Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, MI vs PBKS: ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ: ಆಡುವ ಬಳಗ, Live ಸ್ಕೋರ್

ಇಂಡಿಯನ್ ಪ್ರೀಮಿಯರ್ ಲೀಗ್‌ನ 31ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪಂಜಾಬ್ ಕಿಂಗ್ಸ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ತಂಡ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದೆ. ವೇಗಿ ಜೋಫ್ರಾ ಆರ್ಚರ್ ಗಾಯದಿಂದ ಚೇತರಿಸಿಕೊಮಡು ಕಮ್‌ಬ್ಯಾಕ್ ಮಾಡಿದ್ದು ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿದಿದ್ದು ಸ್ಯಾಮ್ ಕರನ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಖಾಯಂ ನಾಯಕ ಶಿಖರ್ ಧವನ್ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಳ್ಳದಿರುವ ಕಾರಣ ಸ್ಯಾಮ್ ಕರನ್‌ಗೆ ಮತ್ತೊಮ್ಮೆ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ದೊರೆತಿದೆ.

IPL 2023, Mumbai Indians vs Punjab Kings; Toss report, playing XI and Live

ಮುಂಬೈ ಇಂಡಿಯನ್ಸ್ ತಂಡ ಟೂರ್ನಿಯ ಆರಂಭದಲ್ಲಿ ಸತತ ಎರಡು ಸೋಲು ಅನುಭವಿಸಿ ಕಳಪೆ ಆರಂಬ ಪಡೆದ ಬಳಿಕ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿದ್ದು ಸತತ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ರೋಹಿತ್ ಶರ್ಮಾ ಪಡೆ ಅತ್ಮವಿಶ್ವಾಸದಲ್ಲಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡ ಆಡಿರುವ ಆರು ಪಂದ್ಯಗಳಲ್ಲಿ ಮೂರು ಗೆಲುವು ಮೂರು ಸೋಲು ಅನುಭವಿಸಿದೆ. ನೆಟ್‌ರನ್‌ರೇಟ್‌ನಲ್ಲಿ ಹಿಂದುಳಿದಿರುವ ಕಾರಣ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ

1
57086

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್

ಬೆಂಚ್: ನೆಹಾಲ್ ವಧೇರಾ, ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ಕುಮಾರ್ ಕಾರ್ತಿಕೇಯ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಸಂದೀಪ್ ವಾರಿಯರ್, ಆಕಾಶ್ ಮಾಧ್ವಲ್, ಅರ್ಷದ್ ಖಾನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್

ಪಂಜಾಬ್ ಕಿಂಗ್ಸ್: ಅಥರ್ವ ಟೈಡೆ, ಪ್ರಭ್‌ಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಲಿಯಾಮ್ ಲಿವಿಂಗ್‌ಸ್ಟನ್, ಸ್ಯಾಮ್ ಕರನ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್‌ಪ್ರೀತ್ ಸಿಂಗ್ ಭಾಟಿಯಾ, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್
ಬೆಂಚ್: ಸಿಕಂದರ್ ರಜಾ, ಕಗಿಸೊ ರಬಾಡ, ರಿಷಿ ಧವನ್, ಮೋಹಿತ್ ರಥಿ, ಶಿವಂ ಸಿಂಗ್, ಭಾನುಕಾ ರಾಜಪಕ್ಸೆ, ಬಲ್ತೇಜ್ ಸಿಂಗ್, ವಿಧ್ವತ್ ಕಾವೇರಪ್ಪ, ಗುರ್ನೂರ್ ಬ್ರಾರ್, ನಾಥನ್ ಎಲ್ಲಿಸ್

Story first published: Saturday, April 22, 2023, 19:25 [IST]
Other articles published on Apr 22, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+