GT vs GT Preview: ತವರಿನಲ್ಲಿ ಜಯ ಸಾಧಿಸ್ತಾರ ಡೆಲ್ಲಿ ಕ್ಯಾಪಿಟಲ್ಸ್? ಪ್ಲೇಯಿಂಗ್ 11, ಪಿಚ್ ವರದಿ
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಏಳನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಲಕ್ನೋದಲ್ಲಿ ಮೊದಲನೇ ಪಂದ್ಯವನ್ನು ಸೋತ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎರಡನೇ ಪಂದ್ಯವನ್ನು ತವರಿನಲ್ಲಿ ಆಡಲು ಸಿದ್ಧವಾಗಿದೆ. ತವರಿನಲ್ಲಿ ನಡೆದ ಮೊದಲನೇ ಪಂದ್ಯವನ್ನು ಗೆದ್ದಿರುವ ಗುಜರಾತ್ ಜೈಂಟ್ಸ್ ಹೊರಗಿನ ಪಂದ್ಯವನ್ನು ಆಡಲು ಸಜ್ಜಾಗಿದೆ.
ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 50 ರನ್‌ಗಳಿಂದ ಸೋಲನುಭವಿಸಿತ್ತು. ಮಾರ್ಕ್‌ವುಡ್ 5 ವಿಕೆಟ್ ಪಡೆಯುವ ಮೂಲಕ ಲಕ್ನೋ ತಂಡಕ್ಕೆ ದೊಡ್ಡ ಗೆಲುವು ತಂದುಕೊಟ್ಟಿದ್ದರು. ನಾಯಕ ಡೇವಿಡ್ ವಾರ್ನರ್ ಅವರನ್ನು ಹೊರತುಪಡಿಸಿ ಉಳಿದ ಬ್ಯಾಟರ್ ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದರು.

ತಂಡದ ಬೌಲಿಂಗ್ ವಿಭಾಗ ಕೂಡ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಮೊದಲನೇ ಪಂದ್ಯಕ್ಕೆ ಅನ್ರಿಚ್ ನೋಕಿಯಾ, ಲುಂಗಿ ಎನ್‌ಗಿಡಿ ಇಲ್ಲದಿರುವುದು ಬೌಲಿಂಗ್ ವಿಭಾಗಕ್ಕೆ ದೊಡ್ಡ ಹೊಡೆತ ಬಿದ್ದಿತ್ತು. ಮಂಗಳವಾರ ನಡೆಯಲಿರುವ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಮುನ್ನ ಈ ಇಬ್ಬರು ತಂಡವನ್ನು ಸೇರಿಕೊಂಡಿದ್ದು, ಅನ್ರಿಚ್ ನೋಕಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
ತಂಡದ ಸ್ಫೋಟಕ ಬ್ಯಾಟರ್ ಮಿಚೆಲ್ ಮಾರ್ಷ್ ಮೊದಲನೇ ಪಂದ್ಯದಲ್ಲಿ ವಿಫಲವಾಗಿದ್ದು, ಎರಡನೇ ಪಂದ್ಯದಲ್ಲಿ ತಮ್ಮ ಆಟವನ್ನು ಪ್ರದರ್ಶಿಸಬೇಕಿದೆ. ರೋವ್ಮನ್ ಪೊವೆಲ್, ಪೃಥ್ವಿ ಶಾ, ಸರ್ಫರಾಜ್ ಖಾನ್ ಕೂಡ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಹಾಲಿ ಚಾಂಪಿಯನ್‌ಗಳ ವಿರುದ್ಧ ಗೆಲ್ಲಲು ಅವಕಾಶ ಇರುತ್ತದೆ.

ಚಾಂಪಿಯನ್ ಆಟ ಮುಂದುವರೆಸುತ್ತಾ ಗುಜರಾತ್
ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿರುವ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ಉತ್ತಮ ಫಾರ್ಮ್‌ನಲ್ಲಿದೆ. ಮೊದಲನೇ ಪಂದ್ಯದಲ್ಲಿ ಗಾಯಗೊಂಡ ಕೇನ್ ವಿಲಿಯಮ್ಸನ್ ಐಪಿಎಲ್‌ನಿಂದ ಹೊರಬಿದ್ದದ್ದು ತಂಡಕ್ಕೆ ಹಿನ್ನಡೆಯಾದರೂ, ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಮುನ್ನ ಡೇವಿಡ್ ಮಿಲ್ಲರ್ ತಂಡವನ್ನು ಸೇರಿಕೊಂಡಿರುವುದು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವಿಭಾಗಕ್ಕೆ ಹೆಚ್ಚಿನ ಬಲ ತಂದುಕೊಟ್ಟಿದೆ.
ಕಳೆದ ಆವೃತ್ತಿಯಲ್ಲಿ ಎರಡೂ ತಂಡಗಳು ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು, ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಗೆಲುವು ಸಾಧಿಸಿತ್ತು. ಇಲ್ಲಿ 77 ಐಪಿಎಲ್ ಪಂದ್ಯಗಳು ನಡೆದಿದ್ದು, 34 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿದ್ದರೆ, 42 ಪಂದ್ಯಗಳಲ್ಲಿ ಚೇಸ್ ಮಾಡಿದ ತಂಡ ಗೆಲುವು ಸಾಧಿಸಿದೆ. ಮೊದಲ ಇನ್ನಿಂಗ್ಸ್ ಸರಾಸರಿ 164.5 ಇರುವುದರಿಂದ ಹೈ ಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದು.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ :
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನೊಕಿಯಾ, ಮುಖೇಶ್ ಕುಮಾರ್. ಇಂಪ್ಯಾಕ್ಟ್ ಪ್ಲೇಯರ್: ಚೇತನ್ ಸಕರಿಯಾ, ಲಲಿತ್ ಯಾದವ್, ಖಲೀಲ್ ಅಹ್ಮದ್, ರಿಪಾಲ್ ಪಟೇಲ್, ಯಶ್ ಧುಲ್,
ಗುಜರಾತ್ ಟೈಟಾನ್ಸ್ ತಂಡ: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರಶೀದ್ ಖಾನ್, ಮೊಹಮ್ಮದ್ ಶಮಿ, ಯಶ್ ದಯಾಳ್, ಅಲ್ಜಾರಿ ಜೋಸೆಫ್. ಇಂಪ್ಯಾಕ್ಟ್ ಪ್ಲೇಯರ್: ಶ್ರೀಕರ್ ಭರತ್, ಸಾಯಿ ಕಿಶೋರ್, ಶಿವಂ ಮಾವಿ, ಜಯಂತ್ ಯಾದವ್, ಮೋಹಿತ್ ಶರ್ಮಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications