For Quick Alerts
ALLOW NOTIFICATIONS  
For Daily Alerts
 

MI vs PBKS: ಪಂದ್ಯದಲ್ಲಿ ನಿಮ್ಮ ಡ್ರೀಮ್ ಟೀಮ್ ಗೆಲ್ಲಲು ಈ ಆಟಗಾರರನ್ನು ಆರಿಸಿ

IPL 2023: Mumbai Indians vs Punjab Kings dream team prediction

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಮೇ 3 ) ಎರಡು ಪಂದ್ಯಗಳು ಜರುಗುತ್ತಿವೆ. ಮಧ್ಯಾಹ್ನದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡುತ್ತಿವೆ.

ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 46 ನೇ ಪಂದ್ಯವಾಗಿದ್ದು, ಈ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇನ್ನು ಪಂಜಾಬ್ ಕಿಂಗ್ಸ್ ಈ ಬಾರಿಯ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 9 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದರೆ, 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು, 4 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಇತ್ತಂಡಗಳು ಈ ಬಾರಿಯ ಟೂರ್ನಿಯಲ್ಲಿ ಮುಖಾಮುಖಿಯಾಗಲಿರುವ ಎರಡನೇ ಪಂದ್ಯ ಇದಾಗಿದ್ದು, ಈ ಪಂದ್ಯವೂ ಸೇರಿದಂತೆ ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಒಟ್ಟು 30 ಪಂದ್ಯಗಳು ಜರುಗಿದ್ದು, ಈ ಪೈಕಿ ಮುಂಬೈ ಇಂಡಿಯನ್ಸ್ ತಂಡ 15 ಪಂದ್ಯಗಳಲ್ಲಿ ಗೆದ್ದಿದ್ದು, ಪಂಜಾಬ್ ಕಿಂಗ್ಸ್ ತಂಡ ಸಹ 15 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ಮುಖಾಮುಖಿಯಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿವೆ.

ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ಈ ಹಿಂದೆ ಪಂಜಾಬ್ ಕಿಂಗ್ಸ್ ವಿರುದ್ಧ ತವರಿನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಕಣಕ್ಕಿಳಿದಾಗ 13 ರನ್‌ಗಳ ಸೋಲನ್ನು ಕಂಡು ಮುಖಭಂಗ ಅನುಭವಿಸಿತ್ತು. ಈ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಮುಂಬೈ ಇಂಡಿಯನ್ಸ್ ಯೋಜನೆ ಹಾಕಿಕೊಂಡಿದೆ. ಇನ್ನು ಎರಡೂ ತಂಡಗಳೂ ಸಹ ಈ ಪಂದ್ಯದಲ್ಲಿ ಗೆದ್ದು ತಮ್ಮ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಳ್ಳುವ ಯೋಜನೆಯಲ್ಲಿದ್ದು, ಯಾವ ತಂಡ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಜರುಗುತ್ತಿವೆ.

ಜತೆಗೆ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಈ ಪಂದ್ಯಕ್ಕಾಗಿ ಡ್ರೀಮ್ ಟೀಮ್‌ಗಳನ್ನು ರಚಿಸುತ್ತಿದ್ದು, ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಬಹುದಾದ ಆಟಗಾರರನ್ನು ಆರಿಸಿ ಡ್ರೀಮ್ ಟೀಮ್ ರಚಿಸುತ್ತಿದ್ದಾರೆ. ಅಂತಹ ಕ್ರಿಕೆಟ್ ಪ್ರಿಯರು ಈ ಕೆಳಕಂಡಂತೆ ಡ್ರೀಮ್ ಟೀಮ್‌ಗಳನ್ನು ರಚಿಸಿದರೆ ಹೆಚ್ಚಿನ ಅಂಕಗಳನ್ನು ಗಳಿಸಬಹುದಾಗಿದೆ.

ಡ್ರೀಮ್ ಟೀಮ್ 1: ವಿಕೆಟ್ ಕೀಪರ್ - ಇಶಾನ್ ಕಿಶನ್, ಪ್ರಭ್‌ಸಿಮ್ರಾನ್ ಸಿಂಗ್

ಬ್ಯಾಟ್ಸ್‌ಮನ್‌ಗಳು - ಶಿಖರ್ ಧವನ್, ಸೂರ್ಯಕುಮಾರ್ ಯಾದವ್

ಆಲ್ ರೌಂಡರ್‌ಗಳು - ಸಿಕಂದರ್ ರಜಾ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ಯಾಮರೂನ್ ಗ್ರೀನ್ (ನಾಯಕ), ಸ್ಯಾಮ್ ಕರ್ರಾನ್ (ಉಪನಾಯಕ)

ಬೌಲರ್‌ಗಳು - ಪಿಯೂಷ್ ಚಾವ್ಲಾ, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್

ಡ್ರೀಮ್ ಟೀಮ್ 2: ಕೀಪರ್ - ಇಶಾನ್ ಕಿಶನ್

ಬ್ಯಾಟ್ಸ್‌ಮನ್‌ಗಳು - ಶಿಖರ್ ಧವನ್ (ಉಪನಾಯಕ), ಸೂರ್ಯಕುಮಾರ್ ಯಾದವ್ (ನಾಯಕ), ಟಿಮ್ ಡೇವಿಡ್

ಆಲ್ ರೌಂಡರ್‌ಗಳು - ಸಿಕಂದರ್ ರಜಾ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ಯಾಮರೂನ್ ಗ್ರೀನ್, ಸ್ಯಾಮ್ ಕರ್ರಾನ್

ಬೌಲರ್‌ಗಳು - ಪಿಯೂಷ್ ಚಾವ್ಲಾ, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್

Story first published: Wednesday, May 3, 2023, 16:57 [IST]
Other articles published on May 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+