For Quick Alerts
ALLOW NOTIFICATIONS  
For Daily Alerts
 

IPL 2023 RCB vs CSK: ವಿರಾಟ್ ಕೊಹ್ಲಿ ಅಬ್ಬರದಾಟಕ್ಕೆ ಮಾಜಿ ನಾಯಕಿ ಮಿಥಾಲಿ ರಾಜ್ ಮೆಚ್ಚುಗೆ

ಸೋಮವಾರ, ಏಪ್ರಿಲ್ 17ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 24ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಗಳು ಸೆಣಸಾಡಲು ಸಜ್ಜಾಗಿವೆ.

ಇನ್ನು ಶನಿವಾರದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಂದ್ಯ ವಿಜೇತ ಬ್ಯಾಟಿಂಗ್ ಪ್ರದರ್ಶನ ನೀಡಿರುವುದನ್ನು ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

IPL 2023: Mithali Raj Praised Virat Kohli Batting Performance Against Delhi Capitals

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿಗೆ ವಿರಾಟ್ ಕೊಹ್ಲಿ ಅಸಾಧಾರಣ ಇನ್ನಿಂಗ್ಸ್ ಆಡುವ ಮೂಲಕ ಅರ್ಧಶಕತ ಬಾರಿಸಿ ಆರ್‌ಸಿಬಿ ತಂಡಕ್ಕೆ ನೆರವಾದರು. ಋತುವಿನ ತಮ್ಮ ಮೂರನೇ ಪಂದ್ಯವನ್ನು ಗೆಲ್ಲಲು ವಿರಾಟ್ ಕೊಹ್ಲಿ ಆಟ ಬಹಳ ಮುಖ್ಯವೆಂದು ತಿಳಿಸಿದರು.

ಆರಂಭಿಕ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 34 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಸಮೇತ 147 ಸ್ಟ್ರೈಕ್‌ರೇಟ್‌ನೊಂದಿಗೆ 50 ರನ್ ಗಳಿಸಿದರು. ತಮ್ಮ ಅದ್ಭುತ ಪ್ರದರ್ಶನಕ್ಕಾಗಿ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ಪಡೆದರು.

"ಟಿ20 ಪಂದ್ಯಗಳಲ್ಲಿ ತಂಡಕ್ಕೆ ರನ್ ವೇಗವನ್ನು ಹೊಂದಿಸಲು ಆರಂಭಿಕ ಬ್ಯಾಟ್ಸ್‌ಮನ್ ಮುಖ್ಯವಾಗುತ್ತಾನೆ. ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅದನ್ನೇ ಮಾಡಿದರು. 140/150 kmph ವೇಗದಲ್ಲಿ ಬೌಲಿಂಗ್ ಮಾಡುವ ಬೌಲರ್‌ಗಳ ವಿರುದ್ಧ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು".

IPL 2023: Mithali Raj Praised Virat Kohli Batting Performance Against Delhi Capitals

"ವಿರಾಟ್ ಕೊಹ್ಲಿ ಯಾವತ್ತೂ ಬೌಲರ್‌ಗಳಿಗೆ ತಲೆ ಕೆಡಿಸಿಕೊಂಡವರಲ್ಲ. ಮಧ್ಯಮ ಓವರ್‌ಗಳಲ್ಲಿ ಉತ್ತಮ ಸ್ಟ್ರೈಕ್‌ರೇಟ್‌ನಲ್ಲಿ ರನ್ ಗಳಿಸುವ ಇತರ ಬ್ಯಾಟರ್‌ಗಳು ಸಹಕರಿಸಿದರೆ, ವಿರಾಟ್ ಕೊಹ್ಲಿಯಿಂದ ಇನ್ನೂ ಉತ್ತಮ ಪ್ರದರ್ಶನ ಬರುತ್ತದೆ," ಎಂದು ಮಿಥಾಲಿ ರಾಜ್ ಹೇಳಿದರು.

ಈ ಬಗ್ಗೆ ಸ್ವತಃ ವಿರಾಟ್ ಕೊಹ್ಲಿ ಮಾತನಾಡಿದ್ದು, ಉತ್ತಮ ಶಾಟ್‌ಗಳನ್ನು ಆಡಲು ತಮ್ಮನ್ನು ತಾವೇ ಪ್ರೇರೇಪಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ, ಕೊನೆಯ ಎರಡು ಪಂದ್ಯ ಹೇಗೆ ಸೋಲಬೇಕಾಯಿತು ಎಂಬುದರ ಕುರಿತು ಚರ್ಚಿಸಿದರು. ಉತ್ತಮ ಮೊತ್ತ ಕಲೆಹಾಕಿಯೂ, ಎದುರಾಳಿ ಬ್ಯಾಟರ್‌ಗಳು ಪ್ರತಿಯಾಗಿ ಬ್ಯಾಟ್ ಬೀಸಿದ್ದರಿಂದ ನಮ್ಮ ಬೌಲರ್‌ಗಳ ಮೇಲೆ ಒತ್ತಡ ಬೀರಿತು ಎಂದರು.

IPL 2023: Mithali Raj Praised Virat Kohli Batting Performance Against Delhi Capitals

ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ ಅತ್ಯುತ್ತಮ ಫಾರ್ಮ್ ನಿಸ್ಸಂದೇಹವಾಗಿ ಆರ್‌ಸಿಬಿ ತಂಡಕ್ಕೆ ಹೆಚ್ಚಿನ ಆತ್ಮವಿಶ್ವಾಸವನ್ನು ನೀಡುತ್ತದೆ. ಈ ಋತುವಿನಲ್ಲಿ ವಿರಾಟ್ ಕೊಹ್ಲಿಯ ಅಸಾಧಾರಣ ಪ್ರದರ್ಶನವನ್ನು ಮಾಜಿ ಕ್ರಿಕೆಟರ್ ಮಿಥಾಲಿ ರಾಜ್ ಹಾಡಿ ಹೊಗಳಿದ್ದಾರೆ.

ಆರ್‌ಸಿಬಿ vs ಸಿಎಸ್‌ಕೆ ಸಂಭಾವ್ಯ ಆಡುವ 11ರ ಬಳಗ
ಸಿಎಸ್‌ಕೆ ತಂಡ: ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಅಜಿಂಕ್ಯಾ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಮಹೇಶ್ ತೀಕ್ಷಣ, ಡ್ವೈನ್ ಪ್ರಿಟೋರಿಯಸ್, ತುಷಾರ್ ದೇಶಪಾಂಡೆ.

ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವನಿಂದು ಹಸರಂಗ, ವೈಶಾಕ್ ವಿಜಯಕುಮಾರ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್.

Story first published: Monday, April 17, 2023, 16:22 [IST]
Other articles published on Apr 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+