MI vs PBKS: ಅಂತಿಮ ಹಂತದಲ್ಲಿ ಪಂಜಾಬ್ ಕಿಂಗ್ಸ್ ರೌದ್ರಾವತಾರ: ಮುಂಬೈಗೆ ಗೆಲ್ಲಲು 215 ರನ್ ಗುರಿ
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದೆ. ಆರಂಭದಲ್ಲಿ ಸಾಧಾರಣ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ಮುಂಬೈಗೆ ಸುಲಭ ಗುರಿ ನೀಡಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಕೊನೆಯ ಆರು ಓವರ್‌ಗಳಲ್ಲಿ ಸ್ಪೋಟಕ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡ 215 ರನ್‌ಗಳ ಬೃಹತ್ ಗುರಿಯನ್ನು ಮುಂಬೈಗೆ ನೀಡಿದೆ.
ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಈ ಪಂದ್ಯದಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದಿ ಹಂಗಾಮಿ ನಾಯಕ ಸ್ಯಾಮ್ ಕರನ್. 29 ಎಸೆತಗಳಲ್ಲಿ 55 ರನ್ ಬಾರಿಸಿದ ಸ್ಯಾಮ್ ಕರನ್ ತಂಡ ದೊಡ್ಡ ಮೊತ್ತದತ್ತ ದಾಪುಗಾಲಿಕ್ಕಲು ಕಾರಣವಾದರು. ಹರ್‌ಪ್ರೀತ್ ಸಿಂಗ್ ಭಾಟಿಯಾ 28 ಎಸೆತಗಳಲ್ಲಿ 41 ರನ್ ಬಾರಿಸಿದರೆ ಜಿತೇಶ್ ಶರ್ಮಾ ಕೇವಲ 7 ಎಸೆತಗಳಲ್ಲಿ 25 ರನ್ ಬಾರಿಸಿ ಅಬ್ಬರಿಸಿದರು.

ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಕೊನೆಯ ಆರು ಓವರ್‌ಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸಿಕೊಂಡಿತು. ಮೊದಲ 14 ಓವರ್‌ಗಳ ಅಂತ್ಯಕ್ಕೆ ಪಂಜಾಬ್ ಕಿಂಗ್ಸ್ 105 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತ್ತು. ಹೀಗಾಗಿ ಮುಂಬೈನ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಪಂಜಾಬ್ ಸುಲಭ ಗುರಿಯನ್ನು ಮುಂದಿಡಲಿದೆ ಎಂದೇ ಬಹುತೇಕ ಅಭಿಮಾನಿಗಳು ಭಾವಿಸಿದ್ದರು. ಆದರೆ ಕೊನೆಯ ಆರು ಓವರ್‌ಗಳಲ್ಲಿ ಪಂಜಾಬ್ ಕಿಂಗ್ಸ್ ತಂಡ ಬರೊಬ್ಬರಿ 109 ರನ್‌ಗಳನ್ನು ಕಲೆಹಾಕಿದೆ. ಅರ್ಜುನ್ ತೆಂಡೂಲ್ಕರ್ ಎಸೆತ 16ನೇ ಓವರ್‌ನಲ್ಲಿ 31 ರನ್ ಹರಿದು ಬಂದಿದ್ದರೆ ಕ್ಯಾಮರೂನ್ ಗ್ರೀನ್ ಎಸೆದ 18ನೇ ಓವರ್‌ನಲ್ಲಿ 25 ರನ್ ಹರಿದು ಬಂದಿದೆ
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್
ಬೆಂಚ್: ನೆಹಾಲ್ ವಧೇರಾ, ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ಕುಮಾರ್ ಕಾರ್ತಿಕೇಯ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಸಂದೀಪ್ ವಾರಿಯರ್, ಆಕಾಶ್ ಮಾಧ್ವಲ್, ಅರ್ಷದ್ ಖಾನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್
ಪಂಜಾಬ್ ಕಿಂಗ್ಸ್: ಅಥರ್ವ ಟೈಡೆ, ಪ್ರಭ್‌ಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಲಿಯಾಮ್ ಲಿವಿಂಗ್‌ಸ್ಟನ್, ಸ್ಯಾಮ್ ಕರನ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್‌ಪ್ರೀತ್ ಸಿಂಗ್ ಭಾಟಿಯಾ, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications