IPL 2023: ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಟಾಸ್ ರಿಪೋರ್ಟ್, ಆಡುವ ಬಳಗ Live ಸ್ಕೋರ್
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ 1000ನೇ ಪಂದ್ಯ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದೆ. ಮುಂಬೈ ಇಂಡಿಯನ್ಸ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಐತಿಹಾಸಿಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ರೋಹಿತ್ ಶರ್ಮಾ ನೇತೃತ್ವದ ಐದು ಬಾರಿಯ ಚಾಂಪಿಯನ್ ತಂಡವಾಗಿರುವ ಮುಂಬೈ ಇಂಡಿಯನ್ಸ ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದು ಸಂಕಷ್ಟದ ಸ್ಥಿತಿಯಲ್ಲಿದೆ. ತಂಡದಿಂದ ಸ್ಥಿರ ಪ್ರದರ್ಶನ ಬಾರದಿರುವುದು ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬಿದ್ದಿದ್ದು ಅಂಕಪಟ್ಟಿಯಲ್ಲಿಯೂ ಮುಂಬೈ ಇಂಡಿಯನ್ಸ್ ಹಿಂದುಳಿಯುವಂತಾಗಿದೆ. ಮುಂಬೈ ಇಂಡಿಯನ್ಸ್ 7 ಪಂದ್ಯಗಳನ್ನು ಆಡಿದ್ದು 3 ಗೆಲುವು ಸಾಧಿಸಿದ್ದರೆ 4 ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ 6 ಅಂಕಗಳೊಂದಿಗೆ 9ನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ತನ್ನ ಸ್ಥಾನವನ್ನು ಉತ್ತಮ ಪಡಿಸಿಕೊಳ್ಳಬೇಕಿದ್ದರೆ ಮುಂಬೈ ಇಂಡಿಯನ್ಸ್ ತಂಡ ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ

Live ಸ್ಕೋರ್ ಹೀಗಿದೆ:
ಮತ್ತೊಂದೆಡೆ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ ತಂಡ ಸದ್ಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಉತ್ತಮ ಪ್ರದರ್ಶನ ನೀಡುತ್ತಾ ಗೆಲುವು ಸಾಧಿಸುತ್ತಿದ್ದ ಆರ್‌ಆರ್ ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡು ಹಿನ್ನಡೆ ಅನುಭವಿಸಿತ್ತು. ಬಳಿಕ ಸಿಎಸ್‌ಕೆ ವಿರುದ್ಧ ಅಮೋಘ ಗೆಲುವು ಸಾಧಿಸುವ ಮೂಲಕ ಗೆಲುವಿನ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧವೂ ಮೇಲುಗೈ ಸಾಧಿಸುವ ಆತ್ಮವಿಶ್ವಾಸದಲ್ಲಿದೆ ಆರ್‌ಆರ್ ತಂಡ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರಣ ಮತ್ತೊಂದು ಹೈಸ್ಕೋರಿಂಗ್ ಪಂದ್ಯವಾಗುವ ನಿರೀಕ್ಷೆಯಿದೆ. ಇಲ್ಲಿ ಚೆಂಡು ಸರಾಗವಾಗಿ ಬ್ಯಾಟ್‌ಗೆ ಬರುವ ಕಾರಣ ಬ್ಯಾಟರ್‌ಗಳಿಗೆ ರನ್‌ಗಳಿಸಲು ಸುಲಭವಾಗಿದ್ದ ಬೌಲರ್‌ಗಳಿಗೆ ಅಗ್ನಿಪರೀಕ್ಷೆಯುಂಟಾಗಿದೆ. ಆದರೆ ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳ ಕೈಮೇಲಾಗುವ ಸಾಧ್ಯತೆಯಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಲ್ಲಿನ ಸರಾಸರಿ ಸ್ಕೋರ್ 170-190 ಆಗಿದೆ. ಹವಾಮಾನ ವರದಿ: ಪಂದ್ಯದ ದಿನ ಮಳೆಯಾಗುವ ಸಾಧ್ಯತೆಯಿಲ್ಲ. ಇನ್ನು ಪಂದ್ಯದ ಸಂದರ್ಭದಲ್ಲಿ 28-33 ಡಿಗ್ರಿ ಮಧ್ಯೆ ಉಷ್ಣಾಂಶವಿರುವ ನಿರೀಕ್ಷೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications