ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸೂರ್ಯಕುಮಾರ್ ಯಾದವ್ ಅಬ್ಬರಕ್ಕೆ ಎದುರಾಳಿ ದಂಗಾಗಿದೆ. ಗುಜರಾತ್ ಟೈಟನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರವಾಗಿ ಸೂರ್ಯಕುಮಾರ್ ಯಾದವ್ ಸ್ಪೊಟಕ ಶತಕ ಸಿಡಿಸಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ ತಂಡ ವಾಂಖೆಡೆ ಕ್ರೀಡಾಂಗಣದಲ್ಲಿ ಬೃಹತ್ ಗುರಿಯನ್ನು ನಿಗದಿಪಡಿಸಿದೆ.
ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಇಶಾನ್ ಕಿಶನ್ ಹಾಗೂ ರೋಹಿತ್ ಶರ್ಮಾ ಜೋಡಿ ಮೊದಲ ವಿಕೆಟ್‌ಗೆ 61 ರನ್‌ಗಳ ಜೊತೆಯಾಟ ನೀಡಿದರು. ಆದರೆ 7ನೇ ಓವರ್‌ನಲ್ಲಿ ಈ ಇಬ್ಬರು ಆಟಗಾರರು ಕೂಡ ರಶೀದ್ ಖಾನ್‌ಗೆ ವಿಕೆಟ್ ಒಪ್ಪಿಸುವ ಮೂಲಕ ಮುಂಬೈ ಇಂಡಿಯನ್ಸ್ ಸಂಕಷ್ಟಕ್ಕೆ ಸಿಲುಕುವ ಸೂಚನೆಯಿತ್ತು. ಆದರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೆ ಆಧಾರವಾಗುದ್ದು ಸೂರ್ಯಕುಮಾರ್ ಯಾದವ್.

ಈ ಪಮದ್ಯದಲ್ಲಿ ಸೂರ್ಯಕುಮಾರ್ ಯಾದವ್ ಏಕಾಂಗಿಯಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ತಂಡ 216 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಲು ಕಾರಣವಾದರು. ಕೇವಲ 49 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ 210.20 ಸ್ಟ್ರೈಕ್‌ರೇಟ್‌ನಲ್ಲಿ ಬರೊಬ್ಬರಿ 103 ರನ್‌ಗಳಿಸಿದ್ದಾರೆ. ಇದರಲ್ಲಿ 11 ಬೌಂಡರಿ ಹಾಗೂ 6 ಸಿಕ್ಸರ್‌ಗಳು ಒಳಗೊಂಡಿತ್ತು. ವಿಷ್ಣು ವಿನೋದ್ 30 ರನ್‌ಗಳ ಕೊಡುಗೆ ನಿಡುವ ಮೂಲಕ ಸೂರ್ಯಕುಮಾರ್‌ಗೆ ಕೆಲ ಕಾಲ ಉತ್ತಮ ಸಾಥ್ ನೀಡಿದರು.
ಮುಂಬೈ ಇಂಡಿಯನ್ಸ್ ಆಡುವ ಬಳಗ: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ವಿಷ್ಣು ವಿನೋದ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಕುಮಾರ್ ಕಾರ್ತಿಕೇಯ
ಬೆಂಚ್: ರಮಣದೀಪ್ ಸಿಂಗ್, ಆಕಾಶ್ ಮಧ್ವಲ್, ಡೆವಾಲ್ಡ್ ಬ್ರೆವಿಸ್, ಸಂದೀಪ್ ವಾರಿಯರ್, ಹೃತಿಕ್ ಶೋಕೀನ್, ಟ್ರಿಸ್ಟಾನ್ ಸ್ಟಬ್ಸ್, ರಾಘವ್ ಗೋಯಲ್, ಜೋಫ್ರಾ ಆರ್ಚರ್, ರಿಲೆ ಮೆರೆಡಿತ್, ಶಮ್ಸ್ ಮುಲಾನಿ, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ದುವಾನ್ ಜಾನ್ಸೆನ್, ಅರ್ಷದ್ ಖಾನ್
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ಮೋಹಿತ್ ಶರ್ಮಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ನೂರ್ ಅಹ್ಮದ್
ಬೆಂಚ್: ಶುಬ್ಮನ್ ಗಿಲ್, ಶ್ರೀಕರ್ ಭರತ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಸಾಯಿ ಸುದರ್ಶನ್, ದಾಸುನ್ ಶನಕ, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಜೋಶುವಾ ಲಿಟಲ್, ಓಡಿಯನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್, ಯಶ್ ದಯಾಳ್