For Quick Alerts
ALLOW NOTIFICATIONS  
For Daily Alerts
 

LSG vs MI: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Mumbai Indians vs Lucknow Super Giants dream team prediction

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 63ನೇ ಪಂದ್ಯ ಇಂದು ( ಮೇ 16 ) ನಡೆಯಲಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿದ್ದು, ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಈ ಎರಡೂ ತಂಡಗಳೂ ಸಹ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇಆಫ್ ಹಾದಿಯನ್ನು ಸುಲಭಪಡಿಸಿಕೊಳ್ಳಲಿದ್ದು, ಸೋಲುವ ತಂಡದ ಪ್ಲೇಆಫ್ ಪ್ರವೇಶದ ಹಾದಿ ಕಠಿಣಗೊಳ್ಳಲಿದೆ.

12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಉಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಮುಂಬೈ ಇಂಡಿಯನ್ಸ್ ಗೆಲ್ಲಬೇಕಿದ್ದು, ಈ ಪಂದ್ಯದಲ್ಲಿ ಗೆದ್ದರೆ ಪ್ಲೇಆಫ್ ಬಹುತೇಕ ಖಚಿತವಾದಂತೆ.

ಅತ್ತ 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದ ಎರಡೂ ಪಂದ್ಯಗಳನ್ನು ಗೆದ್ದರೆ ಸುಲಭವಾಗಿ ಪ್ಲೇಆಫ್ ಪ್ರವೇಶ ಪಡೆದುಕೊಳ್ಳಲಿದೆ.

ಹೀಗೆ ಇತ್ತಂಡಗಳ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಲ್ಲ ಆಟಗಾರರನ್ನು ಆರಿಸಿ ಡ್ರೀಮ್ ರಚಿಸುತ್ತಿದ್ದಾರೆ. ಹೀಗೆ ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್ ರಚಿಸುವವರು ಈ ಕೆಳಕಂಡಂತೆ ಡ್ರೀಮ್ ಟೀಮ್ ರಚಿಸಿದರೆ ಉತ್ತಮ ಅಂಕಗಳನ್ನು ಗಳಿಸಬಹುದಾಗಿದೆ.

ಡ್ರೀಮ್ ಟೀಮ್ 1: ವಿಕೆಟ್ ಕೀಪರ್ - ಕ್ವಿಂಟನ್ ಡಿ ಕಾಕ್, ಇಶಾನ್ ಕಿಶನ್ (ನಾಯಕ

ಬ್ಯಾಟ್ಸ್‌ಮನ್‌ಗಳು - ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಕೈಲ್ ಮೇಯರ್ಸ್

ಆಲ್‌ರೌಂಡರ್‌ಗಳು - ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ಕ್ಯಾಮರೂನ್ ಗ್ರೀನ್ (ಉಪನಾಯಕ)

ಬೌಲರ್‌ಗಳು: ಬೌಲರ್‌ಗಳು - ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್‌ಡಾರ್ಫ್, ರವಿ ಬಿಷ್ಣೋಯಿ

ಡ್ರೀಮ್ ಟೀಮ್ 2: ವಿಕೆಟ್ ಕೀಪರ್ - ಕ್ವಿಂಟನ್ ಡಿ ಕಾಕ್, ಇಶಾನ್ ಕಿಶನ್

ಬ್ಯಾಟ್ಸ್‌ಮನ್‌ಗಳು - ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಕೈಲ್ ಮೇಯರ್ಸ್ (ಉಪನಾಯಕ)

ಆಲ್ ರೌಂಡರ್‌ಗಳು - ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ಕ್ಯಾಮರೂನ್ ಗ್ರೀನ್ (ನಾಯಕ)

ಬೌಲರ್‌ಗಳು - ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್‌ಡಾರ್ಫ್, ಅಮಿತ್ ಮಿಶ್ರಾ

ಸಂಭಾವ್ಯ ಆಡುವ ಬಳಗಗಳು:

ಲಕ್ನೋ ಸೂಪರ್ ಜೈಂಟ್ಸ್: ಕೈಲ್ ಮೇಯರ್ಸ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ (ನಾಯಕ), ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಅಮಿತ್ ಮಿಶ್ರಾ, ಯಶ್ ಠಾಕೂರ್, ರವಿ ಬಿಷ್ಣೋಯ್, ಯುಧ್ವೀರ್ ಸಿಂಗ್, ಅವೇಶ್ ಖಾನ್, ಆಯುಷ್ ಬದೋನಿ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ವಿಷ್ಣು ವಿನೋದ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್

Story first published: Tuesday, May 16, 2023, 18:10 [IST]
Other articles published on May 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+