IPL 2023: ಹಲವು ಐಪಿಎಲ್ ಫ್ರಾಂಚೈಸಿಗಳಿಗೆ ಆಘಾತ: ಈ ಪ್ರಮುಖ ಆಟಗಾರರೇ ಪ್ಲೇ ಆಫ್‌ನಲ್ಲಿ ಆಡಲ್ಲ
ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ ಪಂದ್ಯಾವಳಿ ಅರ್ಧ ಮುಕ್ತಾಯವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಹೊರತುಪಡಿಸಿ ಉಳಿದ ತಂಡಗಳ ನಡುವೆ ಪ್ಲೇ ಆಫ್ ಪ್ರವೇಶಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಈ ಬೆನ್ನಲ್ಲೇ ಐಪಿಎಲ್ ಫ್ರಾಂಚೈಸಿಗಳಿಗೆ ಆಘಾತ ಎದುರಾಗಿದ್ದು ಹಲವು ಪ್ರಮುಖ ಆಟಗಾರರೇ ಪ್ಲೇ ಆಫ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ.
ಮೇ 23 ರಂದು ಕ್ವಾಲಿಫೈಯರ್ 1 ಪಂದ್ಯ ನಡೆಯಲಿದ್ದು, ಮೇ 24ರಂದು ಎಲಿಮಿನೇಟರ್ ಪಂದ್ಯ ನಡೆಯಲಿದೆ. ಮೇ 26ರಂದು ಕ್ವಾಲಿಫೈಯರ್ 2 ಪಂದ್ಯ ಮತ್ತು ಮೇ 28ರಂದು ಫೈನಲ್ ಪಂದ್ಯ ನೆಡಯಲಿದೆ. ಮೊದಲ ಎರಡು ಪಂದ್ಯಗಳು ಚೆನ್ನೈನಲ್ಲಿ ನಡೆದರೆ, ಕ್ವಾಲಿಫೈಯರ್ 2 ಮತ್ತು ಫೈನಲ್ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ.

ಜೂನ್ 7ರಂದು ಇಂಗ್ಲೆಂಡ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಸದ್ಯ ಐಪಿಎಲ್‌ನಲ್ಲಿ ಆಡುತ್ತಿರುವ ಆಸ್ಟ್ರೇಲಿಯಾ ಟೆಸ್ಟ್ ತಂಡದ ಆಟಗಾರರು ಪ್ಲೇ ಆಫ್ ಪಂದ್ಯಗಳಿಗೆ ಮುನ್ನವೇ ಹೆಚ್ಚಿನ ಸಿದ್ಧತೆಗಾಗಿ ಇಂಗ್ಲೆಂಡ್‌ಗೆ ತೆರಳುವ ಸಾಧ್ಯತೆ ಇದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮುಂಬೈ ಇಂಡಿಯನ್ಸ್ ತಂಡದ ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್, ಆರ್ ಸಿಬಿ ತಂಡದ ಜೋಶ್ ಹೇಜಲ್‌ವುಡ್ ಆಸ್ಟ್ರೇಲಿಯಾ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಆಟಗಾರರ ನಿರ್ಣಯಕ್ಕೆ ಬಿಟ್ಟ ಕ್ರಿಕೆಟ್ ಆಸ್ಟ್ರೇಲಿಯಾ
ಆದರೂ ಈ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳುವ ಅಧಿಕಾರವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಆಟಗಾರರಿಗೆ ಬಿಟ್ಟಿದೆ. ಗಾಯಗಳ ಇತಿಹಾಸವನ್ನು ಹೊಂದಿರುವ ಆಟಗಾರರು, ಮುಂಜಾಗ್ರತಾ ಕ್ರಮವಾಗಿ ಪ್ಲೇ ಆಫ್ ಪಂದ್ಯಗಳನ್ನು ತಪ್ಪಿಸಿಕೊಂಡು ಇಂಗ್ಲೆಂಡ್ ಹೋಗುವ ಸಾಧ್ಯತೆ ಕೂಡ ಇದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇ ಆಫ್ ಪ್ರವೇಶ ಹಾದಿ ಕಠಿಣವಾಗಿರುವುದರಿಂದ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಮುಂಚೆಯೇ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ ಇನ್ನೂ ಫಿಟ್ ಆಗಿಲ್ಲವಾದರೂ, ತಂಡವನ್ನು ಸೇರಿಕೊಂಡಿದ್ದಾರೆ. ಏಪ್ರಿಲ್ 26ರಂದು ನಡೆಯಲಿರುವ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಅವರು ಫಿಟ್ ಆಗಬಹುದು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಅವರು ಫಿಟ್‌ನೆಸ್ ಹೇಗಿದೆ ಎನ್ನುವುದರ ಮೇಲೆ ಅವರು ಆಡುವುದರ ಬಗ್ಗೆ ನಿರ್ಣಯ ಮಾಡಲಾಗುತ್ತದೆ. ಮುಂಬೈ ಇಂಡಿಯನ್ಸ್ ತಂಡದ ಕ್ಯಾಮೆರಾನ್ ಗ್ರೀನ್ ಏನು ನಿರ್ಧರಿಸುತ್ತಾರೆ ಎನ್ನುವುದನ್ನು ನೋಡಬೇಕಾಗಿದೆ.
ಪ್ಲೇ ಆಫ್‌ನಿಂದ ತಪ್ಪಿಸಿಕೊಳ್ಳಲಿರುವ ಬೆನ್ ಸ್ಟೋಕ್ಸ್
ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್‌ಸ್ಟೋಕ್ಸ್ ಕೂಡ ಪ್ಲೇ ಆಫ್ ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಎರಡು ಪಂದ್ಯಗಳಲ್ಲಿ ಮಾತ್ರ ಕಾಣಿಸಿಕೊಂಡರು. ನಂತರ ಬೆನ್ ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಸಿಎಸ್‌ಕೆ ಅಮೋಘ ಪ್ರದರ್ಶನ ನೀಡುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
ಸ್ಟೋಕ್ಸ್ ಆಶಸ್ ಸರಣಿಯ ಕಡೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದು, ಸಂಪೂರ್ಣವಾಗಿ ಫಿಟ್ ಆಗಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಪ್ರಮುಖ ಪಂದ್ಯಗಳಿಗೆ ಸ್ಟೋಕ್ಸ್ ಅಲಭ್ಯವಾಗಿರುವುದು ತಂಡಕ್ಕೆ ಹಿನ್ನಡೆಯಾದರೂ, ಅದು ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎನ್ನುವಂತೆ ಸಿಎಸ್‌ಕೆ ಪ್ರದರ್ಶನ ನೀಡುತ್ತಿದೆ.
ಆಶಸ್ ಸರಣಿಯಲ್ಲಿ ಆಡಲು ಪೂರ್ವಸಿದ್ಧತೆ
ಐಪಿಎಲ್‌ನಲ್ಲಿ ಆಡದ ಹಲವು ಆಟಗಾರರು ಈಗಾಗಲೇ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದ್ದು, ಕೌಂಟಿ ಕ್ರಿಕೆಟ್‌ನಲ್ಲಿ ಆಡುತ್ತಿದ್ದಾರೆ. ಆಸ್ಟ್ರೇಲಿಯಾ ಯಾವುದೇ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸುತ್ತಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಒಂದು ವಾರಗಳ ಮುನ್ನ ಕಿರು ಶಿಬಿರವನ್ನು ಹಮ್ಮಿಕೊಳ್ಳುತ್ತದೆ. ಜೂನ್ 7ರಿಂದ 11ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದ್ದು. ಜೂನ್ 16 ರಿಂದ ಆಶಸ್ ಸರಣಿಯ ಮೊದಲನೇ ಪಂದ್ಯ ಆರಂಭವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications