For Quick Alerts
ALLOW NOTIFICATIONS  
For Daily Alerts
 

RCB vs KKR Preview: ಕೆಕೆಆರ್ ಸವಾಲಿಗೆ ಆರ್‌ಸಿಬಿ ಸಜ್ಜು: ಸಂಭಾವ್ಯ ಆಡುವ ಬಳಗ, ಹವಾಮಾನ ವರದಿ ಹೇಗಿದೆ?

IPL 2023, Match 9, RCB vs KKR Preview, Predicted Playing 11, Pitch Report, And Weather Forecast in Kannada

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಆತ್ಮವಿಶ್ವಾಸದಿಂದ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಸಂದರ್ಭದಲ್ಲಿ ಆರ್‌ಸಿಬಿ ಸವಾಲೊಡ್ಡುತ್ತಿರುವುದು ನಿತೀಶ್ ರಾಣಾ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್. ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಎರಡು ತಂಡಗಳ ನಡುವಿನ ಪೈಪೊಟಿ ಕುತೂಹಲ ಮೂಡಿಸಿದೆ.

ಆರ್‌ಸಿಬಿ ತಮ್ಮ ಮೊದಲ ಪಂದ್ಯವನ್ನು ತವರಿನ ಪ್ರೇಕ್ಷಕರ ಸಮ್ಮುಖದಲ್ಲಿ ಭರ್ಜರಿಯಾಗಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿತ್ತು. ಇದೀಗ ತವರಿನಾಚೆ ನಡೆಯುವ ಪಂದ್ಯದಲ್ಲಿ ಫಾಫ್ ಪಡೆ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡದ ಬೌಲಿಂಗ್ ವಿಭಾಗದ ಪ್ರದರ್ಶನ ಕೂಡ ಅಮೋಘವಾಗಿತ್ತು. ಬ್ಯಾಟಿಂಗ್‌ನಲ್ಲಿ ಆರಂಭಿಕರಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ಬಹುತೇಕ ಪಂದ್ಯವನ್ನು ಅಂತ್ಯಗೊಳಿಸಿದ್ದರು. ಹೀಗಾಗಿ ಆರ್‌ಸಿಬಿ ತಂಡದ ಬ್ಯಾಟಿಂಗ್ ಲೈನಪ್‌ನ ಉಳಿದ ಆಟಗಾರರ ಪ್ರದರ್ಶನ ಕೂಡ ಕುತೂಹಲ ಕೆರಳಿಸಿದೆ.

ಆರ್‌ಸಿಬಿ ತಂಡದ ಪ್ರಮುಖ ಸುದ್ದಿಗಳು
*ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಗಾಯಗೊಂಡಿರುವ ವೇಗಿ ರೀಸ್ ಟೋಪ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಎರಡನೇ ಪಂದ್ಯಕ್ಕೆ ಲಭ್ಯವಿರುವುದಿಲ್ಲ. ಹಾಗಾಗಿ ಡೇವಿಡ್ ವಿಲ್ಲಿ ಟೋಪ್ಲಿ ಬದಲಿಗೆ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.
*ಇನ್ನು ಜೋಶ್ ಹೇಜಲ್‌ವುಡ್ ಇನ್ನು ಕೂಡ ಸಂಪೂರ್ಣವಾಗಿ ಗಾಯದಿಂದ ಚೇತರಿಸಿಕೊಂಡಿಲ್ಲ. ಹಾಗಾಗಿ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಅಲಭ್ಯವಾಗಲಿದ್ದಾರೆ.
* ಬ್ಯಾಟರ್ ರಜತ್ ಪಾಟಿದಾರ್ ಕೂಡ ಈ ವರ್ಷದ ಟೂರ್ನಿಯಿಮದ ಸಂಪೂರ್ಣವಾಗಿ ಹೊರಗುಳಿದಿದ್ದು ಅವರಿಗೆ ಬದಲಿ ಆಟಗಾರನನ್ನು ಇನ್ನಷ್ಟೇ ಹೆಸರಿಸಬೇಕಿದೆ.
*ಟೋಪ್ಲಿ ಹೊರತು ಪಡಿಸಿದರೆ ಮೊದಲ ಪಂದ್ಯದಲ್ಲಿ ಆಡಿದ ಆಡುವ ಬಳಗದೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಆರ್‌ಸಿಬಿ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಏಪ್ರಿಲ್ 6 ಗುರುವಾರದಂದು ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಟಾಸ್ ಪ್ರಕ್ರಿಯೆ 7 ಗಂಟೆಗೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಈ ಪಂದ್ಯವನ್ನು ನೇರಪ್ರಸಾರ ಮಾಡಲಿದ್ದು ಜಿಯೋ ಸಿನಿಮಾದಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕ ಪಂದ್ಯವನ್ನು ಉಚಿತವಾಗಿ ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹೀಗಿದೆ
ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದ ಪಿಚ್ ಅತ್ಯುತ್ತಮ ಪೈಪೋಟಿಯ ಪಿಚ್ ಆಗಿರಲಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗಕ್ಕೂ ಉತ್ತಮ ನೆರವು ದೊರೆಯಲಿದೆ. ಇನ್ನು ಇಲ್ಲಿ ಈವರೆಗೆ 77 ಐಪಿಎಲ್ ಪಂದ್ಯಗಳು ನಡೆದಿದ್ದು 45 ಬಾರಿ ರನ್ ಬೆನ್ನಟ್ಟಿದ ತಂಡ ಗೆಲುವು ಸಾಧಿಸಿದ್ದರೆ 31 ಬಾರಿ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಗೆದ್ದಿದೆ. ಒಂದು ಪಂದ್ಯ ಫಲಿತಾಂಶವಿಲ್ಲದೆ ರದ್ದಾಗಿದೆ. ಇನ್ನು ಮೊದಲು ಬ್ಯಾಟಿಂಗ್ ನಡೆಸಿದ ತಂಡದ ಸರಾಸರಿ ಸ್ಕೋರ್ 160 ರನ್. ಇಲ್ಲಿ ಟಾ್ಸ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಖಚಿತ.

ಸಂಭಾವ್ಯ ಆಡುವ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕೆಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್

ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಅನುಕುಲ್ ರಾಯ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ

Story first published: Wednesday, April 5, 2023, 10:42 [IST]
Other articles published on Apr 5, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+