Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಬೃಹತ್ ಗೆಲುವಿನ ಮೇಲೆ ಕಣ್ಣಿಟ್ಟ ಮುಂಬೈ ಇಂಡಿಯನ್ಸ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಲೀಗ್ ಹಂತದ ಕೊನೆಯ ಎರಡು ಪಂದ್ಯಗಳು ನಡೆಯಲಿದೆ. ಪ್ಲೇಆಫ್ ದೃಷ್ಟಿಯಿಂದ ಈ ಎರಡು ಪಂದ್ಯಗಳು ಕೂಡ ಮಹತ್ವದ್ದಾಗಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದ್ದು ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ ತಂಡ ಬೃಹತ್ ಗೆಲುವಿನ ಮೇಲೆ ಕಣ್ಣಿಟ್ಟಿದೆ.

ಆರ್‌ಸಿಬಿ ತಂಡಕ್ಕಿಂತ ನೆಟ್‌ರನ್‌ರೆಟ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಸಾಕಷ್ಟು ಹಿಂದಿದೆ. ಹಾಗಾಗಿ ಈ ಪಂದ್ಯದಲ್ಲಿ ಗೆಲುವಿನ ಜೊತೆಗೆ ನೆಟ್‌ ರನ್‌ರೇಟ್‌ನಲ್ಲಿ ಪ್ರಗತಿ ಸಾಧಿಸುವುದು ಮುಂಬೈ ಇಂಡಿಯನ್ಸ್ ತಂಡಕ್ಕೆ ಅನಿವಾರ್ಯ. ಹೀಗಾಗಿ ರನ್‌ ರೇಟ್‌ ಹೆಚ್ಚಿಸಿಕೊಳ್ಳಬೇಕಾದರೆ ಮುಂಬೈ ಇಮಡಿಯನ್ಸ್ ತಂಡ ದೊಡ್ಡ ಅಂತರದಿಂದ ಗೆಲುವು ಸಾಧಿಸಬೇಕಿದೆ.

Rohit Sharma

ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ರಸ್ತುತ ತಲಾ 14 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್‌ಸಿಬಿ ತಂಡಕ್ಕೆ ಮಾತ್ರ ಕೊನೆಯ ಪಂದ್ಯ ಬಾಕಿಯಿದೆ. ಸದ್ಯ ಒಂದು ಸ್ಥಾನ ಮಾತ್ರ ಪ್ಲೇಆಫ್ ಹಂತದಲ್ಲಿ ಬಾಕಿಯಿದ್ದು ಈ ತಂಡಗಳ ಮಧ್ಯೆ ಪೈಪೋಟಿಯಿದೆ. ಅದರಲ್ಲೂ ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಈ ರೇಸ್‌ನಲ್ಲಿ ಮುಂದಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್‌ಗೆ ಹೇಳಿ ಮಾಡಿಸಿದ ಪಿಚ್ ಆಗಿದ್ದು ಇಲ್ಲಿ ಆರಂಭದಿಂದಲೇ ಬ್ಯಾಟರ್‌ಗಳಿಗೆ ಅದ್ಭುತ ನೆರವು ದೊರೆಯಲಿದೆ. ಬೌಲರ್‌ಗಳಿಗೆ ಇಲ್ಲಿ ಕಠಿಣ ಸವಾಲು ಎದುರಾಗಲಿದ್ದರೂ ಮಧ್ಯಮ ಓವರ್‌ಗಳಲ್ಲಿ ಇಲ್ಲಿ ಸ್ಪಿನ್ನರ್‌ಗಳ ಪಾತ್ರ ಮಹತ್ವದ್ದಾಗಿರಲಿದೆ. ಮುಂಬೈ ಇಂಡಿಯನ್ಸ್ ತಂಡ ಅದ್ಭುತ ಬ್ಯಾಟಿಂಗ್ ವಿಭಾಗವನ್ನು ಹೊಂದಿದ್ದರೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ವಿಭಾಗ ಪರಿಣಾಮಕಾರಿಯಾಗಿದೆ. ಹೀಗಾಗಿ ಈ ಪಂದ್ಯ ಕುತೂಹಲ ಹೆಚ್ಚಿಸಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಕ್ಯಾಮರೂನ್ ಗ್ರೀನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಜೋಫ್ರಾ ಆರ್ಚರ್, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ರಾಘವ್ ಗೋಯಲ್, ದುವಾನ್ ಜಾನ್ಸೆನ್, ಆಕಾಶ್ ಮಧ್ವಲ್

ಸನ್‌ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್ (ನಾಯಕ), ಮಯಾಂಕ್ ಅಗರ್ವಾಲ್, ಅಬ್ದುಲ್ ಸಮದ್, ಅನ್ಮೋಲ್ಪ್ರೀತ್ ಸಿಂಗ್, ಹ್ಯಾರಿ ಬ್ರೂಕ್, ನಿತೀಶ್ ರೆಡ್ಡಿ, ರಾಹುಲ್ ತ್ರಿಪಾಠಿ, ಸಮರ್ಥ ವ್ಯಾಸ್, ಸನ್ವಿರ್ ಸಿಂಗ್, ವಿವ್ರಾಂತ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್, ಅಕೇಲ್ ಹೊಸೈನ್, ಮಯಾಂಕ್ ದಾಗರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್, ಆದಿಲ್ ರಶೀದ್, ಉಮ್ರಾನ್ ಮಲಿಕ್

Story first published: Sunday, May 21, 2023, 14:50 [IST]
Other articles published on May 21, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+