Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023, ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು: ಟಾಸ್ ರಿಪೋರ್ಟ್, ಆಡುವ ಬಳಗ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಟಾಸ್ ಗೆದ್ದಿದ್ದು ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಆರ್‌ಸಿಬಿ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ತಲಾ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಆರ್‌ಸಿಬಿ ತಂಡದಲ್ಲಿ ಕರ್ಣ್ ಶರ್ಮಾ ಆಡುವ ಬಳಗದಿಂದ ಹೊರಬಿದ್ದಿದ್ದು ವೈಶಾಕ್ ವಿಜಯ್‌ಕುಮಾರ್‌ಗೆ ಆಡುವ ಬಳಗದಲ್ಲಿ ಸ್ಥಾನ ದೊರೆತಿದೆ. ಇನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಜೋಫ್ರಾ ಆರ್ಚರ್ ಟೂರ್ನಿಯಿಂದಲೇ ಹೊರಬಿದ್ದಿದ್ದು ಕ್ರಿಸ್ ಜೋರ್ಡನ್ ಸ್ಥಾನ ಪಡೆದುಕೊಂಡಿದ್ದಾರೆ.

IPL 2023, Mumbai Indians vs Royal Challengers Bangalore, Toss report, playing XI

ಮುಂಬೈನ ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳ ಸ್ವರ್ಗ ಎನಿಸಿಕೊಂಡಿದ್ದು ಮತ್ತೊಂದು ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷಿಸಬಹುದು. ಎರಡು ತಮಡಗಳು 100ಕ್ಕೂ ಅಧಿಕ ರನ್‌ಗಳಿಸಿದರೂ ಇಲ್ಲಿ ಅಚ್ಚರಿಯಿಲ್ಲ.ಉಳಿದ ತಾಣಗಳಿಗೆ ಹೋಲಿಸಿದರೆ ಇಲ್ಲಿ ಬ್ಯಾಟರ್‌ಗಳು ಸುಲಭವಾಗಿ ರನ್‌ಗಳನ್ನು ಗಳಿಸಬಹುದು. ಇಲ್ಲಿ ಬೌಲಿಂಗ್ ವಿಭಾಗಕ್ಕೆ ಕಠಿಣ ಸವಾಲು ಎದುರಾಗಲಿದ್ದು ಯಾವ ತಂಡ ಹೆಚ್ಚಿನ ನಿಯಂತ್ರಣ ಸಾಧಿಸಲಿದೆ ಅವರಿಗೆ ಪಂದ್ಯ ಗೆಲ್ಲುವ ಅವಕಾಶ ಹೆಚ್ಚಿದೆ.

ಹವಾಮಾನ ವರದಿ ಹೇಗಿದೆ?: ಈ ಪಂದ್ಯಕ್ಕೆ ಮಳೆಯ ಆತಂಕವಿಲ್ಲ. ಹಾಗಾಗಿ ಪೂರ್ಣ ಪ್ರಮಾಣದಲ್ಲಿ ಪಂದ್ಯ ಆಯೋಜನೆಯಾಗಲಿದೆ. 29-34 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶವಿರುವ ಸಾಧ್ಯತೆಯಿದೆ.

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆನ್ಡಾರ್ಫ್

ಬೆಂಚ್: ರಮಣದೀಪ್ ಸಿಂಗ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಸಂದೀಪ್ ವಾರಿಯರ್, ರಾಘವ್ ಗೋಯಲ್, ಡೆವಾಲ್ಡ್ ಬ್ರೆವಿಸ್, ರಿಲೆ ಮೆರೆಡಿತ್, ಶಮ್ಸ್ ಮುಲಾನಿ, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ಹೃತಿಕ್ ಶೋಕೀನ್, ದುವಾನ್ ಜಾನ್ಸೆನ್, ಅರ್ಷದ್ ಖಾನ್

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಕೇದಾರ್ ಜಾಧವ್, ಮೈಕೆಲ್ ಬ್ರೇಸ್‌ವೆಲ್, ಸುಯಶ್ ಪ್ರಭುದೇಸಾಯಿ, ಕರ್ಣ್ ಶರ್ಮಾ, ಶಹಬಾಜ್ ಅಹ್ಮದ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ, ಮನೋಜ್ ಭಾಂಡಗೆ, ವೇಯ್ನ್ ಪಾರ್ನೆಲ್, ಸೋನು ಯಾದವ್, ಫಿನ್ ಅಲೆನ್, ಸಿದ್ದಾರ್ಥ್ ಕೌಲ್

Story first published: Tuesday, May 9, 2023, 19:26 [IST]
Other articles published on May 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+