MI vs PBKS: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ 11 & ಲೈವ್ ಸ್ಕೋರ್

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಮೇ 3 ) ಎರಡು ಪಂದ್ಯಗಳು ಜರುಗುತ್ತಿವೆ. ಮಧ್ಯಾಹ್ನ ನಡೆಯುತ್ತಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದು, ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡುತ್ತಿವೆ.
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್ ಐಎಸ್ ಬಿಂದ್ರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ಆಯ್ದುಕೊಂಡಿದ್ದು ಎದುರಾಳಿ ಪಂಜಾಬ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಪಂದ್ಯದ ಟಾಸ್ ಆದ ಬಳಿಕ ಮಾತನಾಡಿದ ರೋಹಿತ್ ಶರ್ಮಾ ನಾನು ಶಿಖರ್ ಧವನ್ ಅವರನ್ನು ಏನು ಮಾಡಿದ್ರೆ ಉತ್ತಮ ಎಂದು ಕೇಳಿದೆ, ಅದಕ್ಕವರು ಮೊದಲು ಬೌಲಿಂಗ್ ಮಾಡಿದರೆ ಉತ್ತಮ ಎಂದರು. ಅದಕ್ಕಾಗಿ ನಾನು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೇನೆ ಎಂದರು. ಇನ್ನು ತಮ್ಮ ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾತ್ರ ಆಗಿದ್ದು, ರಿಲೆ ಮೆರೆಡಿತ್ ಗಾಯಕ್ಕೊಳಗಾಗಿದ್ದು, ಆತನ ಬದಲು ಆಕಾಶ್ ಮದ್ವಾಳ್ ಕಣಕ್ಕಿಳಿಯಲಿದ್ದಾರೆ ಎಂದರು.
ಆಡುವ ಬಳಗಗಳು:
ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಜೋಫ್ರೆ ಆರ್ಚರ್, ಪಿಯೂಷ್ ಚಾವ್ಲಾ, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್, ಅರ್ಷದ್ ಖಾನ್
ಪಂಜಾಬ್ ಕಿಂಗ್ಸ್ ಆಡುವ ಬಳಗ: ಪ್ರಭ್‌ಸಿಮ್ರಾನ್ ಸಿಂಗ್, ಶಿಖರ್ ಧವನ್(ನಾಯಕ), ಮ್ಯಾಥ್ಯೂ ಶಾರ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸ್ಯಾಮ್ ಕರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್
ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಲೈವ್ ಸ್ಕೋರ್ ಕೆಳಕಂಡಂತಿದೆ..
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications