IPL 2023: ಡೆಲ್ಲಿ ಕ್ಯಾಪಿಟಲ್ಸ್ ತಂಡ ತೊರೆದು ತವರಿಗೆ ಮರಳಿದ ಮಿಚೆಲ್ ಮಾರ್ಷ್; ಕಾರಣ?
ಶನಿವಾರ, ಏಪ್ರಿಲ್ 8ರಂದು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 11ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ಮತ್ತು ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಡಲಿವೆ.
ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳ ಇಬ್ಬರು ಆಟಗಾರರು ಮಹತ್ವದ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಕ್ಯಾಚ್ ಪಡೆಯುವ ವೇಳೆ ಕಿರುಬೆರಳಿಗೆ ಗಾಯ ಮಾಡಿಕೊಂಡಿರುವ ರಾಜಸ್ಥಾನ ರಾಯಲ್ಸ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಆಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ಇತ್ತೀಚಿನ ವರದಿಯ ಪ್ರಕಾರ, ಮುಂಬರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಜೋಸ್ ಬಟ್ಲರ್ ಆಡಬೇಕೆ ಅಥವಾ ಬೇಡವೇ ಎಂಬುದನ್ನು ರಾಜಸ್ಥಾನ ರಾಯಲ್ಸ್ ವೈದ್ಯಕೀಯ ಸಿಬ್ಬಂದಿಯ ವರದಿಯ ನಂತರ ನಿರ್ಧರಿಸಲಾಗುತ್ತದೆ.
ಇನ್ನು ಆಡಿದ ಎರಡು ಪಂದ್ಯಗಳನ್ನು ಸೋತು 2023ರ ಐಪಿಎಲ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗಾಯದ ಮೇಲೆ ಬರೆ ಎಳೆಯುವಂತೆ ವಿದೇಶಿ ಆಟಗಾರ ಮಿಚೆಲ್ ಮಾರ್ಷ್ ಅವರ ಸೇವೆಯನ್ನು ಕಳೆದುಕೊಳ್ಳಲಿದೆ.
LSG vs SRH IPL 2023: ಲಕ್ನೋ ತಂಡದ ಆಲ್‌ರೌಂಡ್ ಪ್ರದರ್ಶನ; ಹೈದರಾಬಾದ್ ತಂಡಕ್ಕೆ ಸತತ 2ನೇ ಸೋಲು
ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಬೌಲಿಂಗ್ ಕೋಚ್ ಜೇಮ್ಸ್ ಹೋಪ್ಸ್ ಅವರು ಮಿಚೆಲ್ ಮಾರ್ಷ್ ಕೆಲವು ಪಂದ್ಯಗಳನ್ನು ತಪ್ಪಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಮಿಚೆಲ್ ಮಾರ್ಷ್ ತಮ್ಮ ವಿವಾಹ ಕಾರಣದಿಂದಾಗಿ ತವರಿಗೆಗೆ ಮರಳಲಿದ್ದಾರೆ ಎಂದು ಬಹಿರಂಗಪಡಿಸಿದರು.

ಆದಾಗ್ಯೂ, ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಐಪಿಎಲ್ ಅಭಿಯಾನದ ಪೂರ್ಣ ಪಂದ್ಯಾವಳಿಯನ್ನು ಕಳೆದುಕೊಳ್ಳುವುದಿಲ್ಲ. ವಿವಾಹ ಸಮಾರಂಭ ಪೂರ್ಣಗೊಳಿಸಿದ ನಂತರ, ಉಳಿದ ಆವೃತ್ತಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಲು ಭಾರತಕ್ಕೆ ಮರಳಲಿದ್ದಾರೆ ಎಂದು ಜೇಮ್ಸ್ ಹೋಪ್ಸ್ ತಿಳಿಸಿದರು.
"ಮಿಚೆಲ್ ಮಾರ್ಷ್ ಮುಂದಿನ ಕೆಲವು ಪಂದ್ಯಗಳಿಗೆ ಲಭ್ಯವಿರುವುದಿಲ್ಲ. ಆತ ಮದುವೆಯಾಗಲು ತವರಿಗೆ ಹೋಗುತ್ತಿದ್ದಾರೆ," ಎಂದು ಗುವಾಹಟಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಕ್ಕೂ ಮುನ್ನ ಜೇಮ್ಸ್ ಹೋಪ್ಸ್ ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು.

ಈ ಋತುವಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಆಡಿದ ಎರಡೂ ಪಂದ್ಯಗಳಲ್ಲಿ ಮಿಚೆಲ್ ಮಾರ್ಷ್ ಆಡುವ 11ರ ಬಳಗದ ಭಾಗವಾಗಿದ್ದರು.
ಸುದೀರ್ಘ ಗಾಯದ ನಂತರ ಪುನರಾಗಮನ ಮಾಡಿದ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡಿ 24 ರನ್ ನೀಡಿ 1 ವಿಕೆಟ್ ಪಡೆದರು ಮತ್ತು ಬ್ಯಾಟಿಂಗ್‌ನಲ್ಲಿ ಕೇವಲ ನಾಲ್ಕು ರನ್ ಗಳಿಸಿದರು.
ಇನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಸೊನ್ನೆಗೆ ಔಟಾದ ಕಾರಣ ಮಿಚೆಲ್ ಮಾರ್ಷ್ ಬ್ಯಾಟ್‌ನೊಂದಿಗೆ ಪ್ರಭಾವಿ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ಮಿಚೆಲ್ ಮಾರ್ಷ್ ಹೊರಗುಳಿಯುವುದರಿಂದ, ಗೆಲ್ಲಲೇಬೇಕಾದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಡುವ 11ರ ಬಳಗದಲ್ಲಿ ರೋವ್ಮನ್ ಪೊವೆಲ್ ಅವರನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಾಗಿ ಡೇವಿಡ್ ವಾರ್ನರ್ ಮತ್ತು ಪೃಥ್ವಿ ಶಾ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸುವುದರಿಂದ, ಅದೇ ಸಂಯೋಜನೆಯನ್ನು ಮುಂದುವರೆಸಲಿದೆ. ಹೀಗಾಗಿ ವೆಸ್ಟ್ ಇಂಡೀಸ್ ಟಿ20 ನಾಯಕ ರೋವ್ಮನ್ ಪೊವೆಲ್ ಕೆಳ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಧ್ಯತೆ ಇದೆ.
ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಬ್ಯಾಟರ್ ಪೃಥ್ವಿ ಶಾ ಆಡಿದ ಎರಡು ಪಂದ್ಯಗಳಲ್ಲಿ ಕ್ರಮವಾಗಿ 12 ಮತ್ತು 7 ರನ್‌ಗಳನ್ನು ಗಳಿಸಿದ ಕಾರಣ ಇನ್ನೂ ಗಮನಾರ್ಹ ಪ್ರದರ್ಶನ ನೀಡಿಲ್ಲ. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್‌ಗೆ ನಿರ್ಣಾಯಕ ಪಂದ್ಯವಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಿದ ನಂತರ, ಮಂಗಳವಾರ (ಏಪ್ರಿಲ್ 11)ರಂದು ದೆಹಲಿಯಲ್ಲಿ ಮುಂಬೈ ಇಂಡಿಯನ್ಸ್ ಆಡಲಿದೆ. ಆ ಬಳಿಕ ಏಪ್ರಿಲ್ 15ರಂದು ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಣಸಾಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications