IPL 2023 PBKS Vs GT: ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಬೌಲಿಂಗ್ ಆಯ್ಕೆ: ಪ್ಲೇಯಿಂಗ್ 11, ಪಿಚ್ ವರದಿ
ಇಂಡಿಯನ್ ಪ್ರೀಮಿಯರ್ ಲೀಗ್ 2023ರ 18ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಕಳೆದ ಪಂದ್ಯದಲ್ಲಿ ಎರಡೂ ತಂಡಗಳು ಸೋಲನುಭವಿಸಿದ್ದು, ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿವೆ.
ಅನಾರೋಗ್ಯದ ಕಾರಣ ಕಳೆದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಪಂಜಾಬ್ ವಿರುದ್ಧ ಪಂದ್ಯಕ್ಕಾಗಿ ತಂಡಕ್ಕೆ ಮರಳಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ 29 ರನ್‌ಗಳ ಬಿಟ್ಟುಕೊಟ್ಟು ಸೋಲನುಭವಿಸಿತ್ತು. ಸೋಲಿನ ನಿರಾಸೆಯಿಂದ ಹೊರಬಂದು ಗೆಲುವಿನ ಓಟವನ್ನು ಮುಂದುವರೆಸುವ ಉತ್ಸಾಹದಲ್ಲಿದೆ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್.

ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ವಿರುದ್ಧ ಸೋಲನುಭವಿಸಿದ್ದ ಪಂಜಾಬ್ ಕಿಂಗ್ಸ್ ತವರಿನ ಅಂಗಳದಲ್ಲಿ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ. ನಾಯಕ ಶಿಖರ್ ಧವನ್ ಉತ್ತಮ ಫಾರ್ಮ್‌ನಲ್ಲಿರುವುದು ತಂಡಕ್ಕೆ ದೊಡ್ಡ ಶಕ್ತಿಯಾಗಿದೆ. ಪ್ರಭ್‌ಸಿಮ್ರನ್ ಸಿಂಗ್ ಉತ್ತಮವಾಗಿ ಜೊತೆಯಾಟ ಆಡಿದರೆ ತಂಡ ದೊಡ್ಡ ಮೊತ್ತ ಗಳಿಸಬಹುದು.
ತಂಡದ ಸ್ಫೋಟಕ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ತಂಡವನ್ನು ಸೇರಿಕೊಂಡಿದ್ದರು ಇಂದಿನ ಪಂದ್ಯದಲ್ಲಿ ಅವಕಾಶ ಪಡೆದುಕೊಂಡಿಲ್ಲ. ನಾಥನ್ ಎಲ್ಲಿಸ್ ಬದಲಾಗಿ ಕಗಿಸೊ ರಬಾಡ ಸ್ಥಾನ ಪಡೆದುಕೊಂಡಿದ್ದು, ಸಿಕಂದರ್ ರಾಜಾ ಬದಲಾಗಿ ಭಾನುಕಾ ರಾಜಪಕ್ಸ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಮೊಹಾಲಿ ಪಿಚ್ ವರದಿ
ಮೊಹಾಲಿ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ನೀಡಲಿದೆ. ಪಿಚ್‌ನಲ್ಲಿ ಹೆಚ್ಚಿನ ಬೌನ್ಸ್ ಸಿಗುವುದರಿಂದ ಚೆಂಡು ಸುಲಭವಾಗಿ ಬ್ಯಾಟ್‌ಗೆ ಬರುತ್ತದೆ, ಎರಡೂ ತಂಡಗಳಲ್ಲಿ ಸ್ಪೋಟಕ ಬ್ಯಾಟರ್ ಗಳು ಇರುವುದರಿಂದ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದು. ಪಂಜಾಬ್ ಕಿಂಗ್ಸ್ ತವರಿನಲ್ಲಿ ಆಡಿದ ಮೊದಲನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆಲುವು ಸಾಧಿಸಿದ್ದು, ಅದೇ ಪ್ರದರ್ಶನ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11
ಪ್ರಭಾಸಿಮ್ರಾನ್ ಸಿಂಗ್, ಶಿಖರ್ ಧವನ್ (ನಾಯಕ), ಮ್ಯಾಥ್ಯೂ ಶಾರ್ಟ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸ್ಯಾಮ್ ಕರ್ರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಿಷಿ ಧವನ್, ಅರ್ಷದೀಪ್ ಸಿಂಗ್.
ಗುಜರಾತ್ ಜೈಂಟ್ಸ್ ಪ್ಲೇಯಿಂಗ್ 11
ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶುವಾ ಲಿಟಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications