For Quick Alerts
ALLOW NOTIFICATIONS  
For Daily Alerts
 

IPL 2023: ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಶನಿವಾರ, ಏಪ್ರಿಲ್ 8ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 12ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ಎಂಎಸ್ ಧೋನಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಚೆನ್ನೈ ಮುಂಬೈ ಇಂಡಿಯನ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

IPL 2023: Mumbai Indians vs Chennai Super Kings Toss Report, Playing 11 And Live Score

ಮುಂಬೈ ಇಂಡಿಯನ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರುದ್ಧ ಸೋತ ನಂತರ, ತವರಿನ ವಾಂಖೆಡೆ ಸ್ಟೇಡಿಯಂನಲ್ಲಿ ಗೆಲುವಿನ ಖಾತೆ ತೆರೆಯಲು ಎದುರು ನೋಡುತ್ತಿದೆ.

ಮತ್ತೊಂದೆಡೆ ಸಿಎಸ್‌ಕೆ ತಂಡ ತನ್ನ ಹಿಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 12 ರನ್‌ಗಳಿಂದ ಸೋಲಿಸಿದ ಬಳಿಕ, ಅದೇ ಪ್ರದರ್ಶನವನ್ನು ಈ ಪಂದ್ಯದಲ್ಲಿ ಮುಂದುವರೆಸಲು ಪ್ರಯತ್ನಿಸಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು Jio Cinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.

ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ಸಂಭಾವ್ಯ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್ ತಂಡ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯಾ ರಹಾನೆ, ಡ್ವೈನ್ ಪ್ರಿಟೋರಿಯಸ್, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ಶಿವಂ ದುಬೆ, ದೀಪಕ್ ಚಾಹರ್, ಮಿಚೆಲ್ ಸ್ಯಾಂಟ್ನರ್, ತುಷಾರ್ ದೇಶಪಾಂಡೆ, ಸಿಸಂಡಾ ಮಗಲ.

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಕ್ಯಾಮೆರಾನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ಟ್ರಿಸ್ಟಾನ್ ಸ್ಟಬ್ಸ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಅರ್ಷದ್ ಖಾನ್, ಜೇಸನ್ ಬೆಹ್ರೆನ್‌ಡಾರ್ಫ್

Story first published: Saturday, April 8, 2023, 19:03 [IST]
Other articles published on Apr 8, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+