Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, MI vs RCB: ಮುಂಬೈ ಇಂಡಿಯನ್ಸ್‌ಗೆ ಗೆಲ್ಲಲು ಭರ್ತಿ 200 ರನ್‌ಗಳ ಗುರಿ ನೀಡಿದ ಆರ್‌ಸಿಬಿ

IPL 2023, MI vs RCB: Mumbai Indians need 200 runs to win against RCB

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮತ್ತೊಮ್ಮೆ ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಸ್ಪೋಟಮ ಪ್ರದರ್ಶಣ ನೀಡಿದ್ದು ಈ ಆವೃತ್ತಿಯ ನಾಲ್ಕನೇ ಶತಕದ ಜೊತೆಯಾಟವನ್ನು ನೀಡಿದ್ದಾರೆ. ಈ ಪ್ರದರ್ಶನದಿಂದಾಗಿ ಆರ್‌ಸಿಬಿ ತಂಡ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ 200 ರನ್‌ಗಳ ಬೃಹತ್ ಗುರಿ ನೀಡಿದೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಪಡೆದ ಆರ್‌ಸಿಬಿ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ವಿರಾಟ್ ಕೊಹ್ಲಿ ಮೊದಲ ಓವರ್‌ನಲ್ಲಿಯೇ ವಿಕೆಟ್ ಕಳೆದುಕೊಂಡರೆ ಅನುಜ್ ರಾವತ್ 6 ರನ್‌ಗಳಿಸಿ ಔಟಾದರು. ಆದರೆ ನಂತರ ಜೊತೆಯಾದ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ಸ್ಪೋಟಕ ಪ್ರದರ್ಶನ ನಿಡುತ್ತಾ ಅಬ್ಬರಿಸಿದರು. ಈ ಜೋಡಿ 61 ಎಸೆತಗಳಲ್ಲಿ ಬರೊಬ್ಬರಿ 120 ರನ್‌ಗಳ ಜೊತೆಯಾಟ ನೀಡಿ ನಿರ್ಗಮಿಸಿದರು.

33 ಎಸೆತಗಳನ್ನು ಎದುರಿಸಿದ ಗ್ಲೆನ್ ಮ್ಯಾಕ್ಸ್‌ವೆಲ್ 8 ಬೌಂಡರಿ ಹಾಗೂ 4 ಸಿಕ್ಸರ್ ಬಾರಿಸಿದ್ದು 68 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಬಂದ ಲೋಮ್ರೋರ್ ಕೂಡ ಕೇವಲ ಒಂದು ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಬಳಿಕ ನಾಯಕ ಫಾಫ್ ಡು ಪ್ಲೆಸಿಸ್ ಕೂಡ 41 ಎಸೆತಗಳಲ್ಲಿ 65 ರನ್‌ಗಳಿಸಿ ಔಟಾದರು. ಇನ್ನು ಈ ಪಂದ್ಯದಲ್ಲಿ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಕೆಳ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದರು. 18 ಎಸೆತಗಳಲ್ಲಿ 30 ರನ್ ಬಾರಿಸಿದ ಅವರು ತಂಡದ ಮೊತ್ತ 200ರ ಸನಿಹಕ್ಕೆ ತಲುಪಲು ಕಾರಣವಾದರು. ಅಂತಿಮವಾಗಿ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಆರ್‌ಸಿಬಿ 199 ರನ್‌ಗಳಿಸಿದೆ.

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆನ್ಡಾರ್ಫ್

ಬೆಂಚ್: ರಮಣದೀಪ್ ಸಿಂಗ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಸಂದೀಪ್ ವಾರಿಯರ್, ರಾಘವ್ ಗೋಯಲ್, ಡೆವಾಲ್ಡ್ ಬ್ರೆವಿಸ್, ರಿಲೆ ಮೆರೆಡಿತ್, ಶಮ್ಸ್ ಮುಲಾನಿ, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ಹೃತಿಕ್ ಶೋಕೀನ್, ದುವಾನ್ ಜಾನ್ಸೆನ್, ಅರ್ಷದ್ ಖಾನ್

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಕೇದಾರ್ ಜಾಧವ್, ಮೈಕೆಲ್ ಬ್ರೇಸ್‌ವೆಲ್, ಸುಯಶ್ ಪ್ರಭುದೇಸಾಯಿ, ಕರ್ಣ್ ಶರ್ಮಾ, ಶಹಬಾಜ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ, ಮನೋಜ್ ಭಾಂಡಗೆ, ವೇಯ್ನ್ ಪಾರ್ನೆಲ್, ಸೋನು ಯಾದವ್, ಫಿನ್ ಅಲೆನ್, ಸಿದ್ದಾರ್ಥ್ ಕೌಲ್

Story first published: Tuesday, May 9, 2023, 21:37 [IST]
Other articles published on May 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+