
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಏಪ್ರಿಲ್ 30 ) ಎರಡು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯ ಟೂರ್ನಿಯ 42ನೇ ಪಂದ್ಯವಾಗಿದ್ದು, ಪಂದ್ಯ ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಂದು ರೋಹಿತ್ ಶರ್ಮಾ ಹುಟ್ಟುಹಬ್ಬದ ವಿಶೇಷವೂ ಸಹ ಇದ್ದು, ಮುಂಬೈ ಇಂಡಿಯನ್ಸ್ ಬಳಗ ಈ ಪಂದ್ಯವನ್ನು ಗೆದ್ದು ಕಳೆದ ಪಂದ್ಯಗಳ ಸತತ ಸೋಲಿನಿಂದ ಆಚೆ ಬಂದು ರೋಹಿತ್ ಶರ್ಮಾಗೆ ಹುಟ್ಟುಹಬ್ಬಕ್ಕೆ ಗಿಫ್ಟ್ ನೀಡುವ ಯೋಜನೆಯಲ್ಲಿದೆ.
ರಾಜಸ್ಥಾನ್ ರಾಯಲ್ಸ್ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿ 5 ಪಂದ್ಯಗಳನ್ನು ಗೆದ್ದು 3 ಪಂದ್ಯಗಳಲ್ಲಿ ಸೋತು 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, 7 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ.
ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 32 ರನ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿತ್ತು ಹಾಗೂ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟನ್ಸ್ ವಿರುದ್ಧ 55 ರನ್‌ಗಳ ಸೋಲನ್ನು ಕಂಡಿತ್ತು ಹಾಗೂ ಅದಕ್ಕೂ ಮುನ್ನ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿಯೂ ಸಹ ಮುಂಬೈ ಇಂಡಿಯನ್ಸ್ ಸೋಲನುಭವಿಸಿತ್ತು.
ಒಂದೆಡೆ ದೈತ್ಯ ತಂಡಗಳ ಮುಖಾಮುಖಿಯಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆ ಶುರುವಾಗಿದ್ದರೆ, ಮತ್ತೊಂದೆಡೆ ಈ ಪಂದ್ಯಕ್ಕಾಗಿ ಫ್ಯಾಂಟಸಿ ಕ್ರಿಕೆಟ್ ಪ್ರಿಯರು ಡ್ರೀಮ್ ತಂಡಗಳನ್ನು ರಚಿಸುತ್ತಿದ್ದಾರೆ. ಈ ರೀತಿ ಡ್ರೀಮ್ ಟೀಮ್ ರಚಿಸುತ್ತಿರುವವರು ಈ ಕೆಳಕಂಡಂತೆ ಆಟಗಾರರನ್ನು ಆರಿಸಿದರೆ ಉತ್ತಮ ಅಂಕಗಳನ್ನು ಪಡೆಯಬಹುದಾಗಿದೆ.
ಡ್ರೀಮ್ ಟೀಮ್ 1: ವಿಕೆಟ್ ಕೀಪರ್ - ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ಉಪನಾಯಕ)
ಬ್ಯಾಟ್ಸ್‌ಮನ್‌ಗಳು- ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ
ಆಲ್ ರೌಂಡರ್‌ಗಳು - ರವಿಚಂದ್ರನ್ ಅಶ್ವಿನ್, ಕ್ಯಾಮರೂನ್ ಗ್ರೀನ್
ಬೌಲರ್‌ಗಳು - ಪಿಯೂಷ್ ಚಾವ್ಲಾ, ಯುಜ್ವೇಂದ್ರ ಚಾಹಲ್ (ನಾಯಕ), ಟ್ರೆಂಟ್ ಬೌಲ್ಟ್
ಡ್ರೀಮ್ ಟೀಮ್ 2: ಕೀಪರ್ - ಜೋಸ್ ಬಟ್ಲರ್ (ನಾಯಕ), ಸಂಜು ಸ್ಯಾಮ್ಸನ್, ಇಶಾನ್ ಕಿಶನ್
ಬ್ಯಾಟ್ಸ್‌ಮನ್‌ಗಳು - ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ
ಆಲ್ ರೌಂಡರ್‌ಗಳು - ರವಿಚಂದ್ರನ್ ಅಶ್ವಿನ್, ಕ್ಯಾಮರೂನ್ ಗ್ರೀನ್
ಬೌಲರ್‌ಗಳು - ಪಿಯೂಷ್ ಚಾವ್ಲಾ, ಯುಜ್ವೇಂದ್ರ ಚಾಹಲ್ (ಉಪನಾಯಕ), ಟ್ರೆಂಟ್ ಬೌಲ್ಟ್
ಸಂಭಾವ್ಯ ಆಡುವ ಬಳಗಗಳು:
ಮುಂಬೈ ಇಂಡಿಯನ್ಸ್ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಅರ್ಜುನ್ ತೆಂಡೂಲ್ಕರ್, ಜೇಸನ್ ಬೆಹ್ರೆಂಡಾರ್ಫ್, ರಿಲೆ ಮೆರೆಡಿತ್, ತಿಲಕ್ ವರ್ಮಾ
ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ ( ನಾಯಕ ಹಾಗೂ ವಿಕೆಟ್), ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ಶಿಮ್ರೋನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಆಡಮ್ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್