕೊಡುವ ವಿಶ್ವಾಸದಲ್ಲಿದೆ.

ಗುಜರಾಯ್ ಟೈಟನ್ಸ್ ತಮಡ ಆಡಿರುವ 12 ಪಂದ್ಯಗಳಲ್ಲಿ 8 ಗೆಲುವು ಸಾಧಿಸಿದ್ದು 4 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಹೀಗಾಗಿ 16 ಅಂಕಗಳು ಹಾರ್ದಿಕ್ ಪಾಂಡ್ಯ ತಂಡದ ಬಳಿಯಿದ್ದು ಮೊದಲ ಸ್ಥಾನದಲ್ಲಿದೆ. ಆದರೆ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಜಿಟಿ ತಂಡ ಸೋಲು ಅನುಭವಿಸಿತ್ತು ಎಂಬುದು ಗಮನಾರ್ಹ. ಹೀನಾಯ ಸೋಲಿನ ಆತಂಕದಲ್ಲಿದ್ದ ಜಿಟಿ ಪರವಾಗಿ ರಶೀದ್ ಖಾನ್ ಅಸಾಧಾರಣ ಪ್ರದರ್ಶನ ನೀಡಿದ ಪರಿಣಾಮವಾಗಿ ಅಲ್ಪ ರನ್‌ಗಳ ಅಂತರದಿಂದ ಆ ಪಂದ್ಯದಲ್ಲಿ ಜಿಟಿ ಸೋಲು ಅನುಭವಿಸಿತು.

IPL 2023, match 62nd, Gujarat Titans vs Sunrisers Hyderabad, Pitch report, probable XI

ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಲೀಗ್‌ ಹಂತದಿಂದ ಹೊರಬೀಳುವ ಸನಿಹದಲ್ಲಿದೆ. ಈ ಪಂದ್ಯದಲ್ಲಿ ಸೋತರೆ ಡಿಸಿ ಬಳಿಕ ಟೂರ್ನಿಯಿಂದ ಲೀಗ್ ಹಂತಕ್ಕೆ ಹೊರಬಿದ್ದ ಎರಡನೇ ತಂಡ ಎನಿಸಿಕೊಳ್ಳಲಿದೆ. ಸದ್ಯ 11 ಪಂದ್ಯಗಳನ್ನು ಆಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ 4 ಗೆಲುವು ಸಾಧಿಸಿದ್ದು 7 ಸೋಲು ಕಂಡಿದೆ. ಈ ಮೂಲಕ 8 ಅಂಕಗಳು ಮಾತ್ರವೇ ಎಸ್‌ಆರ್‌ಹೆಚ್ ಖಾತೆಯಲ್ಲಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯ ಜೈಪುರದ ಸವಾಯ್‌ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಮೇ 14 ಭಾನುವಾರ ಮಧ್ಯಾಹ್ನ ಆಯೋಜನೆಯಾಗಲಿದೆ. ಮಧ್ಯಾಹ್ನ 3:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 3 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

GT vs SRH ಪಿಚ್ ರಿಪೋರ್ಟ್

ಈ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಲ್ಲಿನ ಪಿಚ್ ವೇಗಿಗಳಿಗೆ ಉತ್ತಮವಾಗಿ ಬೆಂಬಲ ನೀಡಲಿದೆ. ಈ ಕ್ರೀಡಾಂಗಣದಲ್ಲಿ ಬ್ಯಾಟರ್‌ಗಳಿಗೆ ಹೆಚ್ಚಿನ ರನ್‌ಗಳಿಸುವ ಅವಕಾಶವಿದ್ದರೂ ಆರಂಭಿಕ ಹಂತದಲ್ಲಿ ಕೆಲ ಕಾಲ ಕ್ರೀಸ್‌ನಲ್ಲಿ ನೆಲೆಯೂರುವುದು ಸವಾಲೆನಿಸಲಿದೆ. ಅದಾದ ಬಿಳಿಕ ರನ್ ಸರಾಹವಾಗಿ ಹರಿದುಬರಲಿದೆ.
ಹವಾಮಾನ ವರದಿ ಹೇಗಿದೆ?: ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಹಾಗಾಗಿ ಪೂರ್ಣ ಪ್ರಮಾಣದಲ್ಲಿ ಪಂದ್ಯ ನಿರಾತಂಕವಾಗಿ ನಡೆಯಲಿದ್ದು 29-42 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರಲಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ಮೋಹಿತ್ ಶರ್ಮಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ನೂರ್ ಅಹ್ಮದ್

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಅನ್ಮೋಲ್ಪ್ರೀತ್ ಸಿಂಗ್, ರಾಹುಲ್ ತ್ರಿಪಾಠಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಏಡೆನ್ ಮಾರ್ಕ್ರಾಮ್ (ನಾಯಕ), ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್

Story first published: Sunday, May 14, 2023, 21:18 [IST]
Other articles published on May 14, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+