Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಗಿಲ್ ಘರ್ಜನೆಗೆ ಧೋನಿ ಅಡ್ಡಿ: ಫೈನಲ್ ಪಂದ್ಯದಲ್ಲಿ ಶುಬ್ಮನ್‌ಗೆ ನಿರಾಸೆ

ಇಂಡಿಯನ್ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ ಚೆನ್ನೈ ಸೂಪರ್ ಕಿಂಗ್ಸ್. ಈ ಮಹತ್ವದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗುಜರಾತ್ ಟೈಟನ್ಸ್ ತಂಡದ ಬ್ಯಾಟಿಂಗ್ ಅಸ್ತ್ರ ಶುಬ್ಮನ್ ಗಿಲ್ ದೊಡ್ಡ ಮಟ್ಟದ ಹಾನಿಯುಂಟು ಮಾಡದಂತೆ ತಡೆಯುವಲ್ಲಿ ಯಶಸ್ವಿಯಾಗಿದೆ.

ಟೂರ್ನಿಯುದ್ದಕ್ಕೂ ಅಬ್ಬರಿಸಿದ ಶುಬ್ಮನ್ ಗಿಲ್ ಈ ಪಂದ್ಯದಲ್ಲಿಯೂ ಅಂಥಾದ್ದೇ ಪ್ರದರ್ಶನ ನೀಡುವ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದ್ದರು. ಆದರೆ ರವೀಂದ್ರ ಜಡೇಜಾ ಹಾಗೂ ಎಂಎಸ್ ಧೋನಿ ಜೋಡಿಯ ರಣತಂತ್ರಕ್ಕೆ ಗಿಲ್ ವಿಕೆಟ್ ಕಳೆದುಕೊಳ್ಳಬೇಕಾಯಿತು. ವಿಕೆಟ್ ಹಿಂದೆ ಧೋನಿ ಮಿಂಚಿನ ಸ್ಟಂಪಿಂಗ್‌ಗೆ ಶುಬ್ಮನ್ ಗಿಲ್ ವಿಕೆಟ್ ಕಳೆದುಕೊಂಡರು. ಈ ಮೂಲಕ ಮಹತ್ವದ ಫೈನಲ್ ಪಂದ್ಯದಲ್ಲಿ ಶುಬ್ಮನ್ ಗಿಲ್ ಹೆಚ್ಚು ಕಾಲ ಕ್ರೀಸ್‌ನಲ್ಲಿ ಉಳಿದುಕೊಳ್ಳಲು ವಿಫಲವಾದರು.

Shubman Gill

ಈ ಪಂದ್ಯದಲ್ಲಿ 20 ಎಸೆತಗಳನ್ನು ಎದುರಿಸಿದ್ದು 7 ಬೌಂಡರಿ ಸಿಡಿಸಿ 39 ರನ್ ಬಾರಿಸಿದ್ದಾರೆ. ಮೊದಲ ವಿಕೆಟ್‌ಗೆ ವೃದ್ಧಿಮಾನ್ ಸಾಹಾ ಜೊತೆಗೆ 67 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. ರವೀಂದ್ರ ಜಡೇಜಾ ಈ ಜೊತೆಯಾಟವನ್ನು ಬೇರ್ಪಡಿಸುವಲಿ ಯಶಸ್ವಿಯಾಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ಸಿ & ವಿಕೆ), ದೀಪಕ್ ಚಾಹರ್, ಮತೀಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ
ಬೆಂಚ್: ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಆಕಾಶ್ ಸಿಂಗ್, ಭಗತ್ ವರ್ಮಾ, ನಿಶಾಂತ್ ಸಿಂಧು, ಆರ್ ಎಸ್ ಹಂಗರ್ಗೇಕರ್, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಅಜಯ್ ಜಾದವ್ ಮಂಡಲ್, ಸಿಸಂದಾ ಮಗಳ, ಡ್ವೈನ್ ಪ್ರಿಟೋರಿಯಸ್, ಬೆನ್ ಸ್ಟೋಕ್ಸ್

ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ

ಬೆಂಚ್: ಜೋಶುವಾ ಲಿಟಲ್, ಶ್ರೀಕರ್ ಭರತ್, ಶಿವಂ ಮಾವಿ, ಒಡೆಯನ್ ಸ್ಮಿತ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದಾಸುನ್ ಶನಕ, ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಅಲ್ಜಾರಿ ಜೋಸೆಫ್, ಉರ್ವಿಲ್ ಪಟೇಲ್, ಯಶ್ ದಯಾಳ್

Story first published: Monday, May 29, 2023, 20:48 [IST]
Other articles published on May 29, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+