For Quick Alerts
ALLOW NOTIFICATIONS  
For Daily Alerts
 

MI vs GT: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹೆಚ್ಚು ಗೆಲುವು ಯಾರಿಗೆ? ಚೇಸಿಂಗ್‌ನಲ್ಲಿ ಗೆದ್ದದ್ದೆಷ್ಟು?

IPL 2023: MI and GT winning and losing matches details in Narendra Modi stadium

ಸದ್ಯ ಜರುಗುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಈ ಭಾನುವಾರ ( ಮೇ 28 ) ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಮುಕ್ತಾಯವಾಗಲಿದೆ. ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಫೈನಲ್ ಪ್ರವೇಶಿಸಿದೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿರುವ ಗುಜರಾತ್ ಟೈಟನ್ಸ್ ಇಂದು ( ಮೇ 26 ) ನಡೆಯಲಿರುವ ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಫೈನಲ್ ಪ್ರವೇಶಿಸುವ ಮತ್ತೊಂದು ಅವಕಾಶವನ್ನು ಹೊಂದಿದೆ.

ಈ ಪಂದ್ಯದಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಬರೋಬ್ಬರಿ 81 ರನ್‌ಗಳ ಅಂತರದಿಂದ ಗೆದ್ದ ಮುಂಬೈ ಇಂಡಿಯನ್ಸ್ ಕಣಕ್ಕಿಳಿಯಲಿದ್ದು, ಫೈನಲ್ ಪ್ರವೇಶಿಸಿ ಆರನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಯೋಜನೆಯಲ್ಲಿದೆ.

ಇನ್ನು ಇತ್ತಂಡಗಳ ನಡುವಿನ ಈ ಪಂದ್ಯ ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇಂದು ಸಂಜೆ 7.30ಕ್ಕೆ ಆರಂಭಗೊಂಡಿದೆ. ಇನ್ನು ಈ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೂ ಎಷ್ಟು ಐಪಿಎಲ್ ಪಂದ್ಯಗಳು ನಡೆದಿವೆ, ಈ ಕ್ರೀಡಾಂಗಣದಲ್ಲಿ ಹರಿದು ಬಂದಿರುವ ಗರಿಷ್ಟ ರನ್ ಎಷ್ಟು, ಇಂದು ಕಣಕ್ಕಿಳಿಯುತ್ತಿರುವ ತಂಡಗಳ ಪೈಕಿ ಹೆಚ್ಚು ಗೆದ್ದಿರುವ ತಂಡ ಯಾವುದು ಹಾಗೂ ಇಲ್ಲಿ ನಡೆದ ಪಂದ್ಯಗಳ ಪೈಕಿ ಹೆಚ್ಚು ಗೆದ್ದಿರುವುದು ಚೇಸಿಂಗ್‌ನಲ್ಲಾ ಅಥವಾ ಮೊದಲ ಬ್ಯಾಟಿಂಗ್ ಮಾಡಿದ ತಂಡಗಳ ಎಂಬ ಮಾಹಿತಿ ಈ ಕೆಳಕಂಡಂತಿದೆ.

ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿರುವ ಒಟ್ಟು ಐಪಿಎಲ್ ಪಂದ್ಯಗಳು ಹಾಗೂ ಫಲಿತಾಂಶ: ಇಲ್ಲಿ ಇಲ್ಲಿಯವರೆಗೂ ಒಟ್ಟು 25 ಐಪಿಎಲ್ ಪಂದ್ಯಗಳು ಜರುಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ತಂಡ ಒಟ್ಟು 12 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಚೇಸಿಂಗ್ ಮಾಡಿದ ತಂಡ 13 ಪಂದ್ಯಗಳಲ್ಲಿ ಗೆದ್ದಿದೆ.

ಅತ್ತ ಈ ಕ್ರೀಡಾಂಗಣ ತವರು ನೆಲವಾಗಿರುವ ಗುಜರಾತ್ ಟೈಟನ್ಸ್ ತಂಡ ಇಲ್ಲಿ ಒಟ್ಟು ಎಂಟು ಪಂದ್ಯಗಳಲ್ಲಿ ಸೆಣಸಾಡಿದ್ದು, ಐದು ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಮೂರು ಪಂದ್ಯಗಳಲ್ಲಿ ಸೋತಿದೆ. ಈ ಗೆದ್ದ ಪಂದ್ಯಗಳ ಪೈಕಿ ಮೂರು ಪಂದ್ಯಗಳನ್ನು ಮೊದಲು ಬ್ಯಾಟಿಂಗ್ ಮಾಡಿ ಗೆದ್ದಿರುವ ಗುಜರಾತ್ ಟೈಟನ್ಸ್ ಎರಡು ಪಂದ್ಯಗಳನ್ನು ಚೇಸಿಂಗ್ ಮಾಡಿ ಗೆದ್ದಿದೆ.

ಇನ್ನು ಮುಂಬೈ ಇಂಡಿಯನ್ಸ್ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದ್ದು, ಉಳಿದ ಎರಡು ಪಂದ್ಯಗಳಲ್ಲಿ ಸೋತಿದೆ. ಈ ಗೆದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್‌ ಮಾಡಿದ್ದು, ಚೇಸಿಂಗ್‌ನಲ್ಲಿ ಯಾವುದೇ ಪಂದ್ಯವನ್ನೂ ಸಹ ಗೆದ್ದಿಲ್ಲ.

ಇನ್ನು ಇತ್ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಮೂರನೇ ಪಂದ್ಯ ಇದಾಗಿದ್ದು, ಇಲ್ಲಿಯವರೆಗೂ ಒಟ್ಟು ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿವೆ. ಈ ಪೈಕಿ ಎರಡರಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದಿದ್ದರೆ, ಒಂದರಲ್ಲಿ ಮಾತ್ರ ಗುಜರಾತ್ ಟೈಟನ್ಸ್ ಗೆದ್ದಿದೆ.

ಸಂಭಾವ್ಯ ಆಡುವ ಬಳಗ:
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಕ್ಯಾಮೆರಾನ್ ಗ್ರೀನ್, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್, ಹೃತಿಕ್ ಶೋಕೀನ್, ಆಕಾಶ್ ಮಧ್ವಲ್
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ದಸುನ್ ಶನಕ, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ದರ್ಶನ್ ನಲ್ಕಂಡೆ, ವಿಜಯ್ ಶಂಕರ್

Story first published: Friday, May 26, 2023, 15:23 [IST]
Other articles published on May 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+