Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಮುಂಬೈ vs ಪಂಜಾಬ್ ಮುಖಾಮುಖಿಯಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ತಂಡ ಯಾವುದು?

IPL 2023: Mumbai Indians vs Punjab Kings head to head details in kannada

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಏಪ್ರಿಲ್ 22 ) ಎರಡು ಪಂದ್ಯಗಳು ಜರುಗುತ್ತಿವೆ. ಮಧ್ಯಾಹ್ನದ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಐಪಿಎಲ್ ಟೂರ್ನಿಯ 31ನೇ ಪಂದ್ಯವಾಗಿದ್ದು, ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಇಲ್ಲಿಯವರೆಗೂ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಸೋತು, 2 ಪಂದ್ಯಗಳಲ್ಲಿ ಸೋತು, 6 ಅಂಕಗಳನ್ನು ಪಡೆದುಕೊಂಡಿದ್ದು ಅಂಕಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಅತ್ತ ಪಂಜಾಬ್ ಕಿಂಗ್ಸ್ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೂ 6 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನುಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಹೀಗೆ ಎರಡೂ ತಂಡಗಳೂ ಸಹ ಅಂಕಪಟ್ಟಿಯಲ್ಲಿ ಪೈಪೋಟಿಗೆ ಬಿದ್ದಿದ್ದು, ಯಾವ ತಂಡ ಇಂದಿನ ಪಂದ್ಯದಲ್ಲಿ ಗೆದ್ದು ಏರಿಕೆ ಕಾಣಲಿದೆ ಎಂಬ ಚರ್ಚೆಗಳು ಹೆಚ್ಚಾಗಿವೆ.

ಹೀಗೆ ಇತ್ತಂಡಗಳ ನಡುವಿನ ಈ ಪಂದ್ಯದ ಚರ್ಚೆಗಳು ಜೋರಾಗಿದ್ದು, ಎರಡೂ ತಂಡಗಳು ಇಲ್ಲಿಯವರೆಗೂ ಎಷ್ಟು ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿವೆ, ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಸೋತಿದೆ ಎಂಬ ಮಾಹಿತಿ ಮುಂದಿದೆ..

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇಲ್ಲಿಯವರೆಗೂ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಒಟ್ಟು 29 ಪಂದ್ಯಗಳು ಜರುಗಿದ್ದು, ಈ ಪೈಕಿ ಮುಂಬೈ ಇಂಡಿಯನ್ಸ್ ತಂಡ 15 ಪಂದ್ಯಗಳಲ್ಲಿ ಗೆದ್ದಿದ್ದು, ಪಂಜಾಬ್ ಕಿಂಗ್ಸ್ ತಂಡ 14 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಕೇವಲ ಒಂದೇ ಒಂದು ಗೆಲುವಿನ ಅಂತರದಿಂದ ಮುನ್ನಡೆ ಸಾಧಿಸಿದೆ.

head to head

ಇನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕೇವಲ ಒಂದೇ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ 12 ರನ್‌ಗಳ ಅಂತರದಿಂದ ಗೆಲುವನ್ನು ಕಂಡಿತ್ತು.

ಇನ್ನು 2021ರ ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಇತ್ತಂಡಗಳು ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು. ಈ ಪೈಕಿ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 9 ವಿಕೆಟ್‌ಗಳ ಅಂತರದಿಂದ ಗೆಲುವನ್ನು ಕಂಡಿತ್ತು. ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 6 ವಿಕೆಟ್‌ಗಳ ಅಂತರದ ಜಯ ಕಂಡಿತ್ತು.

ಇತ್ತಂಡಗಳು ಮುಖಾಮುಖಿಯಾದಾಗ ಮುಂಬೈ ಇಂಡಿಯನ್ಸ್ ಗಳಿಸಿದ ಗರಿಷ್ಠ ರನ್ ಎಂದರೆ 230 ಹಾಗೂ ಪಂಜಾಬ್ ಕಿಂಗ್ಸ್ ಗಳಿಸಿದ ಗರಿಷ್ಠ ರನ್ 223. ಇನ್ನು ಕಡಿಮೆ ರನ್ ಮೊತ್ತ ಗಳಿಸಿದ ವಿಚಾರಕ್ಕೆ ಬಂದರೆ ಪಂಜಾಬ್ ಕಿಂಗ್ಸ್ ಗಳಿಸಿರುವ ಕಡಿಮೆ ರನ್ ಎಂದರೆ 87 ಹಾಗೂ ಮುಂಬೈ ಇಂಡಿಯನ್ಸ್ ಗಳಿಸಿರುವ ಗರಿಷ್ಠ ರನ್ ಎಂದರೆ 119 ಆಗಿದೆ.

Story first published: Saturday, April 22, 2023, 16:06 [IST]
Other articles published on Apr 22, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+