IPL 2023: ಈವರೆಗಿನ ಐಪಿಎಲ್‌ನಲ್ಲಿ ಹೆಚ್ಚು ರನ್, ಹೆಚ್ಚು ವಿಕೆಟ್ ಗಳಿಸಿದವರು; ಇತರೆ ಅಂಕಿಅಂಶಗಳ ಮಾಹಿತಿ

ಕೋವಿಡ್ -19 ರೋಗದ ನಂತರ ಮೊದಲ ಬಾರಿಗೆ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತುವಿನಲ್ಲಿ ತನ್ನ ಮೂಲ ತವರಿನ ಮತ್ತು ಎದುರಾಳಿ ನೆಲದಲ್ಲಿ ಆಡುವ ಸ್ವರೂಪಕ್ಕೆ ಮರಳಿದೆ.
ಇದೇ ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದೊಂದಿಗೆ ಐಪಿಎಲ್ 2023ರ ಋತುವಿಗೆ ಅದ್ಧೂರಿ ಚಾಲನೆ ಸಿಗಲಿದೆ.
2023ರ ಐಪಿಎಲ್ ಪಂದ್ಯಾವಳಿಗೂ ಮುನ್ನ ಕೆಲವು ಕುತೂಹಲಕಾರಿ ಅಂಕಿಅಂಶಗಳನ್ನು ತಿಳಿದುಕೊಳ್ಳೋಣ.
2022ರ ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ವಿಜೇತರು
ಕಳೆದ ಬಾರಿಯ ಐಪಿಎಲ್‌ನಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಪ್ರತಿಷ್ಠಿತ ಆರೆಂಜ್ ಕ್ಯಾಪ್ ಅನ್ನು ರಾಜಸ್ಥಾನ ರಾಯಲ್ಸ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಗೆದ್ದರು. ಬೌಲಿಂಗ್ ವಿಭಾಗದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಗೆದ್ದರು.

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ
ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್ ವಿರಾಟ್ ಕೊಹ್ಲಿ 223 ಪಂದ್ಯಗಳನ್ನು ಆಡಿದ್ದು, 129.14 ಸ್ಟ್ರೈಕ್‌ರೇಟ್‌ನೊಂದಿಗೆ 6624 ರನ್‌ಗಳೊಂದಿಗೆ ಸಾರ್ವಕಾಲಿಕ ಗರಿಷ್ಠ ರನ್ ಗಳಿಸಿದ ಆಟಗಾರನಾಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾಜಿ ನಾಯಕ ವಿರಾಟ್ ಕೊಹ್ಲಿ ಈವರೆಗೆ ಐದು ಶತಕಗಳು ಮತ್ತು 44 ಅರ್ಧಶತಕಗಳನ್ನು ಗಳಿಸಿದ್ದಾರೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್
ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲಿ ವೆಸ್ಟ್ ಇಂಡೀಸ್‌ನ ಮಾಜಿ ಆಲ್‌ರೌಂಡರ್ ಡ್ವೇನ್ ಬ್ರಾವೋ 183 ವಿಕೆಟ್‌ಗಳೊಂದಿಗೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಲಯನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳಿಗಾಗಿ 161 ಪಂದ್ಯಗಳನ್ನು ಆಡಿದ್ದಾರೆ.
ಅತಿ ಹೆಚ್ಚು ಬಾರಿ ಔಟ್ ಮಾಡಿದ ವಿಕೆಟ್ ಕೀಪರ್
ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಆಗಿದ್ದಾರೆ. ಐಪಿಎಲ್‌ನಲ್ಲಿ ಈವರೆಗೆ ವಿಕೆಟ್ ಕೀಪಿಂಗ್‌ನಲ್ಲಿ 170 ಬಾರಿ ಔಟ್ ಮಾಡಿದ ದಾಖಲೆ ಹೊಂದಿದ್ದಾರೆ.

ಅತಿ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್
ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರು ಐಪಿಎಲ್‌ನಲ್ಲಿ ಅತಿ ಕ್ಯಾಚ್ ಹಿಡಿದ ಕ್ರಿಕೆಟಿಗರ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ಆಟಗಾರ ಸುರೇಶ್ ರೈನಾ ಐಪಿಎಲ್ ಇತಿಹಾಸದಲ್ಲಿ 109 ಕ್ಯಾಚ್‌ಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಅತಿ ಐಪಿಎಲ್ ಪಂದ್ಯವಾಡಿದ ಆಟಗಾರ
ಎಂಎಸ್ ಧೋನಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ ಪಂದ್ಯ ಆಡಿದ ದಾಖಲೆ ಹೊಂದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕ ದೇಶೀಯ ಟಿ20 ಟೂರ್ನಿಯಲ್ಲಿ ಇದುವರೆಗೆ 234 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಅತಿ ಹೆಚ್ಚು ಸಿಕ್ಸರ್ ಮತ್ತು ಬೌಂಡರಿ ಗಳಿಸಿದವರು
ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಐಪಿಎಲ್‌ನಲ್ಲಿ 357 ಸಿಕ್ಸರ್ ಬಾರಿಸುವ ಮೂಲಕ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ಆಟಗಾರನಾಗಿದ್ದಾರೆ. ಇನ್ನು ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಐಪಿಎಲ್ ಇತಿಹಾಸದಲ್ಲಿ 684 ಬೌಂಡರಿ ಬಾರಿಸುವ ಮೂಲಕ ಅತಿ ಹೆಚ್ಚು ಬೌಂಡರಿಗಳ ದಾಖಲೆಯನ್ನು ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications