ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅತ್ಯಂತ ನಿರ್ಣಾಯಕ ಪಂದ್ಯ. ಈ ಪಂದ್ಯವನ್ನು ಗೆದ್ದು ಪ್ಲೇಆಫ್‌ಗೇರುವ ಸ್ಪರ್ಧೆಯಲ್ಲಿ ಮುನ್ನಡೆ ಸಾಧಿಸುವ ಅದ್ಭುತ ಅವಕಾಶ ಆರ್‌ಸಿಬಿ ಮುಂದಿದೆ. ಈ ಅವಕಾಶವನ್ನು ಆರ್‌ಸಿಬಿ ಉತ್ತಮವಾಗಿ ಬಳಸಿಕೊಂಡರೆ ಪ್ಲೇಆಫ್ ಸ್ಪರ್ಧೆಯಲ್ಲಿ ಆರ್‌ಸಿಬಿ ಮುನ್ನಡೆ ಸಾಧಿಸುವುದು ನಿಶ್ಚಿತ.
ಸದ್ಯ ಅಗ್ರ ನಾಲ್ಕು ಸ್ಥಾದಲ್ಲಿರುವ ಎಲ್ಲಾ ತಂಡಗಳು ಕೂಡ 13 ಪಂದ್ಯಗಳನ್ನು ಆಡಿದೆ. ಆ ಪೈಕಿ ಗುಜರಾತ್ ಟೈಟನ್ಸ್ ತಂಡ ಅಧಿಕೃತವಾಗಿ ಈಗಾಗಲೇ ಪ್ಲೇಆಫ್‌ಗೆ ಪ್ರವೇಶಿಸಿದೆ. ಉಳಿದ ಮೂರು ತಂಡಗಳು ಆಡಿರುವ 13ಪಂದ್ಯಗಳಲ್ಲಿ ತಲಾ 7 ಪಂದ್ಯಗಳನ್ನು ಗೆದ್ದುಕೊಂಡಿದೆ. ಸಿಎಸ್‌ಕೆ ಹಾಗೂ ಎಲ್‌ಎಸ್‌ಜಿ ತಂಡಗಳ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿರುವ ಕಾರಣ ತಲಾ 15 ಅಂಕಗಳನ್ನು ಹೊಂದಿದೆ. ಇನ್ನು ಮುಂಬೈ ಇಂಡಿಯನ್ಸ್ ತಂಡ 14 ಅಂಕವನ್ನು ಖಾತೆಯಲ್ಲಿ ಹೊಂದಿದೆ.

ಆರ್‌ಸಿಬಿ ಮುಂದಿದೆ ಅದ್ಭುತ ಅವಕಾಶ
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯವನ್ನು ಆರ್‌ಸಿಬಿ ಗದ್ದುಕೊಂಡರೆ ಮುಂಬೈ ಇಂಡಿಯನ್ಸ್ ಹೊಂದಿರುವ 14 ಅಂಕಗಳಿಗೆ ಆರ್‌ಸಿಬಿ ಕೂಡ ಸಮವಾಗಲಿದೆ. ಆದರೆ ಆರ್‌ಸಿಬಿ ನೆಟ್‌ರನ್‌ರೇಟ್ ಉತ್ತಮವಾಗಿರುವ ಕಾರಣ ಅಗ್ರ ನಾಲ್ಕರಲ್ಲಿ ಸ್ಥಾನವನ್ನು ಪಡೆದುಕೊಳ್ಳಲಿದೆ. ಈ ಮೂಲಕ ಆರ್‌ಸಿಬಿ ಪ್ಲೇಆಫ್ ಸ್ಪರ್ಧೆಯಲ್ಲಿ ಒಂದು ಹಂತದ ಮೇಲುಗೈ ಸಾಧಿಸುವ ಅವಕಾಶವಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೋಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ವನಿಂದು ಹಸರಂಗ, ಶಹಬಾಜ್ ಅಹ್ಮದ್, ಡೇವಿಡ್ ವಿಲ್ಲಿ, ಫಿನ್ ಅಲೆನ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರ್ಣ್ ಶರ್ಮಾ, ಸೋನು ಯಾದವ್
ಸನ್‌ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್ (ನಾಯಕ), ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಅನ್ಮೋಲ್ಪ್ರೀತ್ ಸಿಂಗ್, ಹ್ಯಾರಿ ಬ್ರೂಕ್, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಸಮರ್ಥ ವ್ಯಾಸ್, ಸನ್ವಿರ್ ಸಿಂಗ್, ವಿವ್ರಾಂತ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್, ಅಕೇಲ್ ಹೊಸೈನ್, ಮಯಾಂಕ್ ದಾಗರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್, ಆದಿಲ್ ರಶೀದ್, ಉಮ್ರಾನ್ ಮಲಿಕ್