For Quick Alerts
ALLOW NOTIFICATIONS  
For Daily Alerts
 

IPL 2023: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಟಾಸ್ ರಿಪೋರ್ಟ್, Live ಸ್ಕೋರ್, ಆಡುವ ಬಳಗ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯ ಈ ಎರಡು ತಂಡಳಿಗೂ ಲೀಗ್ ಹಂತದ ಅಂತಿಮ ಪಂದ್ಯವಾಗಿದೆ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ದೊರೆತಿದೆ.

ಇನ್ನು ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಾವುದೇ ಬದಲಾವಣೆಯಿಲ್ಲೆದ ಕಣಕ್ಕಿಳಿದಸಿದೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಂಡಿದ್ದು ಇಶಾಂತ್ ಶರ್ಮಾ ಬದಲಿಗೆ ಲಲಿತ್ ಯಾದವ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

IPL 2023, match 68, Delhi Capitals vs Chennai Super Kings, Playing XI, Live score

Live ಸ್ಕೋರ್ ಹೀಗಿದೆ

1
57122

ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸ್ತುತ 13 ಪಂದ್ಯಗಳನ್ನು ಆಡಿದ್ದು ಆ ಪೈಕಿ 7 ಗೆಲುವು ಸಾಧಿಸಿದ್ದು ಒಂದು ಪಂದ್ಯ ಮಳೆಗೆ ಆಹುತಿಯಾಗಿರುವ ಕಾರಣ 15 ಅಂಕಗಳನ್ನು ಖಾತೆಯಲ್ಲಿ ಹೊಂದಿ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಪ್ಲೇಆಫ್ ಸ್ಥಾನ ಖಚಿತಗೊಳ್ಳಬೇಕಿದ್ದರೆ ಹಾಗೂ ಇದೇ ಸ್ಥಾನದಲ್ಲಿ ಸಿಎಸ್‌ಕೆ ತಂಡ ಮುಂದುವರಿಯಬೇಕಾದರೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ ತಂಡಕ್ಕೆ ಗೆಲುವು ಅನಿವಾರ್ಯ. ಹೀಗಾಗಿ ಈ ಪಂದ್ಯ ಈಗ ಕುತೂಹಲ ಮೂಡಿಸಿದೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಈಗಾಘಲೇ ಹೇಳಿರುವಂತೆ ಟೂರ್ನಿಯಿಂದ ಹೊರಬಿದ್ದಿದ್ದು ಯಾವುದೇ ಒತ್ತಡವಿಲ್ಲದೆ ಆಡಲಿದೆ. ಅಲ್ಲದೆ ಕಳೆದ ಪಂದ್ಯದಲ್ಲಿ ವಾರ್ನರ್ ಬಳಗ ಪಂಜಾಬ್ ಕಿಂಗ್ಸ್ ತಂಡವನ್ನು ಕೂಡ ಮಣಿಸಿತ್ತು. ಹೀಗಾಗಿ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ ವಾರ್ನರ್ ಪಡೆ.

ಡೆಲ್ಲಿ ಕ್ಯಾಪಿಟಲ್ಸ ಪ್ಲೇಯಿಂಗ್ XI: ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ರಿಲೀ ರೋಸೊವ್, ಯಶ್ ಧುಲ್, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಜೆ

ಇಂಪ್ಯಾಕ್ಟ್ ಸಬ್‌ಸ್ಟಿಟ್ಯೂಟ್‌ಗಳು: ಮುಖೇಶ್ ಕುಮಾರ್, ಪೃಥ್ವಿ ಶಾ, ಪ್ರವೀಣ್ ದುಬೆ, ರಿಪಾಲ್ ಪಟೇಲ್ ಮತ್ತು ಅಭಿಷೇಕ್ ಪೊರೆಲ್

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಾಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಇಂಪ್ಯಾಕ್ಟ್ ಸಬ್‌ಸ್ಟಿಟ್ಯೂಟ್‌ಗಳು: ಮಥೀಶ ಪತಿರಾನ, ಮಿಚೆಲ್ ಸ್ಯಾಂಟ್ನರ್, ಸುಬ್ರಾಂಶು ಸೇನಾಪತಿ, ಶೇಕ್ ರಶೀದ್ ಮತ್ತು ಆಕಾಶ್ ಸಿಂಗ್

Story first published: Saturday, May 20, 2023, 15:36 [IST]
Other articles published on May 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+