For Quick Alerts
ALLOW NOTIFICATIONS  
For Daily Alerts
 

IPL 2023: ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್, ಟಾಸ್ ರಿಪೋರ್ಟ್, Live ಸ್ಕೋರ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಎರಡು ತಡಗಳಿಗೂ ಇದು ಲೀಗ್‌ ಹಂತದ ಕೊನೆಯ ಪಂದ್ಯವಾಗಿರುವ ಕಾರಣ ಮುಂಬೈ ಇಂಡಿಯನ್ಸ್ ತಂಡಕ್ಕೆ ಈ ಪಂದ್ಯ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ನಡೆಸುವ ತೀರ್ಮಾನ ತೆಗೆದುಕೊಂಡಿದೆ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಹೇಳಿ ಮಾಡಿಸಿದ ಪಿಚ್ ಆಗಿದ್ದು ಇಲ್ಲಿ ಆರಂಭದಿಂದಲೇ ಬ್ಯಾಟರ್‌ಗಳಿಗೆ ಅದ್ಭುತ ನೆರವು ದೊರೆಯಲಿದೆ. ಬೌಲರ್‌ಗಳಿಗೆ ಇಲ್ಲಿ ಕಠಿಣ ಸವಾಲು ಎದುರಾಗಲಿದ್ದರೂ ಮಧ್ಯಮ ಓವರ್‌ಗಳಲ್ಲಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ. ಮುಂಬೈ ಇಂಡಿಯನ್ಸ್ ತಂಡ ಅದ್ಭುತ ಬ್ಯಾಟಿಂಗ್ ವಿಭಾಗವನ್ನು ಹೊಂದಿದ್ದರೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗ ಪರಿಣಾಮಕಾರಿಯಾಗಿದೆ. ಹೀಗಾಗಿ ಈ ಪಂದ್ಯ ಕುತೂಹಲ ಹೆಚ್ಚಿಸಿದೆ.

IPL 2023, match 69, Mumbai Indians vs Sunrisers Hyderabad, Playing XI, Live score

Live ಸ್ಕೋರ್

1
57124

ಮುಂಬೈ ಇಂಡಿಯನ್ಸ್ ತಂಡ ಸದ್ಯ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದು ಉತ್ತಮ ಅಂತರದೊಂದಿಗೆ ಗೆದ್ದು ಎರಡು ಅಂಕಗಳ ಜೊತೆಗೆ ನೆಟ್‌ ರನ್‌ರೇಟ್‌ನಲ್ಲಿಯೂ ಮುನ್ನಡೆ ಸಾಧಿಸುವ ಒತ್ತಡದಲ್ಲಿದೆ. ಹೀಗಾಗಿ ಇಂದಿನ ಈ ಪಂದ್ಯ ರೋಹಿತ್ ಶರ್ಮಾ ತಂಡದ ಪಾಲಿಗೆ ಅತ್ಯಂತ ಮಹತ್ವದ್ದು ಎಂಬುದು ಗಮನಾರ್ಹ ಅಂಶ.

ಇತ್ತಂಡಗಳ ಆಡುವ ಬಳಗ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್‌ಡಾರ್ಫ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್

ಸನ್‌ರೈಸರ್ಸ್ ಹೈದರಾಬಾದ್: ಮಯಾಂಕ್ ಅಗರ್ವಾಲ್, ವಿವ್ರಾಂತ್ ಶರ್ಮಾ, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಹ್ಯಾರಿ ಬ್ರೂಕ್, ನಿತೀಶ್ ರೆಡ್ಡಿ, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಮಯಾಂಕ್ ದಾಗರ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್

Story first published: Sunday, May 21, 2023, 15:07 [IST]
Other articles published on May 21, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+