Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಒಂದಲ್ಲ ಎರಡಲ್ಲ ಆರ್‌ಸಿಬಿಗೆ ಅಂಕಪಟ್ಟಿಯಲ್ಲಿ ಈ 5 ತಂಡಗಳಿಂದ ಟಫ್ ಕಾಂಪಿಟಿಷನ್!

IPL 2023: Mumbai Indians joins playoff race after win against PBKS; here is the updated points table

ನಿನ್ನೆ ( ಮೇ 4 ) ನಡೆದ ಎರಡು ಪಂದ್ಯಗಳ ಮೂಲಕ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 46 ಪಂದ್ಯಗಳು ಮುಕ್ತಾಯಗೊಂಡಿವೆ. ಮಧ್ಯಾಹ್ನ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯ ಫಲಿತಾಂಶವಿಲ್ಲದೇ ಅಂತ್ಯಗೊಂಡರೆ, ರಾತ್ರಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿತು.

ಈ ಪಂದ್ಯಗಳ ಬಳಿಕ ಅಂಕಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆಗಳಾಗಿದ್ದು, ಪ್ಲೇಆಫ್ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳಲು ಯತ್ನಿಸುತ್ತಿರುವ ತಂಡಗಳ ಪೈಪೋಟಿ ಇನ್ನೂ ತಾರಕಕ್ಕೇರಿದೆ. ಆರಂಭದ ಪಂದ್ಯಗಳಲ್ಲಿ ಸೋತು ಈ ಬಾರಿ ಪ್ಲೇಆಫ್ ಪ್ರವೇಶ ಅನುಮಾನ ಎನ್ನುವಂತಿದ್ದ ಮುಂಬೈ ಇಂಡಿಯನ್ಸ್ ಸಹ ನಿನ್ನೆ ನಡೆದ ಪಂದ್ಯದ ಬಳಿಕ ಪ್ಲೇಆಫ್ ರೇಸ್‌ಗೆ ಇಳಿದಿದೆ.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ರೇಸ್‌ನಲ್ಲಿ ಹೊಸ ಸ್ಪರ್ಧಿಯ ಆಗಮನವಾಗಿದ್ದು, ಆರ್‌ಸಿಬಿಗೆ ಸದ್ಯ ಲಕ್ನೋ ಸೂಪರ್ ಜೈಂಟ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ತೀವ್ರ ಸ್ಪರ್ಧೆಯೊಡ್ಡುತ್ತಿವೆ.

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಕಿಂಗ್ಸ್ ಆರ್‌ಸಿಬಿಗಿಂತ ಕೇವಲ ಒಂದು ಪಂದ್ಯ ಹೆಚ್ಚು ಗಳಿಸಿದ್ದು, ಉಳಿದ ಮೇಲ್ಕಂಡ ತಂಡಗಳು ಆರ್‌ಸಿಬಿಯಷ್ಟೇ ಅಂಕಗಳನ್ನು ಪಡೆದುಕೊಂಡು ಸಮಬಲ ಸಾಧಿಸಿವೆ. ಹಾಗಿದ್ದರೆ ಟೂರ್ನಿಯ 46 ಪಂದ್ಯಗಳು ಮುಗಿದ ಬಳಿಕ ಅಂಕಪಟ್ಟಿ ಹೇಗಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ ನೋಡಿ..

1. 9 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಡ್ರಾ ಮಾಡಿಕೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಡ್ರಾ ಮಾಡಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 8 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Story first published: Thursday, May 4, 2023, 11:46 [IST]
Other articles published on May 4, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+