MI vs RR: ಯಶಸ್ವಿ ಜೈಸ್ವಾಲ್ ಹೋರಾಟ ವ್ಯರ್ಥ: ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್
ಇಂಡಿಯನ್ ಸೂಪರ್ ಲೀಗ್‌ನಲ್ಲಿ ಇಂದಿನ ಎರಡು ಪಂದ್ಯಗಳು ಕಡ ರೋಚಕವಾಗಿ ಅಂತ್ಯಕಂಡಿದೆ. ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಮಡಿಯನ್ಸ್ ತಂಡದ ಗೆಲುವಿಗೆ 213 ರನ್‌ಗಳ ಬೃಹತ್ ಗುರಿ ನೀಡಲಾಗಿದ್ದರು ಕೂಡ ರೋಹಿತ್ ಶರ್ಮಾ ಪಡೆ ಈ ಪಂದ್ಯವನ್ನು ಗೆದ್ದುಕೊಂಡಿದೆ. ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್ ಹಾಗೂ ಟಿಮ್ ಡೇವಿಡ್ ಅವರ ಸ್ಪೋಟಕ ಪ್ರದರ್ಶನದಿಂದಾಗಿ ಈ ಹೈಸ್ಕೋರಿಂಗ್ ಪಂದ್ಯವನ್ನು ಮುಂಬೈ ಇಂಡಿಯನ್ಸ್ 6 ವಿಕೆಟ್‌ಗಳ ಅಂತರದಿಂದ ಗೆದ್ದುಬೀಗಿದೆ.
ರಾಜಸ್ಥಾನ್ ರಾಯಲ್ಸ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಆರಂಭದಲ್ಲೇ ಆಘಾತ ಉಂಟಾಯಿತು. ನಾಯಕ ರೋಹಿತ್ ಶರ್ಮಾ ಐದು ಎಸೆತಗಳಲ್ಲಿ ಕೇವಲ 3 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ನಂತರ ಮುಂಬೈ ಇಂಡಿಯನ್ಸ ತಂಡದ ದಾಂಡಿಗರಿಂದ ಅದ್ಭುತ ಜೊತೆಯಾಟ ಬಂತು.

ಈ ಪಂದ್ಯದಲ್ಲಿ ಇಶಾನ್ ಕಿಶನ್ 28 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಕ್ಯಾಮರೂನ್ ಗ್ರೀನ್ 26 ಎಸೆತಗಳಲ್ಲಿ 44 ರನ್ ಬಾರಿಸಿದರು. ಇನ್ನು ಸೂರ್ಯಕುಮಾರ್ ಯಾದವ್ 29 ಎಸೆತಗಳಲ್ಲಿ 55 ರನ್ ಬಾರಿಸಿದ್ದು ಅಂತಿಮ ಹಂತದಲ್ಲಿ ತಿಲಕ್ ವರ್ಮಾ 21 ಎಸೆತದಲ್ಲಿ 29 ರನ್ ಬಾರಿಸಿದರು. ಇನ್ನು ಟಿಮ್ ಡೇವಿಡ್ ಕೇವಲ 14 ಎಸೆತದಲ್ಲಿ ಭರ್ಜರಿ 45 ರನ್ ಬಾರಿಸುವ ಮೂಲಕ ಇನ್ನೂ ಮೂರು ಎಸೆತಗಳು ಬಾಕಿಯಿರುವಂತೆಯೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲುವು ಸಾರಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 4ನೇ ಗೆಲುವು ಸಾಧಿಸಿದ್ದು ಅಂಕಪಟ್ಟಿಯಲ್ಲಿಯೂ ಚೇತರಿಕೆ ಕಂಡಿದೆ.
ಇನ್ನು ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ನಡೆಸಿದ ರಾಜಸ್ಥಾನ್ ರಾಯಲ್ಸ್ ಪರವಾಗಿ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದು ಅಕ್ಷರಶಃ ಏಕಾಂಗಿ ಹೋರಾಟ ನಡೆಸಿದರು. ಭರ್ಜರಿ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್ 124 ರನ್‌ಗಳಿಸಿ ಮಿಂಚಿದ್ದಾರೆ. ಇವರ ಈ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ 212 ರನ್‌ಗಳನ್ನು ಗಳಿಸಿತು.
ರಾಜಸ್ಥಾನ್ ರಾಯಲ್ಸ ತಂಡದ ಪರವಾಗಿ ಉಳಿದೆಲ್ಲಾ ಬ್ಯಾಟರ್‌ಗಳು ವಿಫಲವಾದರು ಕೂಡ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮಾತ್ರ ಯಾವ ಹಂತದಲ್ಲಿಯೂ ಎದುರಾಳಿ ಪಂದ್ಯದಲ್ಲಿ ಬಿಗಿಹಿಡಿತ ಸಾಧಿಸಲು ಅವಕಾಶವನ್ನೇ ನೀಡಲಿಲ್ಲ. ಕೊನೆಯ ಹಂತದವರೆಗೂ ಭರ್ಜರಿ ಪ್ರದರ್ಶನ ನೀಡಿದ ಜೈಸ್ವಾಲ್ ಐಪಿಎಲ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ್ದಾರೆ.
ಈ ಪಂದ್ಯದಲ್ಲಿ 62 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ 124 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ 16 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳು ಒಳಗೊಂಡಿತ್ತು. ಯಶಸ್ವಿ ಜೈಸ್ವಾಲ್ ಹೊರತುಪಡಿಸಿದರೆ ಉಳಿದ ಯಾವ ಆಟಗಾರನ ಬ್ಯಾಟ್‌ನಿಂದ ಕೂಡ 18ಕ್ಕಿಂತ ಹೆಚ್ಚಿನ ರನ್ ಹರಿದು ಬಂದಿಲ್ಲ ಎಂಬುದು ವಿಶೇಷ. ಹಾಗಿದ್ದರೂ ತಂಡ 212 ರನ್‌ಗಳ ಬೃಹತ್ ಮೊತ್ತಗಳಿಸಲು ಸಾದ್ಯವಾಗಿದ್ದು ಅಷ್ಟರ ಮಟ್ಟಿಗೆ ಈ ಪಂದ್ಯದಲ್ಲಿ ಜೈಸ್ವಾಲ್ ಅಬ್ಬರಿಸಿದ್ದಾರೆ.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಕುಮಾರ್ ಕಾರ್ತಿಕೇಯ, ರಿಲೆ ಮೆರೆಡಿತ್, ಅರ್ಷದ್ ಖಾನ್
ಬೆಂಚ್: ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ರಮಣ್‌ದೀಪ್ ಸಿಂಗ್, ಜೇಸನ್ ಬೆಹ್ರೆನ್‌ಡಾರ್ಫ್, ಸಂದೀಪ್ ವಾರಿಯರ್, ಹೃತಿಕ್ ಶೋಕೀನ್, ಆಕಾಶ್ ಮಧ್ವಲ್, ದುವಾನ್ ಜಾನ್ಸೆನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
ಬೆಂಚ್: ಡೊನಾವೊನ್ ಫೆರೇರಾ, ಮುರುಗನ್ ಅಶ್ವಿನ್, ರಿಯಾನ್ ಪರಾಗ್, ಕುಲದೀಪ್ ಯಾದವ್, ಕುಲದೀಪ್ ಸೇನ್, ಆಡಮ್ ಜಂಪಾ, ಜೋ ರೂಟ್, ನವದೀಪ್ ಸೈನಿ, ಆಕಾಶ್ ವಸಿಷ್ಟ್, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ಕೆಎಂ ಆಸಿಫ್, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications