Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, PBKS vs DC: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 ಮತ್ತು Live ಸ್ಕೋರ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಪಂಜಾಬ್ ಕಿಂಗ್ಸ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು ಧರ್ಮಶಾಲಾದ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಯಾಗಿದೆ. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಪಂಜಾಬ್ ಕಿಂಗ್ಸ್ ತಂಡ ಈವರೆಗೆ 12 ಪಂದ್ಯಗಳನ್ನು ಆಡಿದ್ದು 6 ಪಂದ್ಯ ಗೆಲುವು ಸಾಧಿಸಿದ್ದು 6 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಹೀಗಾಗಿ 12 ಅಂಕಗಳನ್ನು ಹೊಂದಿದ್ದು ಪ್ಲೇಆಫ್ ಸ್ಪರ್ಧೆಯಲ್ಲಿ ಉಳಿದುಕೊಂಡಿದೆ. ಉಳಿದ ಎರಡು ಪಂದ್ಯಗಳಲ್ಲಿಯೂ ಗೆದ್ದರೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ಲೇಆಫ್‌ಗೇರುವ ಅವಕಾಶವಿದೆ. ಹೀಗಾಗಿ ಈ ಪಂದ್ಯ ಪಂಜಾಬ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.

ipl 2023, Match 64, Punjab Kings vs Delhi Capitals, Toss report, playing XI

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದ ಮಧ್ಯೆ ಸಮತೋಲಿತ ಹೋರಾಟವನ್ನು ನೀಡುವ ನಿರೀಕ್ಷೆಯಿದೆ. ಇಲ್ಲಿ ಆರಂಭದಲ್ಲಿ ಬ್ಯಾಟರ್‌ಗಳು ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದರೆ ಹೆಚ್ಚಿನ ಯಶಸ್ಸು ಸಾಧ್ಯ. ಬಳಿಕ ಮೇಲುಗೈ ಸಾಧಿಸುವ ಅವಕಾಶವಿದೆ. ಆದರೆ ಮಧ್ಯಮ ಓವರ್‌ಗಳಲ್ಲಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ.

Live ಸ್ಕೋರ್ ಹೀಗಿದೆ

1
57119

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ರಿಲೀ ರೊಸ್ಸೌ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ಯಶ್ ಧುಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್

ಪಂಜಾಬ್ ಕಿಂಗ್ಸ್: ಶಿಖರ್ ಧವನ್(ನಾಯಕ), ಅಥರ್ವ ಟೈಡೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸ್ಯಾಮ್ ಕರ್ರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ಅರ್ಶ್‌ದೀಪ್ ಸಿಂಗ್

Story first published: Wednesday, May 17, 2023, 19:02 [IST]
Other articles published on May 17, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+