Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಇಂದು ಹೈವೋಲ್ಟೇಜ್ ಪಂದ್ಯದಲ್ಲಿ LSG vs MI ಮುಖಾಮುಖಿ: ನಿರ್ಣಾಯಕ ಪಂದ್ಯದಲ್ಲಿ ಗೆಲ್ಲೋರು ಯಾರು?

ಇಂಡಿಯನ್ ಪ್ರೀಮಿಯರ್ ಲೀಗ್‌ನ ಲೀಗ್ ಹಂತದಲ್ಲಿ ಇನ್ನು ಕೆಲವೇ ಪಂದ್ಯಗಳು ಮಾತ್ರವೇ ಬಾಕಿಯಿದೆ. ಈ ಹಂತದಲ್ಲಿ ಪ್ರತಿ ಪಂದ್ಯಗಳು ಕೂಡ ಅತ್ಯಂತ ನಿರ್ಣಾಯಕವಾಗಿದ್ದು ಪ್ರತಿ ಪಂದ್ಯದ ಫಲಿತಾಂಶ ಕುಡ ಇನ್ನೊಂದು ತಂಡದ ಮೇಲೆಯೂ ಪರಿಣಾಮ ಬೀರುವಂತಾ ಸನ್ನಿವೇಶವಿದೆ. ಇದೇ ರೀತಿಯಲ್ಲಿ ಇಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯ ಕೂಡ ತೀವ್ರ ಕುತೂಹಲ ಕೆರಳಿಸಿದೆ.

ಇಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳಿಗೂ ಈ ಪಂದ್ಯವೂ ಸೇರಿದಂತೆ ಕೇವಲ ಎರಡು ಲೀಗ್ ಪಂದ್ಯಗಳು ಮಾತ್ರವೇ ಬಾಕಿಯಿದೆ. ಈ ಹಂತದಲ್ಲಿ ಮುಂಬೈ ಇಂಡಿಯನ್ಸ್ 12 ಪಂದ್ಯಗಳಲ್ಲಿ 7 ಗೆಲುವು ಸಾಧಿಸಿ 14 ಅಂಕಗಳಿಸಿದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ 12 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿ 13 ಅಂಕಗಳಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ತೀವ್ರ ಪೈಪೋಟಿ ನಡೆಸಲಿದೆ.

IPL 2023, Match 63, LSG vs MI , Predicted Playing 11, Pitch Report

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ವಿರುದ್ಧದ ಈ ಪಂದ್ಯ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಮೇ ಇಂದು ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೀಗಿದೆ

ಲಕ್ನೋದ ಏಕಾನ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದ ಮಧ್ಯೆ ಸಮತೋಲಿತ ಹೋರಾಟವನ್ನು ನೀಡುವ ಪಿಚ್ ಆಗಿದೆ. ಇಲ್ಲಿ ಆರಂಭದಲ್ಲಿ ಬ್ಯಾಟರ್‌ಗಳು ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದರೆ ಮಾತ್ರವೇ ಯಶಸ್ಸು ಸಾಧ್ಯ. ಬಳಿಕ ಮೇಲುಗೈ ಸಾಧಿಸುವ ಅವಕಾಶವಿದೆ. ಆದರೆ ಮಧ್ಯಮ ಓವರ್‌ಗಳಲ್ಲಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ.
ಹವಾಮಾನ ವರದಿ: ಮಳೆಯಾಗುವ ಸಾಧ್ಯತೆಗಳು ಇಲ್ಲವಾಗಿರುವ ಕಾರಣ ಕ್ರಿಕೆಟ್ ಪಂದ್ಯಕ್ಕೆ ಅನುಕೂಲಕರವಾದ ವಾತಾವರಣ ಹೊಂದಿದೆ. 27ರಿಂದ 34 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಇರುವ ನಿರೀಕ್ಷೆಯಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್, ಕೈಲ್ ಮೇಯರ್ಸ್, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಆಯುಷ್ ಬಡೋನಿ, ಕೆ ಗೌತಮ್, ಯುಧ್ವೀರ್ ಚರಕ್/ಯಶ್ ಠಾಕೂರ್, ರವಿ ಬಿಷ್ಣೋಯ್, ಅಮಿತ್ ಮಿಶ್ರಾ, ಅವೇಶ್ ಖಾನ್

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್, ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಕ್ರಿಸ್ ಜೋರ್ಡಾನ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆನ್‌ಡಾರ್ಫ್

Story first published: Tuesday, May 16, 2023, 9:00 [IST]
Other articles published on May 16, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+