Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್: ಧೋನಿ ಪಡೆಗೆ ಆಘಾತ ನೀಡುತ್ತಾ ಡಿಸಿ

ಶನಿವಾರ ಡಬಲ್ ಹೆಡ್ಡರ್ ಪಂದ್ಯ ನಡೆಯಲಿದ್ದು ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯ ಎರಡು ಪಂದ್ಯಗಳಿಗೂ ಕೊನೆಯ ಪಂದ್ಯವಾಗಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಅತ್ಯಂತ ಮಹತ್ವದ ಪಂದ್ಯವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಟೂರ್ನಿಯಿಂದ ಈಗಾಗಲೇ ಹೊರಬಿದ್ದಿದ್ದು ಕೊನೆಯ ಪಂದ್ಯದಲ್ಲಿ ಒತ್ತಡವಿಲ್ಲದೆ ಕಣಕ್ಕಿಳಿಯಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸ್ತುತ 13 ಪಂದ್ಯಗಳನ್ನು ಆಡಿದ್ದು ಆ ಪೈಕಿ 7 ಗೆಲುವು ಸಾಧಿಸಿದ್ದು ಒಂದು ಪಂದ್ಯ ಮಳೆಗೆ ಆಹುತಿಯಾಗಿರುವ ಕಾರಣ 15 ಅಂಕಗಳನ್ನು ಖಾತೆಯಲ್ಲಿ ಹೊಂದಿ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಪ್ಲೇಆಫ್ ಸ್ಥಾನ ಖಚಿತಗೊಳ್ಳಬೇಕಿದ್ದರೆ ಹಾಗೂ ಇದೇ ಸ್ಥಾನದಲ್ಲಿ ಸಿಎಸ್‌ಕೆ ತಂಡ ಮುಂದುವರಿಯಬೇಕಾದರೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ ತಂಡಕ್ಕೆ ಗೆಲುವು ಅನಿವಾರ್ಯ. ಹೀಗಾಗಿ ಈ ಪಂದ್ಯ ಈಗ ಕುತೂಹಲ ಮೂಡಿಸಿದೆ.

IPL 2023, Match 67, DC vs CSK, match preview, Predicted Playing 11, Pitch Report

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಈಗಾಘಲೇ ಹೇಳಿರುವಂತೆ ಟೂರ್ನಿಯಿಂದ ಹೊರಬಿದ್ದಿದ್ದು ಯಾವುದೇ ಒತ್ತಡವಿಲ್ಲದೆ ಆಡಲಿದೆ. ಅಲ್ಲದೆ ಕಳೆದ ಪಂದ್ಯದಲ್ಲಿ ವಾರ್ನರ್ ಬಳಗ ಪಂಜಾಬ್ ಕಿಂಗ್ಸ್ ತಂಡವನ್ನು ಕೂಡ ಮಣಿಸಿತ್ತು. ಹೀಗಾಗಿ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ ವಾರ್ನರ್ ಪಡೆ.

ಪಂದ್ಯದ ಮಾಹಿತಿ ಹಾಗೂ ನೇರಪ್ರಸಾರದ ವಿವರ
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ವಿರುದ್ಧದ ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೇ 20ರಂದು ಮಧ್ಯಾಹ್ನ ಆಯೋಜನೆಯಾಗಲಿದೆ. ಮಧ್ಯಾಹ್ನ 3:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 3 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೀಗಿದೆ
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದ ಮಧ್ಯೆ ಪೈಪೋಟಿಯನ್ನುಂಟು ಮಾಡುವ ನಿರೂಕ್ಷೆಯಿದೆ. ಇಲ್ಲಿ ಆರಂಭದಲ್ಲಿ ಬ್ಯಾಟರ್‌ಗಳು ಎಚ್ಚರಿಕೆಯಿಂದ ಬ್ಯಾಟಿಂಗ್ ನಡೆಸಿದರೆ ಹೆಚ್ಚಿನ ಯಶಸ್ಸು ಸಾಧ್ಯ. ಬಳಿಕ ಮೇಲುಗೈ ಸಾಧಿಸುವ ಅವಕಾಶವಿದೆ. ಆದರೆ ಮಧ್ಯಮ ಓವರ್‌ಗಳಲ್ಲಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ರಿಲೀ ರೋಸ್ಸೋ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ಯಶ್ ಧುಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಾಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್/ನಾಯಕ), ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ

Story first published: Friday, May 19, 2023, 14:43 [IST]
Other articles published on May 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+