LSG vs KKR: ಪೂರನ್ ಆಸರೆ; ಕೊಲ್ಕತ್ತಾಗೆ ಪೈಪೋಟಿಯುತ ರನ್ ಗುರಿ ನೀಡಿದ ಲಕ್ನೋ

ಕಳೆದ ಮಾರ್ಚ್ ತಿಂಗಳಾಂತ್ಯದಲ್ಲಿ ಆರಂಭಗೊಂಡ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಹಂತ ತಲುಪಿದೆ. ಇಂದು (ಮೇ 20) ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ 68ನೇ ಲೀಗ್ ಪಂದ್ಯ ಜರುಗುತ್ತಿದೆ.
ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣಾ ಫೀಲ್ಡಿಂಗ್ ಆಯ್ದುಕೊಂಡು ತಮ್ಮ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿದ್ದು, ಎದುರಾಳಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 177 ರನ್‌ಗಳ ಗುರಿಯನ್ನು ನೀಡಿದೆ.
ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕ ಆಟಗಾರರಾಗಿ ಕರಣ್ ಶರ್ಮಾ ಹಾಗೂ ಕ್ವಿಂಟನ್ ಡಿ ಕಾಕ್ ಕಣಕ್ಕಿಳಿದರು. ಕರಣ್ ಶರ್ಮಾ 5 ಎಸೆತಗಳಲ್ಲಿ 3 ರನ್ ಗಳಿಸಿ ಔಟ್ ಆದರೆ, ಕ್ವಿಂಟನ್ ಡಿ ಕಾಕ್ 28 ಎಸೆತಗಳಲ್ಲಿ 27 ರನ್ ಬಾರಿಸಿದರು. ಇನ್ನುಳಿದಂತೆ ಪ್ರೇರಕ್ ಮಂಕಡ್ 20 ಎಸೆತಗಳಲ್ಲಿ 26 ರನ್, ಮಾರ್ಕಸ್ ಸ್ಟಾಯಿನಿಸ್ ಡಕ್ಔಟ್, ನಾಯಕ ಕೃನಾಲ್ ಪಾಂಡ್ಯ 8 ಎಸೆತಗಳಲ್ಲಿ 9 ರನ್, ಆಯುಷ್ ಬದೋನಿ 21 ಎಸೆತಗಳಲ್ಲಿ 25 ರನ್, ನಿಕೋಲಸ್ ಪೂರನ್ 30 ಎಸೆತಗಳಲ್ಲಿ 58 ರನ್, ರವಿ ಬಿಷ್ಣೋಯಿ 2 ಎಸೆತಗಳಲ್ಲಿ 2 ರನ್, ಕೃಷ್ಣಪ್ಪ ಗೌತಮ್ 4 ಎಸೆತಗಳಲ್ಲಿ ಅಜೇಯ 11 ರನ್ ಹಾಗೂ ನವೀನ್ ಉಲ್ ಹಕ್ 3 ಎಸೆತಗಳಲ್ಲಿ ಅಜೇಯ 2 ರನ್ ಬಾರಿಸಿದರು.
ಇನ್ನು ಆರಂಭದಿಂದಲೇ ವಿಕೆಟ್ ಕಳೆದುಕೊಂಡು ವೇಗವಾಗಿ ರನ್ ಗಳಿಸಲಾಗದೇ ಪರದಾಡುತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆಸರೆಯಾದದ್ದು ನಿಕೋಲಸ್ ಪೂರನ್. ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೂರನ್ 30 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 58 ಬಾರಿಸಿ ತಂಡದ ರನ್ ವೇಗ ಹೆಚ್ಚುವಂತೆ ಮಾಡಿದರು.
ಕೊಲ್ಕತ್ತಾ ನೈಟ್ ರೈಡರ್ಸ್ ಪರ ಸುನಿಲ್ ನರೈನ್, ಶಾರ್ದೂಲ್ ಠಾಕೂರ್ ಹಾಗೂ ವೈಭವ್ ಅರೋರ ತಲಾ ಎರಡು ವಿಕೆಟ್ ಪಡೆದರೆ, ಹರ್ಷಿತ್ ರಾಣಾ ಹಾಗೂ ವರುಣ್ ಚಕ್ರವರ್ತಿ ತಲಾ ಒಂದು ವಿಕೆಟ್ ಪಡೆದರು.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಕಣಕ್ಕಿಳಿದಿರುವ ಆಡುವ ಬಳಗ ಈ ಕೆಳಕಂಡಂತಿದೆ..
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಕರಣ್ ಶರ್ಮಾ, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ(ನಾಯಕ), ಆಯುಷ್ ಬಡೋನಿ, ಕೃಷ್ಣಪ್ಪ ಗೌತಮ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications