ಪಂಜಾಬ್ ಕಿಂಗ್ಸ್‌ಗೆ ಶಾಕ್ ನೀಡಿದ ಡೆಲ್ಲಿ ಕ್ಯಾಪಿಟಲ್ಸ್: ಮಹತ್ವದ ಪಂದ್ಯದಲ್ಲಿ ಸೋತ ಧವನ್ ಬಳಗ
ಇಂಡಿಯನ್ ಪ್ರೀಮಿಯರ್ ಲೀಗ್‌ನ ಅಂತಿಮ ಹಂತದ ಪಂದ್ಯದಲ್ಲಿ ಮತ್ತೊಂದು ರೋಚಕ ಸೆಣೆಸಾಟಕ್ಕೆ ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಂದು ತಂಡಕ್ಕೆ ದೊಡ್ಡ ಆಘಾತವ ನೀಡುವಲ್ಲಿ ಯಶಸ್ವಿಯಾಗಿದೆ. ಪ್ಲೇಆಫ್‌ಗೇರುವ ಸ್ಪರ್ಧೆಯಲ್ಲಿ ಮುನ್ನಡೆ ಸಾಧಿಸುವ ವಿಶ್ವಾಸದಲ್ಲಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಸೋಲಿನ ರುಚಿ ತೋರಿಸುವಲ್ಲಿ ಯಶಸ್ವಿಯಾಗಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸ್ಪೋಟಲ ಪ್ರದರ್ಶನ ನಿಡಿದ್ದು ಬರೊಬ್ಬರಿ 214 ರನ್‌ಗಳ ಗುರಿ ನಿಗದಿಪಡಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಲಿಯಾಮ್ ಲಿವಿಂಗ್ಸ್ಟನ್ ಸ್ಪೋಟಕ ಪ್ರದರ್ಶನ ನೀಡಿದರಾದರೂ ಗೆಲುವು ಸಾಧ್ಯವಾಗಲಿಲ್ಲ. ಪಂಜಾಬ್ ಕಿಂಗ್ಸ್ ಪರವಾಗಿ ಅಥರ್ವ ಟೈಡೆ 42 ಎಸೆತಗಳಲ್ಲಿ 55 ರನ್ ಬಾರಿಸಿದರೆ ಲಿಯಾಮ್ ಲಿವಿಂಗ್‌ಸ್ಟನ್ 48 ಎಸೆಗಳಲ್ಲಿ 94 ರನ್ ಬಾರಿಸಿ ಅಬ್ಬರಿಸಿದರು. ಆದರೆ ಡಿಸಿ ನೀಡಿದ ಗುರಿ ತಲುಪಲು ಸಾಧ್ಯವಾಗದೆ 198 ರನ್‌ಗೆ ತನ್ನ ಹೋರಾಟವನ್ನು ಅಂತ್ಯಗೊಳಿಸಿತು.

ಇನ್ನು ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಸೋತು ಬ್ಯಾಟಿಂಗ್ ನಡೆಸಿತು. ಡಿಸಿ ಪರವಾಗಿ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಜೋಡಿ ಈ ಪಂದ್ಯದಲ್ಲಿ ಮೊದಲ ವಿಕೆಟ್‌ಗೆ ಭರ್ಜರಿ 94 ರನ್‌ಗಳ ಜೊತೆಯಾಟ ನೀಡಿದರು. ಈ ಸಂದರ್ಭದಲ್ಲಿ 31 ಎಸೆತಗಳಲ್ಲಿ 46 ರನ್ ಸಿಡಿಸಿದ್ದ ವಾರ್ನರ್ ಶಿಖರ್ ಧವನ್ ಹಿಡಿದ ಅದ್ಭುತ ಕ್ಯಾಚ್‌ಗೆ ಬಲಿಯಾದರು. ಅದಾದ ಬಳಿಕ ಪೃಥ್ವಿ ಶಾ ಅವರನ್ನು ಸೇರಿಕೊಂಡ ರಿಲೀ ರೊಸ್ಸೋ ಮತ್ತೊಂದು ಬೃಹತ್ ಜೊತೆಯಾಟಕ್ಕೆ ಕಾರಣವಾದರು. 38 ಎಸೆತಗಳಲ್ಲಿ 54 ರನ್ ಬಾರಿಸಿದ ಪೃಥ್ವಿ ಶಾ ಕಡೆಗೂ ಫಾರ್ಮ್ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದು ಅದ್ಭುತ ಇನ್ನಿಂಗ್ಸ್ ನೀಡಿದ್ದಾರೆ.
ಇನ್ನು ಪೃಥ್ವಿ ಶಾ ವಿಕೆಟ್ ಕಳೆದುಕೊಂಡ ಬಳಿಕ ರೊಸ್ಸೋಗೆ ಸಾಲ್ಟ್ ಕೂಡ ಅದ್ಭುತವಾಗಿ ಸಾತ್ ನೀಡಿದರು. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ರೊಸ್ಸೊ ಕೇವಲ 37 ಎಸೆತಗಳಲ್ಲಿ 82 ರನ್ ಬಾರಿಸಿದ್ದಾಎ. 6 ಬೌಂಡರಿ ಹಾಗೂ 6 ಸಿಕ್ಸರ್ ಬಾರಿಸಿದ ಅವರು ತಂಡದ ಮೊತ್ತ 200ರ ಹಡಿದಾಟಲು ಕಾರಣವಾದರು. ಸಾಲ್ಟ್ ಈ ಪಂದ್ಯದಲ್ಲಿ 14 ಎಸೆತಗಳಲ್ಲಿ 26 ರನ್ ಬಾರಿಸಿದ್ದಾರೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 213 ರನ್‌ಗಳಿಸಿತು.
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ರಿಲೀ ರೊಸ್ಸೌ, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ಯಶ್ ಧುಲ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್
ಪಂಜಾಬ್ ಕಿಂಗ್ಸ್: ಶಿಖರ್ ಧವನ್(ನಾಯಕ), ಅಥರ್ವ ಟೈಡೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಸ್ಯಾಮ್ ಕರ್ರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ಅರ್ಶ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications