
ನಿನ್ನೆ ( ಮೇ 20 ) ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡು ಪಂದ್ಯಗಳು ಜರುಗಿದವು. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾದವು ಹಾಗೂ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾದವು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಆಕ್ರಮಿಸಿಕೊಂಡು ಪ್ಲೇಆಫ್ ತಲುಪಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 1 ರನ್‌ನ ರೋಚಕ ಗೆಲುವು ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ ಸಹ ಮೂರನೇ ಸ್ಥಾನ ಪಡೆದುಕೊಂಡು ಪ್ಲೇಆಫ್ ತಲುಪಿದೆ.
ಇನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ಕೊಲ್ಕತ್ತಾ ನೈಟ್ ರೈಡರ್ಸ್ ಟೂರ್ನಿಯಿಂದ ಹೊರಬಿದ್ದಿದೆ. ಹೀಗೆ ಟೂರ್ನಿಯ ಕೊನೆಯ ದಿನದಂದು ಯಾವ ತಂಡಕ್ಕೆ ಪ್ಲೇಆಫ್ ಪ್ರವೇಶಿಸಲು ಮಾರ್ಗ ಹೇಗಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈಗಾಗಲೇ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ. ತನ್ನ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಗುಜರಾತ್ ಕಣಕ್ಕಿಳಿಯಲಿದ್ದು, ಈ ಪಂದ್ಯದಲ್ಲಿ ಸೋತರೂ ಸಹ ಟಾಪ್ 2 ಸ್ಥಾನ ಗುಜರಾತ್‌ಗೆ ಲಭಿಸುವುದು ಪಕ್ಕಾ.
2. 14 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 17 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಗುಜರಾತ್ ಜತೆ ಕ್ವಾಲಿಫೈಯ್ ಆಡಲು ಅರ್ಹತೆ ಪಡೆದುಕೊಂಡಿದೆ.
3. 14 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 17 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದು, ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ.
4. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಕಡ್ಡಾಯವಾಗಿ ಗೆಲ್ಲಲೇಬೇಕಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತುಸು ಹೆಚ್ಚು ಅಂತರದಲ್ಲಿ ಗೆದ್ದರೆ ಸುಲಭವಾಗಿ ಪ್ಲೇಆಫ್ ತಲುಪಲಿದೆ.
5. 14 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಂದಿನ ಪಂದ್ಯಗಳಲ್ಲಿ ಸೋತು ರಾಜಸ್ಥಾನ್ ರಾಯಲ್ಸ್ ತಂಡಕ್ಕಿಂತ ಕಡಿಮೆ ನೆಟ್ ರನ್ ರೇಟ್ ಪಡೆದರೆ, ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ಪ್ರವೇಶಿಸಲಿದೆ.
6. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಿಂತ ಹೆಚ್ಚಿನ ನೆಟ್ ರನ್ ರೇಟ್ ಪಡೆದರೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ಪ್ರವೇಶಿಸಲಿದೆ.
7. 14 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಉಳಿದೊಂದು ಪಂದ್ಯವನ್ನು ಗೆದ್ದರೂ 14 ಅಂಕಗಳಾಗಲಿದ್ದು, ಪ್ಲೇಆಫ್ ಅವಕಾಶ ಕೈತಪ್ಪಲಿದೆ.
8. 14 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಟೂರ್ನಿಯಿಂದ ಹೊರಬಿದ್ದಿದೆ.
9. 14 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ.
10. 13 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 9 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಈಗಾಗಲೇ ತಂಡ ಪ್ಲೇಫ್ ರೇಸ್‌ನಿಂದ ಹೊರಬಿದ್ದಿದೆ.