ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನಿರ್ಣಾಯಕ ಪಂದ್ಯ. ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಆರ್‌ಸಿಬಿ ಭಾನುವಾರ ಹೈದರಾಬಾದ್‌ನಲ್ಲಿ ಎದುರಿಸಲಿದ್ದು ಈ ಪಂದ್ಯದಲ್ಲಿ ಗೆದ್ದರೆ ಆರ್‌ಸಿಬಿ ಪ್ಲೇಆಫ್ ಪ್ರವೇಶದ ಹಾದಿ ಸುಗಮಗೊಳ್ಳಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡ ಟೂರ್ನಿಯಲ್ಲಿ ಈವರೆಗೆ 12 ಪಂದ್ಯಗಳನ್ನು ಆಡಿದ್ದು 6 ಗೆಲುವು ಹಾಗೂ 6 ಸೋಲು ಅನುಭವಿಸಿದೆ. ಹೀಗಾಗಿ ಆರ್‌ಸಿಬಿ 12 ಅಂಕಗಳನ್ನು ಹೊಂದಿದ್ದು ಮುಂದಿನ ಎರಡು ಪಂದ್ಯಗಳು ಕೂಡ ಗೆದ್ದರೆ ಆರ್‌ಸಿಬಿ ಸರಾಗವಾಗಿ ಪ್ಲೇಆಫ್‌ಗೆ ಪ್ರವೇಶ ಪಡೆಯಲಿದೆ.ಸದ್ಯ ಅಂಕಪಟ್ಟಿಯಲ್ಲಿ ಆರ್‌ಸಿಬಿ 5ನೇ ಸ್ಥಾನದಲ್ಲಿದ್ದು ಅಗ್ರ ನಾಲ್ಕರೊಳಗೆ ಸ್ಥಾನ ಖಚಿತಪಡಿಸಿಕೊಳ್ಳುವ ಅದ್ಭುತ ಅವಕಾಶ ಆರ್‌ಸಿಬಿ ಮುಂದಿದೆ.

ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಟೂರ್ನಿಯಲ್ಲಿ ಈಗಾಗಲೇ ಪ್ಲೇಆಫ್ ಹಂತಕ್ಕೇರುವ ಸ್ಪರ್ಧೆಯಿಂದ ಹೊರಬಿದ್ದಿದೆ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಯಾವುದೇ ಒತ್ತಡವಿಲ್ಲದೆ ಆಡುವ ಅವಕಾಶವಿದೆ. ಈವರೆಗೆ ಸನ್‌ರೈಸರ್ಸ್ ಹೈದರಾಬಾದ್ ತಂಡ 12 ಪಂದ್ಯಗಳನ್ನು ಆಡಿದ್ದು 4 ಗೆಲುವು ಸಾಧಿಸಿ 8 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ.
ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ವಿರುದ್ಧದ ಈ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮೇ 18ರಂದು ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.
ಪಿಚ್ ರಿಪೋರ್ಟ್ ಹೀಗಿದೆ
ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದ ಮಧ್ಯೆ ಸಮತೋಲಿತ ಹೋರಾಟಕ್ಕೆ ವೇದಿಕೆಯಾಗಲಿದೆ. ಇಲ್ಲಿ ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಉತ್ತಮವಾಗಿ ನೆರವು ನೀಡಲಿದ್ದು ನಂತರದ ಹಂತದಲ್ಲಿ ಸ್ಪಿನ್ನರ್‌ಗಳು ಮೇಲುಗೈ ಸಾಧಿಸುವ ನಿರೀಕ್ಷೆಯಿದೆ. ಹಾಗಿದ್ದರೂ ಬ್ಯಾಟರ್‌ಗಳು ಪಂದ್ಯದುದ್ದಕ್ಕೂ ಬ್ಯಾಟರ್‌ಗಳು ಮೇಲುಗೈ ಸಾಧಿಸುವ ಅವಕಾಶವೂ ಇದೆ.
ಹವಾಮಾನ ವರದಿ: ಎರಡು ಇನ್ನಿಂಗ್ಸ್‌ನ ಸಂದರ್ಭದಲ್ಲಿಯೂ ಮಳೆಯ ಆತಂಕವಿರಲಾರದು. 28-39 ಡಿಗ್ರಿ ಸೆಲ್ಸಿಯಸ್ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದೆ.
ಅಂತಾರಾಷ್ಟ್ರೀಯ T20ಯಲ್ಲಿ ಇವರು ಶತಕ ವೀರರು: ಆದರೆ ಐಪಿಎಲ್‌ನಲ್ಲಿ ಶೂನ್ಯ ಸಾಧನೆ!
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ ಬಳಗ: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್ ಮತ್ತು ಉಮ್ರಾನ್ ಮಲಿಕ್.
ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ ಮತ್ತು ಮೊಹಮ್ಮದ್ ಸಿರಾಜ್.