IPL 2023: ಆ ಪ್ರಯತ್ನದಲ್ಲಿ ನಾನು ಸೋತೆ: RCB ವಿರುದ್ಧ ಗೆದ್ದ ಬಳಿಕ ನೇಹಲ್ ವಧೇರಾ ಹೇಳಿಕೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಸಂಕಷ್ಟಕ್ಕೆ ಸಿಲುಕಿದೆ. ಈ ಸೋಲಿನಿಂದಾಗಿ ಪ್ಲೇಆಫ್ ಹಂತಕ್ಕೇರುವ ಸ್ಪರ್ಧೆಯಲ್ಲಿ ಫಾಫ್ ಡು ಪ್ಲೆಸಿಸ್ ಪಡೆ ಭಾರೀ ಹಿನ್ನಡೆ ಕಂಡಿದ್ದು ಮುಂದಿನ ಹಾದಿ ದುರ್ಗಮವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧ 200 ರನ್‌ಗಳ ಬೃಹತ್ ಗುರಿ ನೀಡಿದರೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಾದ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಹಾಗೂ ನೇಹಲ್ ವಧೇರಾ ಸ್ಪೋಟಕ ಪ್ರದರ್ಶನದ ಕಾರಣದಿಂದಾಗಿ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸುಲಭವಾಗಿ ಗೆಲುವು ಸಾಧಿಸಿದೆ.
ಈ ಗೆಲುವಿನ ಬಳಿಕ ಯುವ ಆಟಗಾರ ನೇಹಲ್ ವಧೇರಾ ಪ್ರತಿಕ್ರಿಯೆ ನೀಡಿದ್ದು ಸಂತಸ ಹಂಚಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಜೊತೆಗೆ ಶತಕದ ಜೊತೆಯಾಟದಲ್ಲಿ ಭಾಗಿಯಾದ ವಧೇರಾ 34 ಎಸೆತಗಳಲ್ಲಿ ಅಜೇಯ 52 ರನ್ ಬಾರಿಸಿದರು. ಈ ಸಂದರ್ಭದಲ್ಲಿ ಅವರು ಅಗ್ರ ಕ್ರಮಾಂಕದಲ್ಲಿ ಕಣಕ್ಕಿಳಿಯಲು ಅವಕಾಶ ದೊರೆತ ಕಾರಣ ಹೆಚ್ಚು ನಿರಾಳವಾಗಿ ಬ್ಯಾಟ್ ಬೀಸಲು ಸಾಧ್ಯವಾಯಿತು ಎಂದಿದ್ದಾರೆ.

"ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸುವುದು ಉತ್ತಮವಾದ ಅನುಭವ. ಮೊದಲು ನಾನು ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದೆ. ಈಗ ನನಗೆ ಸತತವಾಗಿ ಅರ್ಧ ಶತಕಗಳಿಸುವ ಅವಕಾಶ ದೊರೆತಿದೆ. ಹಾಗಾಗಿ ನನ್ನ ಪ್ರದರ್ಶನದ ಬಗ್ಗೆ ನನಗೆ ಸಂತಸವಿದೆ. ಆದರೆ ತಂಡ ಉತ್ತಮವಾಗಿ ಪ್ತರದರ್ಶನ ನೀಡಿ ಗೆಲುವು ಸಾಧಿಸಿಜರುವುದು ಸಂತಸ ಮತ್ತಷ್ಟು ಹೆಚ್ಚಿಸಿದೆ" ಎಂದಿದ್ದಾರೆ ನೇಹಲ್ ವಧೇರಾ.
ಮುಂದುವರಿದು ಅವರು "ವಾಂಖೆಡೆಯಲ್ಲಿ ಈ ಹಿಂದೆಯೂ 200ಕ್ಕೂ ಅಧಿಕ ರನ್‌ಗಳ ಗುರಿಯನ್ನು ಬೆನ್ನಟ್ಟುವ ಸಂದರ್ಭದಲ್ಲಿ ನಾವು ಯಶಸ್ಸು ಸಾಧಿಸಿದ್ದೆವು. ಮತ್ತೊಮ್ಮೆ ಅದನ್ನು ಆವು ಸಾಧಿಸಿದ್ದೇವೆ. ತಂಡ ನನಗೆ ನೀಡಿದ ಜವಾಬ್ಧಾರಿಯನ್ನು ನಿಭಾಯಿಸುವ ಆತ್ಮಿಶ್ವಾಸವಿತ್ತು. ಪಂದ್ಯವನ್ನು ಯಶಸ್ವಿಯಾಗಿ ಮುಗಿಸಲು ಸಾಧ್ಯವಾಗಿದ್ದಕ್ಕೆ ಬಹಳ ಖುಷಿಯಿದೆ" ಎಂದು ವಧೇರಾ ಪಂದ್ಯ ಮುಕ್ತಾಯದ ಬಳಿಕ ಹೇಳಿಕೆ ನೀಡಿದ್ದಾರೆ.
ಇನ್ನು ಸೂರ್ಯಕುಮಾರ್ ಯಾದವ್ ಜೊತೆಗಿನ ಜೊತೆಯಾಟದ ಬಗ್ಗೆಯೂ ವಧೇರಾ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್ ಶೈಲಿಯಲ್ಲಿ ಬ್ಯಾಟಿಂಗ್ ನಡೆಸುವ ಪ್ರಯತ್ನ ನಡೆಸಿ ವಿಫಲವಾದೆ ಎಂದು ಕೂಡ ಅವರು ಹೇಳಿದ್ದಾರೆ. "ಸೂರ್ಯಕುಮಾರ್ ಯಾದವ್ ಜೊತೆಗೆ ಬ್ಯಾಟಿಂಗ್ ನಡೆಸುವುದು ಬಹಳ ಆನಂದ. ಅವರ ಕೆಲ ಹೊಡೆತಗಳನ್ನು ನಕಲು ಮಾಡಲು ಮಾಡಲು ಪ್ರಯತ್ನಿಸಿದೆ. ಆದರೆ ಅದು ಅವರಂತೆ ಸಾಧ್ಯವಾಗಲಿಲ್ಲ. ಯಾಕೆಂದರೆ ಅವುಗಳನ್ನು ಬಾರಿಸುವುದು ಬಹಳ ಕಷ್ಟ. ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ನಡೆಸಲು ಅದ್ಭುತವಾದ ಜೊತೆಗಾರ" ಎಂದಿದ್ದಾರೆ ನೇಹಲ್ ವಧೇರಾ.
ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ನೆಹಾಲ್ ವಧೇರಾ, ಟಿಮ್ ಡೇವಿಡ್, ,ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆನ್ಡಾರ್ಫ್
ಬೆಂಚ್: ರಮಣದೀಪ್ ಸಿಂಗ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಸಂದೀಪ್ ವಾರಿಯರ್, ಡೆವಾಲ್ಡ್ ಬ್ರೆವಿಸ್, ರಿಲೆ ಮೆರೆಡಿತ್, ರಾಘವ್ ಗೋಯಲ್, ಶಮ್ಸ್ ಮುಲಾನಿ, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ಹೃತಿಕ್ ಶೋಕೀನ್, ದುವಾನ್ ಜಾನ್ಸೆನ್, ಅರ್ಷದ್ ಖಾನ್
ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ವಿಜಯ್‌ಕುಮಾರ್ ವೈಶಾಕ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಬೆಂಚ್: ಕೇದಾರ್ ಜಾಧವ್, ಮೈಕೆಲ್ ಬ್ರೇಸ್‌ವೆಲ್, ಸುಯಶ್ ಪ್ರಭುದೇಸಾಯಿ, ಕರ್ಣ್ ಶರ್ಮಾ, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಶಹಬಾಜ್ ಅಹ್ಮದ್, ಹಿಮಾಂಶು ಶರ್ಮಾ, ಮನೋಜ್ ಭಾಂಡಗೆ, ವೇಯ್ನ್ ಪಾರ್ನೆಲ್, ಸೋನು ಯಾದವ್, ಫಿನ್ ಅಲೆನ್, ಸಿದ್ದಾರ್ಥ್ ಕೌಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications