Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023 DC vs MI : ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್

ಇಂಡಿಯನ್ ಪ್ರೀಮಿಯರ್ ಲೀಗ್‌ 2023ರ 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡೂ ತಂಡಗಳು ಇದುವರೆಗೂ ಗೆಲುವು ಸಾಧಿಸುವಲ್ಲಿ ವಿಫಲವಾಗಿದ್ದು, ಇಂದಿನ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆಯಲು ಎರಡೂ ತಂಡಗಳು ಕಾದಾಟ ನಡೆಸಲಿವೆ. ಮುಂಬೈ ಇಂಡಿಯನ್ಸ್ ಆಡಿದರ ಎರಡೂ ಪಂದ್ಯಗಳಲ್ಲಿ ಸೋತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಮೂರು ಪಂದ್ಯಗಳನ್ನು ಕಳೆದುಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಡೇವಿಡ್ ವಾರ್ನರ್ ಒಬ್ಬರೇ ಬ್ಯಾಟಿಂಗ್‌ನಲ್ಲಿ ಆಸರೆಯಾಗಿದ್ದಾರೆ. ಅಕ್ಷರ್ ಪಟೇಲ್ ಕೂಡ ಸ್ಥಿರವಾದ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ. ರೋವ್ಮನ್ ಪೋವೆಲ್, ಪೃಥ್ವಿ ಶಾ, ಮನೀಶ್ ಪಾಂಡೆ, ಸರ್ಫರಾಜ್ ಖಾನ್ ಬ್ಯಾಟಿಂಗ್ ವಿಭಾಗದಲ್ಲಿ ಕೊಡುಗೆ ನೀಡದಿದ್ದರೆ ಇಂದಿನ ಪಂದ್ಯದಲ್ಲಿ ಗೆಲುವು ಕಾಣುವುದು ಕೂಡ ಕಷ್ಟವಾಗಲಿದೆ.

Mumbai Indians Win The Toss

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಪ್ರಮುಖ ಬದಲಾವಣೆ ಮಾಡಿದೆ. ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಯಶ್ ಧುಲ್ ಕೂಡ ಮೊದಲ ಬಾರಿಗೆ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಆಡಲು ಸಜ್ಜಾಗಿದ್ದಾರೆ. ಮನೀಶ್ ಪಾಂಡೆ ಇಂದಿನ ಪಂದ್ಯದಲ್ಲಿ ಅವಕಾಶ ಪಡೆದಿದ್ದು ಉತ್ತಮ ಪ್ರದರ್ಶನ ನೀಡಲೇಬೇಕಿದೆ.

ಮುಂಬೈ ಇಂಡಿಯನ್ಸ್ ತಂಡದಲ್ಲಿ ಕೂಡ ಬದಲಾವಣೆ ಮಾಡಲಾಗಿದೆ ನೆಹಾಲ್ ವಧೇರಾ ಮತ್ತೆ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಜೋಫ್ರಾ ಆರ್ಚರ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದು, ರಿಲೆ ಮೆರೆಡಿತ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕಳೆದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋತಿರುವ ರೋಹಿತ್ ಶರ್ಮಾ ಪಡೆ ಇಂದು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಖಾತೆ ತೆರೆಯುವ ಉತ್ಸಾಹದಲ್ಲಿದೆ.

Mumbai Indians Win The Toss

ಡೆಲ್ಲಿ ಪಿಚ್ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ನೀಡಲಿದ್ದು ಹೈಸ್ಕೋರಿಂಗ್ ಪಂದ್ಯವಾಗುವ ಸಾಧ್ಯತೆ ಇದೆ. ಪಂದ್ಯ ನಡೆದಂತೆ ಚೆಂಡು ತಿರುಗುವ ಸಾಧ್ಯತೆ ಇರುವುದರಿಂದ ಸ್ಪಿನ್ನರ್ ಗಳಿಗೆ ಹೆಚ್ಚಿನ ನೆರವು ಸಿಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ರನ್ ಕಲೆಹಾಕಿದರೆ ಮಾತ್ರ ಮುಂಬೈನ ಬಲಿಷ್ಠ ಬ್ಯಾಟಿಂಗ್‌ ಪಡೆಯನ್ನು ಕಟ್ಟಿ ಹಾಕಬಹುದು.

ಉಭಯ ತಂಡಗಳ ಆಡುವ ಬಳಗ

ಡೆಲ್ಲಿ ಕ್ಯಾಪಿಟಲ್ಸ್ : ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ಯಶ್ ಧುಲ್, ರೋವ್‌ಮನ್ ಪೊವೆಲ್, ಲಲಿತ್ ಯಾದವ್, ಅಕ್ಸರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕುಲದೀಪ್ ಯಾದವ್, ಅನ್ರಿಚ್ ನೊಕಿಯಾ, ಮುಸ್ತಾಫಿಜುರ್ ರೆಹಮಾನ್. ಇಂಪ್ಯಾಕ್ಟ್ ಪ್ಲೇಯರ್: ಮುಖೇಶ್ ಕುಮಾರ್, ಅಮನ್ ಖಾನ್, ಸರ್ಫರಾಜ್ ಖಾನ್, ಪ್ರವೀಣ್ ದುಬೆ, ಇಶಾಂತ್ ಶರ್ಮಾ.

ಮುಂಬೈ ಇಂಡಿಯನ್ಸ್ : ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಅರ್ಷದ್ ಖಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ರಿಲೆ ಮೆರೆಡಿತ್. ಇಂಪ್ಯಾಕ್ಟ್ ಪ್ಲೇಯರ್: ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್, ಕುಮಾರ್ ಕಾರ್ತಿಕೇಯ, ಅರ್ಜುನ್ ತೆಂಡೂಲ್ಕರ್, ರಮಣದೀಪ್ ಸಿಂಗ್.

Story first published: Tuesday, April 11, 2023, 19:23 [IST]
Other articles published on Apr 11, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+