Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಪ್ಲೇಆಫ್ ಕನಸಿನಲ್ಲಿರುವ ಪಂಜಾಬ್‌ಗೆ ಆಘಾತ ನೀಡುತ್ತಾ DC, ಪಿಚ್ ರಿಪೋರ್ಟ್, ಇತರ ಮಾಹಿತಿ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬುಧವಾರ ಮತ್ತೊಂದು ಮಹತ್ವದ ಪಂದ್ಯ ನಡೆಯಲಿದ್ದು ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿಯ ಟೂರ್ನಿಯಲ್ಲಿ ಪ್ಲೇಆಫ್ ಸ್ಪರ್ಧೆಯಿಂದ ಈಗಾಗಲೇ ಹೊರಬಿದ್ದಾಗಿದೆ. ಆದರೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ಲೇಆಫ್‌ಗೇರುವ ಅವಕಾಶ ಇನ್ನೂ ಇದೆ. ಈ ಕನಸನ್ನು ಭಗ್ನಗೊಳಿಸುವ ಅವಕಾಶ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿದೆ. ಈ ಮೂಲಕ ಕಳೆದ ಪಂದ್ಯದಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿದೆ.

ಪಂಜಾಬ್ ಕಿಂಗ್ಸ್ ತಂಡ ಈವರೆಗೆ 12 ಪಂದ್ಯಗಳನ್ನು ಆಡಿದ್ದು 6 ಪಂದ್ಯ ಗೆಲುವು ಸಾಧಿಸಿದ್ದು 6 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಹೀಗಾಗಿ 12 ಅಂಕಗಳನ್ನು ಹೊಂದಿದ್ದು ಪ್ಲೇಆಫ್ ಸ್ಪರ್ಧೆಯಲ್ಲಿ ಉಳಿದುಕೊಂಡಿದೆ. ಉಳಿದ ಎರಡು ಪಂದ್ಯಗಳಲ್ಲಿಯೂ ಗೆದ್ದರೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ಲೇಆಫ್‌ಗೇರುವ ಅವಕಾಶ ಇದ್ದೇ ಇದೆ.

IPL 2023, Match 64, PBKS vs DC, Predicted Playing 11, Pitch Report

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧವೇ ಆಡಿದ್ದು ಆ ಪಂದ್ಯದಲ್ಲಿ 31 ರನ್‌ಗಳ ಅಂತರದಿಂದ ಸೋಲು ಅನುಭವಿಸಿತ್ತು. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಸ್ಪರ್ಧೆಯಿಂದ ಹೊರಬಿದ್ದ ಮೊದಲ ತಂಡ ಎನಿಸಿಕೊಂಡಿದೆ. ಇದೀಗ ಪಂಜಾಬ್ ಕಿಂಗ್ಸ್ ತಂಡದ ಪ್ಲೇಆಫ್‌ಗೇರುವನ್ನು ಕೆಡಿಸುವ ಅವಕಾಶ ಡಿಸಿ ಮುಂದಿದೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ

ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ವಿರುದ್ಧದ ಈ ಪಂದ್ಯ ಧರ್ಮಶಾಲಾದ ಹೆಚ್‌ಪಿಸಿಎ ಕ್ರೀಡಾಂಗಣದಲ್ಲಿ ಮೇ 17ರಂದು ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೀಗಿದೆ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದ ಮಧ್ಯೆ ಸಮತೋಲಿತ ಹೋರಾಟವನ್ನು ನೀಡುವ ನಿರೀಕ್ಷೆಯಿದೆ. ಇಲ್ಲಿ ಆರಂಭದಲ್ಲಿ ಬ್ಯಾಟರ್‌ಗಳು ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದರೆ ಹೆಚ್ಚಿನ ಯಶಸ್ಸು ಸಾಧ್ಯ. ಬಳಿಕ ಮೇಲುಗೈ ಸಾಧಿಸುವ ಅವಕಾಶವಿದೆ. ಆದರೆ ಮಧ್ಯಮ ಓವರ್‌ಗಳಲ್ಲಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಪಂಜಾಬ್ ಕಿಂಗ್ಸ್: ಪ್ರಭ್‌ಸಿಮ್ರಾನ್ ಸಿಂಗ್, ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಿಕಂದರ್ ರಜಾ, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ರಿಲೀ ರೊಸ್ಸೌ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ರಿಪಾಲ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಇಶಾಂತ್ ಶರ್ಮಾ

Story first published: Tuesday, May 16, 2023, 13:41 [IST]
Other articles published on May 16, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+