For Quick Alerts
ALLOW NOTIFICATIONS  
For Daily Alerts
 

Michael Bracewell joins RCB : ಆರ್‌ಸಿಬಿ ತಂಡಕ್ಕೆ ವಿಲ್ ಜಾಕ್ಸ್ ಬದಲಿಗೆ ನ್ಯೂಜಿಲೆಂಡ್ ಆಲ್‌ರೌಂಡರ್ ಸೇರ್ಪಡೆ

IPL 2023: New Zealand all-rounder Michael Bracewell replace Will Jacks in RCB for upcoming IPL season

ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿಯ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರವೇ ಬಾಕಿಯಿದೆ. ಈ ಹಂತದಲ್ಲಿ ಆರ್‌ಸಿಬಿ ತಂಡಕ್ಕೆ ಆಲ್‌ರೌಂಡರ್ ವಿಭಾಗದಲ್ಲಿ ಸೇರ್ಪಡೆಯಾಗಿದ್ದ ವಿಲ್ ಜಾಕ್ಸ್ ಗಾಯಗೊಂಡು ಟೂರ್ನಿಯಿಮದ ಹೊರಬಿದ್ದಿದ್ದರು. ಹೀಗಾಗಿ ಆ ಸ್ಥಾನಕ್ಕೆ ಈಗ ನ್ಯೂಜಿಲೆಂಡ್ ತಂಡದ ಆಲ್‌ರೌಂಡರ್ ಸೇರ್ಪಡೆಯಾಗಿದ್ದಾರೆ. ಕಿವೀಸ್ ಪಡೆಯ ಆಲ್‌ರೌಂಡರ್ ಮೈಕಲ್ ಬ್ರೇಸ್‌ವೆಲ್ ಆರ್‌ಸಿಬಿ ತಂಡದೊಂದಿಗೆ ಸಹಿ ಹಾಕಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಸಂದರ್ಭದಲ್ಲಿ ಇಂಗ್ಲೆಂಡ್ ತಂಡದ ಆಲ್‌ರೌಂಡರ್ ವಿಲ್ ಜಾಕ್ಸ್ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಐಪಿಎಲ್‌ನಿಂದ ಅವರು ಹೊರಗುಳಿಯುವುದು ಅನಿವಾರ್ಯವಾಯಿತು. ಹೀಗಾಗಿ ಆರ್‌ಸಿಬಿ ಮತ್ತೋರ್ವ ಆಲ್‌ರೌಂಡರ್ ನ್ಯೂಜಿಲೆಂಡ್ ತಂಡದ ಆಟಗಾರ ಮೈಕಲ್ ಬ್ರೇಸ್‌ವೆಲ್ ಅವರನ್ನು ಸೇರ್ಪಡೆಗೊಳಿಸಿದೆ. ತಮ್ಮ ಮೂಲಬೆಲೆ 1 ಕೋಟಿಗೆ ಅವರು ಆರ್‌ಸಿಬಿ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಇನ್ನು ಮೈಕಲ್ ಬ್ರೇಸ್‌ವೆಲ್‌ಗೆ ಭಾರತದಲ್ಲಿ ಆಡಿರುವ ಅನುಭವವೂ ಇದೆ. ಈ ವರ್ಷಾರಂಭದಲ್ಲಿ ಇಂಗ್ಲೆಂಡ್ ತಂಡ ಭಾರತಕ್ಕೆ ಪ್ರವಾಸ ಕೈಗೊಂಡಿದ್ದಾಗ ಏಕದಿನ ಹಾಗೂ ಟಿ20 ಸರಣಿಯಲ್ಲಿ ಕಿವೀಸ್ ಪರವಾಗಿ ಕಣಕ್ಕಿಳಿದಿದ್ದರು. ಇನ್ನು ಈವರೆಗೆ ಬ್ರೇಸ್‌ವೆಲ್ ಒಟ್ಟಾರೆಯಾಗಿ 117 ಟಿ20 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದು 30.86ರ ಸರಾಸರಿಯಲ್ಲಿ 133.48ರ ಸ್ಟ್ರೈಕ್‌ರೇಟ್‌ನಲ್ಲಿ 2284 ರನ್‌ಗಳಿಸಿದ್ದಾರೆ. ಒಂದು ಶತಕ ಹಾಗೂ 13 ಅರ್ಧ ಶತಕಗಳು ಅವರ ಹೆಸರಿನಲ್ಲಿದೆ. ಇನ್ನು 40 ವಿಕೆಟ್‌ಗಳನ್ನು ಕೂಡ ಅವರು ಸಂಪಾದಿಸಿದ್ದು 4 ನಾಲ್ಕು ವಿಕೆಟ್‌ಗಳ ಗೊಂಚಲು ಹೊಂದಿದ್ದಾರೆ.

ಈ ಬಗ್ಗೆ ಐಪಿಎಲ್ ಮಾಧ್ಯಮ ಪ್ರಕಟಣೆ ನೀಡಿದೆ. "ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಗೆ ಇಂಗ್ಲೆಂಡ್ ಬ್ಯಾಟರ್ ವಿಲ್ ಜಾಕ್ಸ್ ಬದಲಿಗೆ ನ್ಯೂಜಿಲೆಂಡ್‌ನ ಮೈಕೆಲ್ ಬ್ರೇಸ್‌ವೆಲ್ ಅವರೊಂದಿಗೆ ಒಪ್ಪಂದ ಮಾಡಿಕೊಂಡಿದೆ. ವಿಲ್ ಜಾಕ್ಸ್ ಅವರನ್ನು ಆರ್‌ಸಿಬಿ ಹರಾಜಿನಲ್ಲಿ 3.2 ಕೋಟಿಗೆ ಫ್ರಾಂಚೈಸಿ ಖಡರೀಸಿತ್ತು. ಆದರೆ ಅವರು ಗಾಯದ ಕಾರಣದಿಂದಾಗಿ ಅಲಭ್ಯವಾಗಲಿದ್ದಾರೆ" ಎಂದು ಐಪಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದುವರಿದು "ವಿಲ್ ಜಾಕ್ಸ್‌ಗೆ ಬದಲಿಯಾಗಿ ಆಡಲಿರುವ ಬ್ರೇಸ್‌ವೆಲ್ 16 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದು 113 ರನ್ ಹಾಗೂ 21 ವಿಕೆಟ್ ಪಡೆದುಕೊಂಡಿದ್ದಾರೆ. ಮೂಲ ಬೆಲೆ 1 ಕೋಟಿ ಮೊತ್ತಕ್ಕೆ ಅವರು ಆರ್‌ಸಿಬಿ ತಂಡವನ್ನು ಸೇರಿಕೊಳ್ಳಲಿದ್ದಾರೆ" ಎಂದು ಮಾಹಿತಿ ನೀಡಲಾಗಿದೆ.

ಭಾರತದ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದ ಬ್ರೇಸ್‌ವೆಲ್ ಹೈದರಾಬಾದ್‌ನಲ್ಲಿ ಅಮೋಘ ಶತಕ ಸಿಡಿಸಿ ಎಲ್ಲರ ಗಮನ ಸೆಳೆದಿದ್ದರು. ಆ ಪಂದ್ಯದಲ್ಲಿ ಅವರು ಕೇವಲ 78 ಎಸೆತಗಳನ್ನು ಎದುರಿಸಿ 12 ಬೌಂಡರಿ ಹಾಗೂ 10 ಸಿಕ್ಸರ್‌ಗಳ ನೆರವಿನಿಂದ 140 ರನ್‌ಗಳಿಸಿದ್ದರು. ಅದಾದ ಬಳಿಕ ನಡೆದ ಟಿ20 ಸರಣಿಯಲ್ಲಿ ಅವರು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಮಿಂಚಿದ್ದರು. 5.77ರ ಎಕಾನಮಿಯಲ್ಲಿ ಅವರು 5 ವಿಕೆಟ್ ಪಡೆದುಕೊಂಡಿದ್ದು ಕಿವೀಸ್ ಪರವಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.

Story first published: Saturday, March 18, 2023, 13:44 [IST]
Other articles published on Mar 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+