IPL 2023: ಸೋತ ಆರ್‌ಸಿಬಿ, ಪ್ಲೇಆಫ್‌ಗೆ ಮುಂಬೈ; ಹೀಗಿದೆ ಕ್ವಾಲಿಫೈಯರ್, ಎಲಿಮಿನೇಟರ್ ವೇಳಾಪಟ್ಟಿ

ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ನಿನ್ನೆ ( ಮೇ 21 ) ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಮುಕ್ತಾಯವಾಗಿದೆ.
ಇನ್ನು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 6 ವಿಕೆಟ್ ಜಯ ಸಾಧಿಸಿದ ಕಾರಣ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್ ಪ್ರವೇಶಿಸಲಾಗದೇ ಟೂರ್ನಿಯಿಂದ ಹೊರಬಿದ್ದಿದೆ.
ಅತ್ತ ಇದಕ್ಕೂ ಮುನ್ನ ಅದೇ ದಿನ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್ ಪ್ಲೇಆಫ್ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ಸರಿ ಸಮನಾದ ಅಂಕಗಳನ್ನು ಹೊಂದಿದ್ದರಿಂದ ನಿನ್ನೆ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದ್ದರೆ ಹೆಚ್ಚಿನ ನೆಟ್ ರನ್ ರೇಟ್ ಹೊಂದಿದ್ದ ಕಾರಣ ಪ್ಲೇಆಫ್ ಪ್ರವೇಶಿಸುವ ಅವಕಾಶವಿತ್ತು.
ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋತ ಕಾರಣ ಇದೀಗ ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಬಳಿಕ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶ ಮಾಡಿದೆ. ಹೀಗೆ ಲೀಗ್ ಹಂತದ ಅಂತಿಮ ಪಂದ್ಯಗಳು ಮುಕ್ತಾಯವಾದ ಬಳಿಕ ಟಾಪ್ 4 ಸ್ಥಾನಗಳು ಯಾರ ಪಾಲಾಯಿತು ಹಾಗೂ ಕ್ವಾಲಿಫಯರ್ ಯಾವ ತಂಡಗಳ ನಡುವೆ ನಡೆಯಲಿದೆ ಮತ್ತು ಎಲಿಮಿನೇಟರ್ ಯಾವ ತಂಡಗಳ ನಡುವೆ ನಡೆಯಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
20 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದು, 17 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಸ್ಥಾನದಲ್ಲಿದೆ. ಹೀಗೆ ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕ್ವಾಲಿಫಯರ್ ಆಡಲಿವೆ. ಈ ಪಂದ್ಯ ನಾಳೆ ( ಮೇ 23 ) ಚೆನ್ನೈನ ಎಂ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.
ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ಪ್ರವೇಶ ಮಾಡಿದರೆ, ಸೋಲುವ ತಂಡ ಎರಡನೇ ಕ್ವಾಲಿಫಯರ್ ಪಂದ್ಯವನ್ನು ಆಡಲಿದ್ದು, ಅಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದು ಬರುವ ತಂಡದ ಜತೆ ಸೆಣಸಾಡಲಿದೆ.
ಇನ್ನು 17 ಅಂಕಗಳನ್ನು ಹೊಂದಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ 16 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ಈ ಪಂದ್ಯ ಮೇ 24ರ ಬುಧವಾರದಂದು ಸಂಜೆ 7.30ಕ್ಕೆ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಗೆಲ್ಲುವ ತಂಡ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಸಾಗಲಿದ್ದು, ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications