IPL 2023 Opening Ceremony: ಐಪಿಎಲ್ ಉದ್ಘಾಟನಾ ಸಮಾರಂಭದ ಸಮಯ, ಟಿವಿ ವೀಕ್ಷಣೆ, ಲೈವ್ ಸ್ಟ್ರೀಮಿಂಗ್ ವಿವರ
ಭಾರತೀಯ ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷಿತ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಋತುವಿಗೆ ಕ್ಷಣಗಣನೆ ಆರಂಭವಾಗಿದ್ದು, ಅದ್ಧೂರಿ ಸಮಾರಂಭದ ಮೂಲಕ ಚಾಲನೆ ನೀಡಲಾಗುತ್ತದೆ. ಸುಮಾರು ಎರಡು ತಿಂಗಳುಗಳ ಕಾಲ ನಡೆಯುವ ಟಿ20 ಕ್ರಿಕೆಟ್ ಹಬ್ಬ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
ಶುಕ್ರವಾರ, ಮಾರ್ಚ್ 31ರ ಸಂಜೆ ಅಹಮದಾಬಾದ್‌ನ ನರೇಂದ್ರ ಸ್ಟೇಡಿಯಂನಲ್ಲಿ ನಡೆಯುವ 2023ರ ಐಪಿಎಲ್‌ನ 16ನೇ ಸೀಸನ್ ಉದ್ಘಾಟನಾ ಪಂದ್ಯದಲ್ಲಿ ಎಂಎಸ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಮೊದಲ ಪಂದ್ಯ ಆರಂಭಕ್ಕೂ ಮುನ್ನ ನಾಲ್ಕು ವರ್ಷಗಳ ಬಳಿಕ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. 2019ರಲ್ಲಿ ಪುಲ್ವಾಮಾ ದಾಳಿಯ ಕಾರಣಕ್ಕಾಗಿ ಉದ್ಘಾಟನಾ ಸಮಾರಂಭ ಕೈಬಿಡಲಾಗಿತ್ತು. 2020ರ ನಂತರ ಕೋವಿಡ್-19 ರೋಗದಿಂದಾಗಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್ ಹಾಕಲಾಗಿತ್ತು.
ಈ ಬಾರಿ ತವರಿನ ಮತ್ತು ಎದುರಾಳಿ ನೆಲದಲ್ಲಿ ಆಡುವ ಸ್ವರೂಪಕ್ಕೆ ಹಿಂದಿರುಗಿದ್ದರಿಂದ ಪ್ರೇಕ್ಷಕರನ್ನು ಮೈದಾನಕ್ಕೆ ಸೆಳೆಯಲು ಅದ್ಧೂರಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಇದರಲ್ಲಿ ಬಾಲಿವುಡ್ ಸೇರಿದಂತೆ ವಿವಿಧ ತಾರೆಗಳು ನೃತ್ಯ, ಸಂಗೀತ ಪ್ರದರ್ಶನ ನೀಡುವ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆ ನೀಡಲಿದ್ದಾರೆ.

ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ, ತಮನ್ನಾ ಭಾಟಿಯಾ ಅವರಂತಹ ಚಲನಚಿತ್ರ ತಾರೆಯರ ನೃತ್ಯ ಪ್ರದರ್ಶನದ ಮೂಲಕ ಜಗತ್ತಿನಾದ್ಯಂತದ ಕ್ರಿಕೆಟ್ ಅಭಿಮಾನಿಗಳನ್ನು ಆಕರ್ಷಿಸಲಿದ್ದಾರೆ. ಇನ್ನು ಗಾಯಕ ಮತ್ತು ಸಂಯೋಜಕ ಅರಿಜಿತ್ ಸಿಂಗ್ ಅವರು ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೂ ಮುನ್ನ ಪ್ರೇಕ್ಷಕರಿಗೆ ಸಂಗೀತ ರಸದೌತಣ ನೀಡಲಿದ್ದಾರೆ.
ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ಅವರು ಶುಕ್ರವಾರ ಸಂಜೆ 6 ಗಂಟೆಗೆ ನಡೆಯುವ ಅದ್ಧೂರಿ ಸಮಾರಂಭಕ್ಕೆ ಮೊದಲು ಗುರುವಾರ, ಮಾರ್ಚ್ 30ರಂದು ಅಂತಿಮ ತಾಲೀಮು ನಡೆಸುತ್ತಿರುವುದು ಕಂಡುಬಂದಿತು. ನಂತರ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶನ ನೀಡುವ ಅನುಭವದ ಬಗ್ಗೆ ಮಾತನಾಡಿದರು.
ಇನ್ನು ತಮ್ಮ ನೆಚ್ಚಿನ ಕ್ರಿಕೆಟಿಗರ ಬಗ್ಗೆ ಪ್ರಶ್ನೆ ಕೇಳಿದಾಗ, ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ಇಬ್ಬರೂ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರನ್ನು ಆಯ್ಕೆ ಮಾಡಿದರು.

2023ರ ಐಪಿಎಲ್ ಉದ್ಘಾಟನಾ ಸಮಾರಂಭ ಎಲ್ಲಿ ಮತ್ತು ಯಾವಾಗ?
2023ರ ಐಪಿಎಲ್ ಉದ್ಘಾಟನಾ ಸಮಾರಂಭವು ಶುಕ್ರವಾರ, ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
2023ರ ಐಪಿಎಲ್ ಉದ್ಘಾಟನಾ ಸಮಾರಂಭ ಸಮಯ?
2023ರ ಐಪಿಎಲ್ ಉದ್ಘಾಟನಾ ಸಮಾರಂಭವು ಭಾರತೀಯ ಕಾಲಮಾನ ಸಂಜೆ 6 ಗಂಟೆಗೆ ಆರಂಭವಾಗಲಿದೆ.
2023ರ ಐಪಿಎಲ್ ಉದ್ಘಾಟನಾ ಸಮಾರಂಭ ಟಿವಿ ವೀಕ್ಷಣೆ ಎಲ್ಲಿ?
2023ರ ಐಪಿಎಲ್ ಉದ್ಘಾಟನಾ ಸಮಾರಂಭ ಹಾಗೂ ಪಂದ್ಯಗಳನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರಪ್ರಸಾರವಿರಲಿದ್ದು, ಮನೆಯಲ್ಲಿ ಕುಳಿತು ವೀಕ್ಷಣೆ ಮಾಡಬಹುದು.
2023ರ ಐಪಿಎಲ್ ಉದ್ಘಾಟನಾ ಸಮಾರಂಭ ಲೈವ್ ಸ್ಟ್ರೀಮಿಂಗ್ ಹೇಗೆ?
2023ರ ಐಪಿಎಲ್ ಉದ್ಘಾಟನಾ ಸಮಾರಂಭ ಹಾಗೂ ಪಂದ್ಯಗಳನ್ನು Jio Cinema ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications