MI vs KKR: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದ ರೋಹಿತ್ ಶರ್ಮಾ: ಕಾರಣವೇನು?
ಐಪಿಎಲ್‌ನಲ್ಲಿ ಭಾನುವಾರ ಡಬಲ್ ಹೆಡ್ಡರ್ ಪಂದ್ಯಗಳು ನಡೆಯುತ್ತಿದ್ದು ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ಆಡುವ ಬಳಗದಿಂದ ಹೊರಗುಳಿದಿದ್ದು ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ಫಾರ್ಮ್‌ಗೆ ಮರಳಿದ್ದಲ್ಲದೆ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದರು. ಇದೀಗ ಕೆಕೆಆರ್ ವಿರುದ್ಧ ಪಂದ್ಯದಲ್ಲಿ ರೋಹಿತ್ ಆಡದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿರುವುದರಲ್ಲಿ ಅನುಮಾನವಿಲ್ಲ. ಆದರೆ ಅನಾರೋಗ್ಯದ ಕಾರಣ ರೋಹಿತ್ ಶರ್ಮಾ ಈ ಪಂದ್ಯದಿಂದ ಅನಿವಾರ್ಯವಾಗಿ ಹೊರಗುಳಿಯುವಂತಾಗಿದೆ.

ರೋಹಿತ್ ಶರ್ಮಾ ಹೊಟ್ಟೆನೋವಿನಿಂದ ಬಳಲುತ್ತಿರುವ ಕಾರಣ ಈ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಹೀಗಾಗಿ ಉನಾಯಕ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದಿದ್ದು ಮುಂಬೈ ಇಂಡಿಯನ್ಸ್ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಎರಡನೇ ಗೆಲುವಿನ ಮೇಲೆ ಮುಂಬೈ ಕಣ್ಣು
ಇನ್ನು ಈ ಬಾರಿಯ ಐಪಿಎಲ್‌ನಲ್ಲಿಯೂ ಮುಂಬೈ ಇಂಡಿಯನ್ಸ್ ತಂಡ ಕಳಪೆ ಆರಂಭವ್ನು ಪಡೆದುಕೊಂಡಿತು. ಆರಂಭಿಕ ಎರಡು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಸೋಲು ಕಂಡಿತ್ತು. ಆದರೆ ಅಮತಿಮ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದು ಮೊದಲ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಇದೀಗ ಈ ಭಾರಿಯ ಆವೃತ್ತಿಯಲ್ಲಿ ನಾಲ್ಕನೇ ಪಂದ್ಯವನ್ನಾಡುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಎರಡನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಪದಾರ್ಪಣೆ ಮಾಡಿದ ಅರ್ಜುನ್ ತೆಂಡೂಲ್ಕರ್
ಇನ್ನು ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದಾರೆ. ನಾಯಕ ರೋಹಿತ್ ಶರ್ಮಾ ಅವರಿಂದ ಮುಂಬೈ ಇಂಡಿಯನ್ಸ್ ಕ್ಯಾಪ್ ಸ್ವೀಕರಿಸಿದ ಅರ್ಜುನ್ ತೆಂಡೂಲ್ಕರ್ ಎರಡು ಆವೃತ್ತಿಗಳಲ್ಲಿ ಬೆಂಚ್ ಕಾದ ಬಳಿಕ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಇತ್ತಂಡಗಳ ಆಡುವ ಬಳಗ
ಮುಂಬೈ ಇಂಡಿಯನ್ಸ್ ಆಡುವ ಬಳಗ: ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ಪಿಯೂಷ್ ಚಾವ್ಲಾ, ಹೃತಿಕ್ ಶೋಕೀನ್, ಡುವಾನ್ ಜಾನ್ಸೆನ್, ರಿಲೆ ಮೆರೆಡಿತ್
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications