ಮೋಹಾಲಿಯಲ್ಲಿ ರನ್ ಮೇಘಸ್ಟೋಟ: ರಾಹುಲ್ ಪಡೆಗೆ 56 ರನ್‌ಗಳ ಗೆಲುವು
ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯ ರನ್ ಮಳೆಯೇ ಹರಿದಿದೆ. ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಪಂದ್ಯದಲ್ಲಿ ದಾಖಲೆಯ ರನ್ ಪೇರಿಸಿದ್ದು ಐಪಿಎಲ್ ಇತಿಹಾಸದ 2ನೇ ಅತಿ ಹೆಚ್ಚು ರನ್ ಕಲೆ ಹಾಕಿತು. ಈ ಹೈಸ್ಕೋರಿಂಗ್ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ 56 ರನ್‌ಗಳ ಅಂತರದ ಬೃಹತ್ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ ಬೃಹತ್ ಮೊತ್ತದ ಗುರಿಯನ್ನು ನೀಡಿದ್ದರೂ ಪಂಜಾಬ್ ಕಿಂಗ್ಸ್ ತಂಡ ತನ್ನ ಪ್ರಯತ್ನವನ್ನು ಕೈಚೆಲ್ಲಲಿಲ್ಲ. ತವರಿನ ಅಂಗಳದಲ್ಲಿ ಈ ಪಂದ್ಯದ ಅಂತಿಮ ಹಂತದವರೆಗೂ ಪಂಜಾಬ್ಕಿಂಗ್ಸ್ ತಂಡ ಹೋರಾಟ ನೀಡುವಲ್ಲಿ ಯಶಸ್ವಿಯಾಯಿತು. ಅದರ ಪರಿಣಾಮವಾಗಿ ದಾಖಲೆಯ ಗುರಿ ಮುಂದಿದ್ದರೂ ಪಂಜಾಬ್ ಕಿಂಗ್ಸ್ ತಂಡ 201 ರನ್‌ಗಳಿಸಿ ಶರಣಾಗಿದೆ. ಪಂಜಾಬ್ ಕಿಂಗ್ಸ್ ಪರವಾಗಿ ಅಥರ್ವ ಟೈಡೆ ನೀಡಿದ ಬ್ಯಾಟಿಂಗ್ ಪ್ರದರ್ಶನ ಗಮನ ಸೆಳೆದಿದೆ.

ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ ಬರೊಬ್ಬರಿ 257 ರನ್‌ಗಳನ್ನು ಕಲೆ ಹಾಕಿತು. ಈ ಪಂದ್ಯದಲ್ಲಿ ನಾಯಕ ಕೆಎಲ್ ರಾಹುಲ್ ಹೊರತುಪಡಿಸಿದರೆ ಉಳಿದೆಲ್ಲಾ ಆಟಗಾರರು ಕೂಡ ರನ್ ಮಳೆ ಹರಿಸುವಲ್ಲಿ ಯಶಸ್ವಿಯಾದರು. ರಾಹುಲ್ 9 ಎಸೆತಗಳಲ್ಲಿ 12 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ನಂತರ ಕೇಲ್ ಮೇಯರ್ಸ್ ತಮ್ಮ ಸ್ಪೋಟಕ ಆಟವನ್ನು ಶುರು ಮಾಡಿದರು. ಅವರಿಗೆ ಆಯುಶ್ ಬದೋನಿಯಿಂದ ಅದ್ಭುತ ಜೊತೆಯಾಟ ದೊರೆಯಿತು. ಮೇಯರ್ಸ್ ಕೇವಲ 24 ಎಸೆಗಳಲ್ಲಿ 54 ರನ್‌ಗಳಿಸಿದರೆ ಆಯುಶ್ ಬದೋನಿ 24 ಎಸೆತಗಳಲ್ಲಿ 43 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು.
ನಂತರ ಮಾರ್ಕಸ್ ಸ್ಟೋಯ್ನಿಸ್ ಅಬ್ಬರಿಸಲು ಆರಂಭಿಸಿದರು. ಮತ್ತೊಂದು ತುದಿಯಲ್ಲಿ ನೊಕೋಲಸ್ ಪೂರನ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಮಾರ್ಕಸ್ ಸ್ಟೋಯ್ನಿಸ್ ಈ ಪಂದ್ಯದಲ್ಲಿ 40 ಎಸೆತಗಳಲ್ಲಿ 72 ರನ್ ಬಾರಿಸಿದರೆ ಪೂರನ್ 19 ಎಸೆತಗಳಲ್ಲಿ 45 ರನ್ ಬಾರಿಸಿದರು. ಅಂತಿಮವಾಗಿ ಕ್ರೀಸ್ನಲ್ಲುಳಿದ ದೀಪಕ್ ಹೂಡಾ 11 ರನ್ ಹಾಗೂ ಕೃನಾಲ್ ಪಾಂಡ್ಯ 5 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಮಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡ 257 ರನ್‌ಗಳನ್ನು ಕಲೆಹಾಕಿತು.
ಪಂಜಾಬ್ ಕಿಂಗ್ಸ: ಅಥರ್ವ ಟೈಡೆ, ಶಿಖರ್ ಧವನ್ (ನಾಯಕ), ಸಿಕಂದರ್ ರಜಾ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಜಿತೇಶ್ ಶರ್ಮಾ (ವಿಕೆ), ಶಾರುಖ್ ಖಾನ್, ಕಗಿಸೊ ರಬಾಡ, ರಾಹುಲ್ ಚಾಹರ್, ಗುರ್ನೂರ್ ಬ್ರಾರ್, ಅರ್ಶ್‌ದೀಪ್ ಸಿಂಗ್
ಬೆಂಚ್: ಪ್ರಭಾಸಿಮ್ರಾನ್ ಸಿಂಗ್, ಮೋಹಿತ್ ರಥಿ, ರಿಷಿ ಧವನ್, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಶಿವಂ ಸಿಂಗ್, ಭಾನುಕಾ ರಾಜಪಕ್ಸೆ, ವಿಧ್ವತ್ ಕಾವೇರಪ್ಪ, ಬಲ್ತೇಜ್ ಸಿಂಗ್, ಹರ್‌ಪ್ರೀತ್ ಸಿಂಗ್ ಭಾಟಿಯಾ
ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ಸಿ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆ), ಆಯುಷ್ ಬಡೋನಿ, ನವೀನ್-ಉಲ್-ಹಕ್, ರವಿ ಬಿಷ್ಣೋಯ್, ಅವೇಶ್ ಖಾನ್, ಯಶ್ ಠಾಕೂರ್
ಬೆಂಚ್: ಕೃಷ್ಣಪ್ಪ ಗೌತಮ್, ಡೇನಿಯಲ್ ಸಾಮ್ಸ್, ಪ್ರೇರಕ್ ಮಂಕಡ್, ಅಮಿತ್ ಮಿಶ್ರಾ, ಮಾರ್ಕ್ ವುಡ್, ಜಯದೇವ್ ಉನದ್ಕತ್, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಸ್ವಪ್ನಿಲ್ ಸಿಂಗ್, ರೊಮಾರಿಯೋ ಶೆಫರ್ಡ್, ಅರ್ಪಿತ್ ಗುಲೇರಿಯಾ, ಯುಧ್ವೀರ್ ಸಿಂಗ್ ಚರಕ್, ಕರಣ್ ಶರ್ಮಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications